ಚಿಕ್ಕಮಗಳೂರು, ಸೆಪ್ಟೆಂಬರ್ 07: ಗಣೇಶ (Ganesha) ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತ ಯುವಕರು. ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.
ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಯುವಕರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಗೌರಿ ಹಬ್ಬದ ದಿನದಂದೇ ಕರ್ನಾಟಕದಲ್ಲಿ ರಸ್ತೆ ಅಪಘಾತದಲ್ಲಿ 12 ಸಾವು
ಬೆಂಗಳೂರು: ಕಾರು ಡಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟಿರುವ ಘಟನೆ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್ (32) ಮೃತ ದುರ್ದೈವಿ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಕಾರು ಮುದ್ದಿನಪಾಳ್ಯ ಕಡೆಯಿಂದ ದೀಪಾ ಕಾಂಪ್ಲೆಕ್ಸ್ ಕಡೆ ತೆರಳುತ್ತಿತ್ತು. ಎದುರಿಗೆ ಬರುತ್ತಿದ್ದ ಆಟೋಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದೆ.
ಇಬ್ಬರು ಚಾಲಕರನ್ನು ಸ್ಥಳೀಯರು ಆಸ್ಪತ್ರಗೆ ದಾಖಲಿಸಿದ್ದರು. ಆದರೆ, ಚಿಕತ್ಸೆ ಫಲಿಸದೆ ಆಟೋ ಚಾಲಕ ಕಿರಣ್ ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಕಾರು ಚಾಲಕ ಗುರುರಾಘವೇಂದ್ರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ