ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾವು

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಯುವಕರು ಗಣೇಶನ ವಿಗ್ರಹ ತರಲು ಟಾಟಾ ಏಸ್​ನಲ್ಲಿ ತೆರಳುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾವು
ಅಪಘಾತದಲ್ಲಿ ಯುವಕ ಸಾವು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Sep 07, 2024 | 11:12 AM

ಚಿಕ್ಕಮಗಳೂರು, ಸೆಪ್ಟೆಂಬರ್​ 07: ಗಣೇಶ (Ganesha) ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಗೌರಿ ಹಬ್ಬದ ದಿನದಂದೇ ಕರ್ನಾಟಕದಲ್ಲಿ ರಸ್ತೆ ಅಪಘಾತದಲ್ಲಿ 12 ಸಾವು

ಕಾರು ಡಿಕ್ಕಿಯಾಗಿ ಆಟೋ ಚಾಲಕ ಸಾವು

ಬೆಂಗಳೂರು: ಕಾರು ಡಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟಿರುವ ಘಟನೆ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್ (32) ಮೃತ ದುರ್ದೈವಿ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಕಾರು ಮುದ್ದಿನಪಾಳ್ಯ ಕಡೆಯಿಂದ ದೀಪಾ ಕಾಂಪ್ಲೆಕ್ಸ್ ಕಡೆ ತೆರಳುತ್ತಿತ್ತು. ಎದುರಿಗೆ ಬರುತ್ತಿದ್ದ ಆಟೋಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದೆ.

ಇಬ್ಬರು ಚಾಲಕರನ್ನು ಸ್ಥಳೀಯರು ಆಸ್ಪತ್ರಗೆ ದಾಖಲಿಸಿದ್ದರು. ಆದರೆ, ಚಿಕತ್ಸೆ ಫಲಿಸದೆ ಆಟೋ ಚಾಲಕ ಕಿರಣ್ ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಕಾರು ಚಾಲಕ ಗುರುರಾಘವೇಂದ್ರ ವಿರುದ್ಧ ಜ್ಞಾನಭಾರತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ