ಪುತ್ರನ ಸಾವಿನ ದು:ಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಸಾವನ್ನಪ್ಪಿದ್ದಾನೆ. ಇತ್ತ ಮಗನ ಸಾವಿನ ದುಃಖದಲ್ಲೂ ಪೋಕಷರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮರೆದಿದ್ದಾರೆ.

ಪುತ್ರನ ಸಾವಿನ ದು:ಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
ಅಪಘಾತದಲ್ಲಿ ಸಾವನ್ನಪ್ಪಿದ ಧನ್ಯ ಕುಮಾರ್
Edited By:

Updated on: Dec 12, 2022 | 11:33 AM

ಚಿಕ್ಕಮಗಳೂರು: ಅಪಘಾತ (Accident)ಕ್ಕೀಡಾಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್​ ಅವರನ್ನು ವೈದ್ಯರು ಬದುಕಿಸಲು ಎಷ್ಟೇ ಪ್ರಯತ್ನ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇತ್ತ ಮಗನನ್ನು ಕಳೆದುಕೊಂಡ ದುಃಖದಲ್ಲೇ ಪೋಷಕರು ಮಗನ ಅಂಗಾಂಗಗಳನ್ನು ದಾನ (Organs Donate) ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯ (Brain Dead)ಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಕಷರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನೂ ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಧನ್ಯ ಕುಮಾರ್(37) ಎಂಬುವರು ಬೈಕ್​ನಲ್ಲಿ ಹೋಗುತ್ತಿದ್ದಾಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಧನ್ಯಕುಮಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಲಾಯಿತು. ಆದರೆ ತಲೆಗೆ ಗಂಭೀರವಾಗಿ ಏಟು ಬಿದ್ದ ಹಿನ್ನೆಲೆ ಧನ್ಯ ಅವರ ಮೆದುಳು ನಿಷ್ಕ್ರಿಯಗೊಂಡಿದೆ. ನಾವು ಎಷ್ಟೇ ಪ್ರಯತ್ನಪಟ್ಟರೂ ಅವರನ್ನು ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯ ಧನ್ಯ ಅವರ ಇತರೆ ಅಂಗಾಂಗಗಳು ಸುರಕ್ಷಿತವಾಗಿರುವ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ. ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಧನ್ಯಕುಮಾರ್ ಅವರು ತಮ್ಮ 4 ವರ್ಷದ ಮಗಳು, ಪತ್ನಿ ಹಾಗೂ ತಂದೆ-ತಾಯಿಯನ್ನ ಅಗಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:32 am, Mon, 12 December 22