AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ?

ಬಿಸಿಲಿನ ತಾಪಕ್ಕೆ ತಂಪು ಅರಸಿ ತೆರಳುವವರು ಕೃಷಿಹೊಂಡ, ನದಿ, ಕೆರೆಗಳಲ್ಲಿ ಮುಳುಗಿ ಸಾಯುತ್ತಿರುವ ಘಟನೆಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ಈಜಲು ಹೋಗಿ ಇಬ್ಬರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕೃಷಿ ಹೊಂಡದ ಸಮೀಪ ಪತ್ತೆಯಾಗಿದ್ದ ಚಪ್ಪಲಿಗಳನ್ನು ಆಧರಿಸಿ ಶೋಧ ನಡೆಸಲಾಗಿತ್ತು. ನಿನ್ನೆ ಭದ್ರಾ ಹಿನ್ನೀರಿನಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕ ನಿತಿನ್ ಶವವೂ ಇಂದು ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ?
ಯುವಕರಿಬ್ಬರ ದಾರುಣ ಅಂತ್ಯImage Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Apr 19, 2026 | 2:07 PM

Share

ಚಿಕ್ಕಮಗಳೂರು, ಏಪ್ರಿಲ್​​ 19: ತೀವ್ರ ಬಿಸಿಲಿನ ಪರಿಣಾಮ ಕೂಲ್​​ ಆಗೋಣ ಎಂದು ಸಿಕ್ಕ ಸಿಕ್ಕಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಈಜಲು ಹೋಗಿ ಭದ್ರಾ ಹಿನ್ನೀರಿನಲ್ಲಿ ನಿನ್ನೆಯಷ್ಟೇ ಯುವಕನೋರ್ವ ಮೃತಪಟ್ಟ ಘಟನೆ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮತ್ತೊಂದು ಅವಘಡ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ರಮೇಶ್(27), ಮಹೇಶ್ (34) ಮೃತರಾಗಿದ್ದು, ಈಜಲು ತೆರಳಿ ಮುಳುಗಿ  ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತರು ಕೊಪ್ಪ ತಾಲೂಕಿನ ಜಯಪುರ ಗ್ರಾಮದವರಾಗಿದ್ದು, ಬನ್ನೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಕೃಷಿ ಹೊಂಡದ ಸಮೀಪ ಇವರ ಚಪ್ಪಲಿ ಪತ್ತೆಯಾಗಿದ್ದ ಹಿನ್ನೆಲೆ ನೀರಿನಲ್ಲಿ ಮುಳುಗಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷಿ ಹೊಂಡದಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು; ಬದುಕು ದುರಂತ ಅಂತ್ಯ

ಯುವಕನ ಶವ ಪತ್ತೆ

Nithin Death

ನಿತಿನ್​​ ಮೃತದೇಹ ಪತ್ತೆ

ಮತ್ತೊಂದು ಕಡೆ ಎನ್​​.ಆರ್​​.ಪುರ ತಾಲೂಕಿನ ಹಂದೂರು ಬಳಿಯ ಸಿದ್ದರಾಮಯ್ಯ ಸೇತುವೆ ಬಳಿ ನಿನ್ನೆ ಸ್ನೇಹಿತರ ಜೊತೆ ಈಜಲು ತೆರಳಿ ಭದ್ರಾ ಹಿನ್ನೀರಿನಲ್ಲಿ  ನಾಪತ್ತೆಯಾಗಿದ್ದ ಯುವಕ ನಿತಿನ್‌(34) ಶವ ಪತ್ತೆಯಾಗಿದೆ. ಮೃತ ನಿತಿನ್​ ಶಿಗುವಾನೆ ಗ್ರಾಮದವರಾಗಿದ್ದು, ನಾಪತ್ತೆಯಾಗಿದ್ದ ನಿತಿನ್​​ಗಾಗಿ ಸತತ ಶೋಧ ಕಾರ್ಯಾಚರಣೆ ನಡೆಸಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಇಂದು ಬೆಳಿಗ್ಗೆ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಎನ್​​.ಆರ್​​.ಪುರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು