ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್, ಧನು, ಈಶ್ವರ್, ಪರಮೇಶ್ವರ್, ನಿತಿನ್ನನ್ನು ಬಂಧಿತರು. ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ವರುಣ್ಗೆ ಚಾಕು ಇರಿದು ಕಬಾಬ್ ಮೂರ್ತಿ ಎಂಬಾತ ಪರಾರಿಯಾಗಿದ್ದ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿತ್ತು.
ಶನಿವಾರ ರಾತ್ರಿ ಕಾಂಗ್ರೆಸ್ ಶಾಸಕ ಶ್ರೀನಿವಾಸ್ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಸಮಾರಂಭದಲ್ಲಿ ಆರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಬಾಬ್ ಮೂರ್ತಿ ಹಾಗೂ ವರುಣ್ ಎಂಬುವವರ ಮಧ್ಯೆ ಗಲಾಟೆಯಾಗಿದೆ.
ಇದನ್ನೂ ಓದಿ: ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿದ ‘ಕಿಂಗ್ ಕೊಹ್ಲಿ’
ಈ ವೇಳೆ ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ ವರುಣ್ಗೆ ಡ್ರ್ಯಾಗರ್ನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವೇಳೆ ಮಂಜು ಹಾಗೂ ಸಂಜು ಎಂಬಿಬ್ಬರ ಕೈ ಹಾಗೂ ಕಾಲಿಗೆ ಗಾಯಗಳಾಗಿದೆ. ಬಳಿಕ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಲಾರ: ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಮುರುಗೇಶ್ಗೆ 30 ವರ್ಷ ಜೈಲುಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ದೇವೆಮಾನೆ ಅವರು ಆದೇಶಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ವ್ಯಕ್ತಿ ಕೊಲೆ; ಕಾರಣ ಇಲ್ಲಿದೆ ನೋಡಿ
Published On - 3:00 pm, Sun, 4 June 23