AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ವಿಚಿತ್ರ ಘಟನೆ: ಗೂಗಲ್​ನಲ್ಲಿ ಕ್ಲಾಸ್ ತೆಗೆದುಕೊಂಡು ಕಳ್ಳತನಕ್ಕೆ ಇಳಿದವರು ಅರೆಸ್ಟ್​

ಚಿಕ್ಕಮಗಳೂರಿನಲ್ಲಿ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹಬ್ಬದ ಖರ್ಚಿಗೆ ಹಣವಿಲ್ಲವೆಂದು ಖತರ್ನಾಕ್ ಗ್ಯಾಂಗ್​ವೊಂದು ಸರಗಳ್ಳತನಕ್ಕೆ ಇಳಿದಿದೆ. ಅದಕ್ಕೂ ಮೊದಲು ಕಳ್ಳತನ ಮಾಡುವುದು ಹೇಗೆ ಎಂದು ಗೂಗಲ್​ನಲ್ಲಿ ಸರ್ಚ್ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಆದರೆ ಮಹಿಳೆಯರ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದ ಮೂವರು ಕಳ್ಳರು ಇದೀಗ ಅರೆಸ್ಟ್​ ಆಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ವಿಚಿತ್ರ ಘಟನೆ: ಗೂಗಲ್​ನಲ್ಲಿ ಕ್ಲಾಸ್ ತೆಗೆದುಕೊಂಡು ಕಳ್ಳತನಕ್ಕೆ ಇಳಿದವರು ಅರೆಸ್ಟ್​
ಬಂಧಿತರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 10, 2025 | 2:25 PM

Share

ಚಿಕ್ಕಮಗಳೂರು, ಜುಲೈ 10: ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಗೂಗಲ್​ನಲ್ಲಿ (Google) ಕಳ್ಳತನ (theft) ಮಾಡುವುದು ಹೇಗೆಂದು ಸರ್ಚ್​​ ಮಾಡಿ ಬಳಿಕ ಖದೀಮರು ಕಳ್ಳತನಕ್ಕೆ ಇಳಿದಿರುವಂತಹ ವಿಭಿನ್ನ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಒಂದೇ ‌ದಿನ‌ ಮೂರು ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮೂವರ ಖತರ್ನಾಕ್ ಗ್ಯಾಂಗ್​​ ಅನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಬೀರೂರು ಠಾಣೆಯ ಪೊಲೀಸರಿಂದ ಬೆಳಗಾವಿ ಜಿಲ್ಲೆಯ ಯವಕನಮರಡಿ ಗ್ರಾಮದ ಕಲ್ಲೇಶ್, ರಾಜು ಮತ್ತು ಬಸವರಾಜ್​​ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತ ಮೂವರಿಂದ 68 ಗ್ರಾಂ ಚಿನ್ನ ಮತ್ತು ಬೈಕ್ ವಶಕ್ಕೆ ಪಡೆಯಲಾಗಿದೆ.

ಗೂಗಲ್​ನಿಂದ ಮಾಹಿತಿ ಪಡೆದು ಕಳ್ಳತನ

ಕಡೂರಿಗೆ ಕೆಲಸಕ್ಕೆ ಬಂದಿದ್ದ ಈ ಮೂವರು, ಹಬ್ಬದ ಖರ್ಚಿಗೆ ಹಣವಿಲ್ಲ ಎಂದು ಸರಗಳ್ಳತನಕ್ಕೆ ನಿರ್ಧರಿಸಿದ್ದಾರೆ. ಹಾಗಾಗಿ ಕಳ್ಳತನ ಮಾಡುವುದು ಹೇಗೆ, ಬಳಿಕ ಗುರುತು ಸಿಗದಂತೆ ಎಸ್ಕೇಪ್ ಆಗುವುದು ಹೇಗೆ ಎಂದು ಗೂಗಲ್​​ನಲ್ಲಿ ಸರ್ಚ್​​ ಮಾಡಿ ಮಾಹಿತಿ ಪಡೆದು, ಅದರಂತೆ ಪ್ಲ್ಯಾನ್​ ಕೂಡ ಮಾಡಿದ್ದಾರೆ.

ಇದನ್ನೂ ಓದಿ
Image
ಮೊರಾರ್ಜಿ‌ ಶಾಲೆಯಲ್ಲಿ ವಿದ್ಯಾರ್ಥಿನಿಯರು ಸಾವು: ಪ್ರಾಂಶುಪಾಲೆ ಅಮಾನತು
Image
ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ. ವಂಚನೆ, ಮಹಿಳೆ ಅರೆಸ್ಟ್!
Image
ಕರ್ನಾಟಕದಲ್ಲಿ ಮುಂದುವರೆದ ಹೃದಯಾಘಾತ: ಇಂದು ಒಂದೇ ದಿನ 8 ಜನ ಸಾವು
Image
ASI ಕಿರುಕುಳ ಆರೋಪ: ಎಸ್​ಪಿ ಕಚೇರಿ ಎದುರು ವಿಷಸೇವಿಸಿದ ವ್ಯಕ್ತಿ

ಇದನ್ನೂ ಓದಿ: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: 20ಕ್ಕೂ ಹೆಚ್ಚು ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್

ಮಹಿಳೆಯರನ್ನು ಟಾರ್ಗೆಟ್ ಮಾಡಿದ ಗ್ಯಾಂಗ್​​, ಕಣ್ಣಿಗೆ ಕಾರದಪುಡಿ ಎರಚಿ ಮಾಂಗಲ್ಯ ಸರ ಕಸಿದು ಪಲ್ಸರ್​​ ಬೈಕ್​ನಲ್ಲಿ ಪರಾರಿ ಆಗಿದ್ದಾರೆ. ಕಡೂರು, ಬೀರೂರು ಮತ್ತು ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ‌ದಿನ‌, ಒಂದು‌ ಗಂಟೆಯಲ್ಲಿ ಮೂರು ಕಡೆ, ಮೂರು ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಅಮಾನವೀಯ ಘಟನೆ: ದೆವ್ವ ಬಿಡಿಸ್ತೀನಂತ ಮಹಿಳೆಯ ಪ್ರಾಣವನ್ನೇ ತೆಗೆದಳು..!

ಇನ್ನು ಈ ಖತರ್ನಾಕ್ ಗ್ಯಾಂಗ್​ ಸರಗಳ್ಳತನ ಮಾಡಲು ಮೂರು ಬಾರಿ ಬಟ್ಟೆ ಬದಲಾಯಿಸಿದ್ದಾರೆ. ಬಳಿಕ ಕೃತ್ಯಕ್ಕೆ ಬಳಸಿದ್ದ ಬೈಕ್​​ ಅನ್ನು ಬಾವಿಗೆ ತಳ್ಳಿದ್ದಾರೆ. ಸಿಸಿ ಕ್ಯಾಮರಾದಲ್ಲಿ ಕಳ್ಳರ ಕೈಚಳಕ ಮತ್ತು ವೈನ್ ಶಾಪ್ ನಲ್ಲಿ ಬಟ್ಟೆ ಬದಲಾಯಿಸುವ ದೃಶ್ಯ ಎಲ್ಲವು ಸೆರೆಯಾಗಿದೆ. ಬೆಳಗಾವಿ ಜಿಲ್ಲೆಯ ಯವಕನಮರಡಿ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಮೂವರನ್ನ ಇದೀಗ ಬೀರೂರು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:56 pm, Thu, 10 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ