AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು; ಎರಡೂ ಕಣ್ಣು ಕಾಣದ ಕಾಡುಕೋಣದ ರಕ್ಷಣೆ

ಸ್ಥಳೀಯ ಕಾಫಿ ತೋಟಗಳ ಮಾಲೀಕರ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ವನ್ಯಜೀವಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಯವರ ಅನುಮತಿ ಪಡೆದುಕೊಂಡು ಕುರುಡು ಕಾಟಿಯನ್ನು ರಕ್ಷಣೆ ಮಾಡಲಾಗಿದೆ.

ಚಿಕ್ಕಮಗಳೂರು; ಎರಡೂ ಕಣ್ಣು ಕಾಣದ ಕಾಡುಕೋಣದ ರಕ್ಷಣೆ
ಕಾಡುಕೋಣದ ರಕ್ಷಣೆ
TV9 Web
| Edited By: |

Updated on:Sep 25, 2021 | 11:06 PM

Share

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ವಲಯದ ಸತ್ತಿಹಳ್ಳಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಸ್ಥಳೀಯ ಕಾಫಿತೋಟಗಳಲ್ಲಿ ಎರಡೂ ಕಣ್ಣು ಕಾಣದೇ ಅಲೆದಾಡುತ್ತಿದ್ದ ಬೃಹತ್ ಕಾಟಿಯನ್ನು (ಕಾಡುಕೋಣ) ರಕ್ಷಣೆ ಮಾಡಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ. ಕಾಫಿ ತೋಟಗಳಲ್ಲಿ ಮೊಕ್ಕಾಂ ಹೂಡಿದರೆ ಬೇಟೆಗಾರರ ಆಹಾರ ಆಗಬಹುದು ಎಂದು ಕುರುಡು ಕಾಡುಕೋಣವನ್ನು ಸೆರೆ ಹಿಡಿಯುವಂತೆ ಆಗ್ರಹ ಕೇಳಿಬಂದಿತ್ತು. ಸ್ಥಳೀಯ ಕಾಫಿ ತೋಟಗಳ ಮಾಲೀಕರ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ವನ್ಯಜೀವಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಯವರ ಅನುಮತಿ ಪಡೆದುಕೊಂಡು ಕುರುಡು ಕಾಟಿಯನ್ನು ರಕ್ಷಣೆ ಮಾಡಲಾಗಿದೆ.

ಶಿವಮೊಗ್ಗ ಸಿಂಹ ಧಾಮದ ನುರಿತ ವನ್ಯಜೀವಿ ವೈದ್ಯ ಸುಜಿತ್ ಹಾಗೂ ಭದ್ರಾ ವನ್ಯಜೀವಿ ವೈದ್ಯ ಯಶಸ್ ಒಡೆಯರ್ ತಂಡ ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದು ನೀಡಿ ಕಾಡುಕೋಣ ರಕ್ಷಣೆ ಮಾಡಿದರು. ಕಾಫಿ ತೋಟದಲ್ಲಿ ರಕ್ಷಣೆ ಮಾಡಿದ ಕಾಟಿಯನ್ನ ರೆಸ್ಕ್ಯೂ ಕಂಟೈನರ್ ಮೂಲಕ ಲಾರಿಯಲ್ಲಿ ತೆಗೆದುಕೊಂಡು ಹೋಗಿ ಮರಳಿ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ, ಗೌರವ ವನ್ಯಜೀವಿ ಪರಿಪಾಲಕ ವೀರೇಶ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಚಾರ್ಮಾಡಿ ಘಾಟ್​ನ ಆಲೇಖಾನ್ ಬಳಿ ತೈಲ ಸಾಗಿಸುತ್ತಿದ್ದ ಲಾರಿ ಪಲ್ಟಿ; ಆತಂಕದ ವಾತಾವರಣ ಸೃಷ್ಟಿ ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನ ಆಲೇಖಾನ್ ಬಳಿ 8 ಸಾವಿರ ಲೀಟರ್ ಪೆಟ್ರೋಲ್, 4 ಸಾವಿರ ಲೀಟರ್ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್​ ಒಂದು ಪಲ್ಟಿಯಾಗಿದೆ. ಟ್ಯಾಂಕರ್ ಮಂಗಳೂರಿನಿಂದ ಮಾಗುಂಡಿಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಪಲ್ಟಿಯಾದ ಟ್ಯಾಂಕರ್​ನಿಂದ ತೈಲ ಸೋರಿಕೆಯಾಗುತ್ತಿದ್ದು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಣಕಲ್ ಠಾಣೆಯ ಪೋಲಿಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾರಂಭಿಸಿದ್ದಾರೆ.

ಇದನ್ನೂ ಓದಿ:  

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ಅಮೆರಿಕದ ಗುಪ್ತಚರ ಇಲಾಖೆ ಅಧಿಕಾರಿಯಲ್ಲಿ ಕಾಣಿಸಿಕೊಂಡಿರುವ ಹವಾನಾ ಸಿಂಡ್ರೋಮ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ

(Chikkamagaluru rescue of blind Indian bison)

Published On - 10:38 pm, Sat, 25 September 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?