ಚಿಕ್ಕಮಗಳೂರು: ನೇಣು ಬಿಗಿದುಕೊಂಡು ಸರ್ವೆ ಅಧಿಕಾರಿ ಆತ್ಮಹತ್ಯೆಗೆ ಶರಣು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಓರ್ವ ಸರ್ವೆ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ಹೊಸ ಸಿಮ್ ಕಾರ್ಡ್ ಖರೀದಿಸಿದ್ದರು ಎಂಬುದು ಅನುಮಾನಕ್ಕೆ ಕಾರಣವಾಗಿದೆ. ಮೂಡಿಗೆರೆ ಪೊಲೀಸರು ಈ ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು, ಫೆಬ್ರವರಿ 13: ನೇಣು ಬಿಗಿದುಕೊಂಡು ಸರ್ವೆ ಅಧಿಕಾರಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ಗುಬ್ಬಿ ಮೂಲದ ಶಿವಕುಮಾರ್ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮೃತ ಶಿವಕುಮಾರ್ ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕನಾಗಿದ್ದರು. ನಿನ್ನೆಯಷ್ಟೇ ಹೊಸ ಸಿಮ್ ಖರೀದಿ ಮಾಡಿದ್ದಶಿವಕುಮಾರ್, 10 ವರ್ಷಗಳಿಂದ ಬಳಸುತ್ತಿದ್ದ ಸಿಮ್ ಚೇಂಜ್ ಮಾಡಿದ್ದರು. ಸದ್ಯ ಸರ್ವೆ ಅಧಿಕಾರಿಯ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಮನೆ ಬಳಿ ಯಾರನ್ನೂ ಬಿಡದೆ ಬ್ಯಾರಿಕೇಡ್ ಹಾಕಿದ್ದು, ಆತ್ಮಹತ್ಯೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಜಮೀನೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
ಜಮೀನೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವಂತಹ ಘಟನೆ ಕಲಬುರಗಿ ತಾಲೂಕಿನ ಬಸವನ ತಾಂಡಾದಲ್ಲಿ ನಡೆದಿದೆ. ನಾರಾಯಣ್ ರಾಠೋಡ್(54) ಮೃತ ವ್ಯಕ್ತಿ. ದೀಪಾವಳಿ ಹಬ್ಬದಲ್ಲಿ ನಾರಾಯಣ್ ಮತ್ತು ಅಮರನಾಥ್ ಕುಟುಂಬದ ಮಧ್ಯೆ ಗಲಾಟೆ ಮಾಡಲಾಗಿದೆ.
ಇದನ್ನೂ ಓದಿ: ಸ್ವಲ್ಪ ಯಾಮಾರಿದ್ರೆ ಪೊಲೀಸರ ಹೆಣಗಳು ಬೀಳುತ್ತಿದ್ದವು: ಎಫ್ಐಆರ್ನಲ್ಲಿ ಸ್ಫೋಟಕ ಅಂಶ ಉಲ್ಲೇಖ
ಈ ಕಾರಣಕ್ಕೆ ನೊಂದು ನಾರಾಯಣ್ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಅಮರನಾಥ್, ಶಿವಾಜಿ, ರಾಮಚಂದ್ರ ಮೇಲೆ ಕೊಲೆ ಆರೋಪ ಕೇಳಿಬಂದಿದೆ. ಫರಹತಾಬಾದ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕ್ರೂಸರ್ ವಾಹನ ಪಲ್ಟಿಯಾಗಿ ಓರ್ವ ಸಾವು: ಐವರಿಗೆ ಗಾಯ
ಕ್ರೂಸರ್ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿರುವಂತಹ ಘಟನೆ ಕಲಬುರಗಿ ತಾಲೂಕಿನ ಕೆಸರಟಗಿ ಬಳಿ ನಡೆದಿದೆ. ಸೂರ್ಯಕಾಂತ್(49) ಮೃತ ವ್ಯಕ್ತಿ. ಮರ್ತೂರು ಗ್ರಾಮದಿಂದ ಕಲಬುರಗಿಗೆ ಕ್ರೂಸರ್ ಬರುತ್ತಿತ್ತು. ಗಾಯಾಳುಗಳಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಲಬುರಗಿ ಸಂಚಾರಿ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.