AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದ ಪೋಷಕರು

ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಮನ ಕಲಕುವ ಘಟನೆ ನಡೆದಿದೆ. 77 ವರ್ಷದ ಪತಿ ಸಿರಿಲ್ ಮೋನಿಸ್ ಸಾವನ್ನಪ್ಪಿದ್ದರೂ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಪತ್ನಿಗಿದು ತಿಳಿದಿರಲಿಲ್ಲ. ಸುಮಾರು 10 ದಿನಗಳ ಕಾಲ ಅವರು ಕೊಳೆತ ಪತಿಯ ಶವದ ಪಕ್ಕದಲ್ಲೇ ಕಾಲ ಕಳೆದಿದ್ದಾರೆ. ದುರ್ವಾಸನೆ ಬಂದಾಗ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಸಮಾಜ ಸೇವಕರ ನೆರವಿನಿಂದ ಅಂತ್ಯಸಂಸ್ಕಾರ ನಡೆಯಿತು.

ಇಂತಹ ಸ್ಥಿತಿ ಯಾವ ಹೆತ್ತವರಿಗೂ ಬರಬಾರದು: ಪತಿಯ ಶವದೊಂದಿಗೇ 10 ದಿನ ಕಳೆದ ಪತ್ನಿ! ಮಕ್ಕಳಿದ್ದೂ ಅನಾಥರಾದ ಪೋಷಕರು
,ಕೊಟ್ಟಿಗೆಹಾರ ಘಟನೆImage Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Apr 09, 2026 | 11:45 AM

Share

ಚಿಕ್ಕಮಗಳೂರು, ಏ.9: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮನ ಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. 77 ವರ್ಷದ ಸಿರಿಲ್ ಮೋನಿಸ್ ಎಂಬುವವರು ಅನಾರೋಗ್ಯದಿಂದ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಆದರೆ, ಅವರ ಪತ್ನಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ, ಪತಿ ಸಾವನ್ನಪ್ಪಿರುವುದು ಅವರಿಗೆ ತಿಳಿದಿರಲೇ ಇಲ್ಲ. ಸುಮಾರು 10 ದಿನಗಳ ಕಾಲ ಅವರು ಕೊಳೆತು ಹುಳ ಹಿಡಿದಿದ್ದ ಪತಿಯ ಶವದ ಪಕ್ಕದಲ್ಲೇ ಕಾಲ ಕಳೆದಿದ್ದಾರೆ.

ಮನೆಯಿಂದ ವಿಪರೀತ ದುರ್ವಾಸನೆ ಬಂದಾಗ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದಾಗ ಪತ್ನಿ “ನನ್ನ ಗಂಡ ನನಗೆ ಬೇಕು, ಯಾರೂ ಮುಟ್ಟಬೇಡಿ” ಎಂದು ಶವವನ್ನು ಮುಟ್ಟಲು ಬಿಡದೆ ಹಠ ಹಿಡಿದಿದ್ದರು. ಮಗ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರೆ, ಮಗಳು ದುಬೈನಲ್ಲಿ ಶಿಕ್ಷಕಿಯಾಗಿದ್ದಾರೆ. ಮಗ ನಿತ್ಯ ಕರೆ ಮಾಡಿದಾಗಲೂ ತಾಯಿ “ಅಪ್ಪ ಚೆನ್ನಾಗಿದ್ದಾರೆ” ಎಂದೇ ಹೇಳುತ್ತಿದ್ದರು. ಅಪ್ಪ ಸತ್ತ 10 ದಿನಗಳ ನಂತರ ಮಗ ಬಂದರೂ, ತಂದೆಯ ಮುಖ ನೋಡುವ ಭಾಗ್ಯ ಆತನಿಗೆ ಸಿಗಲಿಲ್ಲ. ಇನ್ನು ಮಗಳು ಅಪ್ಪ ಸತ್ತರೂ ಬಂದು ನೋಡಿಲ್ಲ.

ಇದನ್ನೂ ಓದಿ: 4 ದಿನ ಕಾಡಿನಲ್ಲಿದ್ದ ಯುವತಿ ಮೇಲೆ ಈಗ ನಕ್ಸಲ್ ಶಂಕೆ! ಈ ಬಗ್ಗೆ ಶರಣ್ಯ ಹೇಳಿದ್ದೇನು?

ಶವ ಸಂಪೂರ್ಣ ಕೊಳೆತು ಹೋಗಿದ್ದರಿಂದ ಸ್ಥಳೀಯರು ಮುಟ್ಟಲು ಹಿಂಜರಿದರು. ಈ ವೇಳೆ ಸಮಾಜ ಸೇವಕ ಆರೀಫ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿ, ಅಂತ್ಯಸಂಸ್ಕಾರಕ್ಕೆ ನೆರವಾದರು.ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಸಂಜೆ ವೇಳೆಗೆ ಮೋನಿಸ್ ಅವರ ಅಂತ್ಯಸಂಸ್ಕಾರ ನೆರವೇರಿತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್