AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ಕು ಮಕ್ಕಳು ಜಲಸಮಾಧಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಕೆರೆಯಲ್ಲಿ ಆಟವಾಡಲು ಹೋಗಿದ್ದ ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಓರ್ವ ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರಂತ ಪ್ರಕರಣ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಚಿಕ್ಕಮಗಳೂರಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ಕು ಮಕ್ಕಳು ಜಲಸಮಾಧಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಕೆರೆImage Credit source: tv9 kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:May 04, 2026 | 7:39 PM

Share

ಚಿಕ್ಕಮಗಳೂರು, ಮೇ 04: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿರುವಂತಹ (death) ಘಟನೆ ಚಿಕ್ಕಮಗಳೂರಿನ (Chikkamagaluru) ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತರು. ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ದುರಂತ ಸಂಭವಿಸಿದೆ. ಅರ್ಮನ್​​ ಎಂಬಾತ ಬದುಕುಳಿದಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಮನೆಯ ಪಕ್ಕದಲ್ಲೊಂದು ಕೆರೆ ಇದೆ. ಬಿಸಿಲ ಝಳಕ್ಕೆ ಕೆರೆ ಸಂಪೂರ್ಣ ಖಾಲಿಯಾಗಿ ಮಧ್ಯದಲ್ಲಿ ನೀರು ಇದೆ. ನೀರಿಗೆ ಬಿದ್ದ 4 ವರ್ಷದ ಬಾಲಕಿಯ ರಕ್ಷಣೆ ಮಾಡಲು ನಾಲ್ವರು ಮಕ್ಕಳ ಹೋಗಿದ್ದಾರೆ. ಆದರೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. 4 ವರ್ಷದ ಅರ್ಮನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸದ್ಯ ಮಕ್ಕಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮದಲಗಟ್ಟಿಯಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದ ನಿವಾಸಿ 16 ವರ್ಷದ ಜೀವನ್ ಎಂದು ಗುರುತಿಸಲಾಗಿದೆ.

ತನ್ನ ಕುಟುಂಬದವರೊಂದಿಗೆ ಮದಲಗಟ್ಟಿಯ ಆಂಜನೇಯ ಸ್ವಾಮಿಯ ದರ್ಶನಕ್ಕೆಂದು ಬಂದಿದ್ದ ಜೀವನ್, ಈ ವೇಳೆ ನದಿಯಲ್ಲಿ ಈಜಲು ಇಳಿದಿದ್ದಾನೆ. ಈ ಸಂದರ್ಭದಲ್ಲಿ ಬಾಲಕ ನೀರಿನಲ್ಲಿ ಮುಳುಗುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ರಕ್ಷಿಸಲು ಪ್ರಯತ್ನಿಸಿದರಾದರೂ, ನದಿಯಲ್ಲಿ ನೀರಿನ ಆಳ ಹೆಚ್ಚಾಗಿದ್ದರಿಂದ ಬಾಲಕನನ್ನು ರಕ್ಷಿಸಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ?

ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಅಪಘಾತ: ಕೆರೆಗೆ ಬಿದ್ದು ಸವಾರ ಸಾವು

ನೆಲಮಂಗಲದ ಕೆರೆಯ ಏರಿಯ ತಿರುವಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾರೆ. ಕೂಲಿಪುರ ಗ್ರಾಮದ 25 ವರ್ಷದ ಪ್ರಶಾಂತ್ ಮೃತ ಯುವಕ. ಪ್ರಶಾಂತ್ ಅವರು ತಮ್ಮ ಕೆಟಿಎಂ (KTM) ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಮೇತ ಕೆರೆಗೆ ಬಿದ್ದಿದ್ದಾರೆ. ಈ ದುರ್ಘಟನೆಯಲ್ಲಿ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:51 pm, Mon, 4 May 26

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್