ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಧರೆಗುರುಳಿದ ಮರಗಳು: ರಸ್ತೆ ಸಂಪೂರ್ಣ ಬಂದ್​

ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಸಾಲು ಸಾಲು‌‌ ಅವಾಂತರಗಳು ಸಂಭವಿಸುತ್ತಿವೆ. ಇದೀಗ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ರಸ್ತೆ ಸಂಪೂರ್ಣ ಬಂದ್ ಆಗಿದೆ. 

ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಧರೆಗುರುಳಿದ ಮರಗಳು: ರಸ್ತೆ ಸಂಪೂರ್ಣ ಬಂದ್​
ಧರೆಗುರುಳಿದ ಮರ
Updated By: ಗಂಗಾಧರ​ ಬ. ಸಾಬೋಜಿ

Updated on: Jul 27, 2025 | 8:16 AM

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಮಳೆ (rain) ಅಬ್ಬರ ಮುಂದುವರೆದಿದೆ. ಮಳೆ ಆರ್ಭಟದಿಂದಾಗಿ ಹಲವೆಡೆ ಅವಾಂತರಗಳು ಸಂಭವಿಸುತ್ತಿದ್ದು, ಜನ ತತ್ತರಗೊಂಡಿದ್ದಾರೆ. ಇತ್ತ ಜಿಲ್ಲೆಯಲ್ಲಿ ಕೂಡ ಸಾಲು ಸಾಲು‌‌ ಅವಾಂತರಗಳು ಸಂಭವಿಸುತ್ತಿದ್ದು, ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು (tree fall) ಧರೆಗುರುಳಿವೆ. ಹೀಗಾಗಿ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಮತ್ತು ಝರಿ ಫಾಲ್ಸ್​ ಸಂಪರ್ಕಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಿಂದಾಗಿ ಚಂದ್ರಿಕಾ‌ ಎಸ್ಟೇಟ್, ತಿಪ್ಪೇನಹಳ್ಳಿ ಎಸ್ಟೇಟ್ ಮತ್ತು ಇಂದಿರಾನಗರ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದಿದೆ. ಸದ್ಯ ಸಂಚಾರ ಅಸ್ತವ್ಯಸ್ತವಾಗಿದೆ. ಮರ ಧರೆಗುರಳಿದ್ದರಿಂದ ವಿದ್ಯುತ್ ಕಂಬಕ್ಕೂ ಹಾನಿ ಉಂಟಾಗಿದೆ.

ಇದನ್ನೂ ಓದಿ: ವೀಕೆಂಡ್ ಮಸ್ತಿಗೆ ಹರಿದುಬಂದ ಪ್ರವಾಸಿಗರು: ಚಂದ್ರದ್ರೋಣ ಪರ್ವತ ರಸ್ತೆ ಟ್ರಾಫಿಕ್ ಜಾಮ್

ಇದನ್ನೂ ಓದಿ
ಚಿಕ್ಕಮಗಳೂರು ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್
ನಾಳೆಯ ಹವಾಮಾನ: ವರುಣಾರ್ಭಟ, ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜ್‌ಗಳಿಗೆ ರಜೆ
ಭೋರ್ಗರೆಯುತ್ತಿರುವ ಜಲಪಾತದ ಹತ್ತಿರ ಹೋಗಿ ಸ್ಟಂಟ್ ಮಾಡುವ ಪ್ರವಾಸಿಗರು
ಹರಿದುಬಂದ ಪ್ರವಾಸಿಗರು: ಚಂದ್ರದ್ರೋಣ ಪರ್ವತ ರಸ್ತೆ ಟ್ರಾಫಿಕ್ ಜಾಮ್

ಚಿಕ್ಕಮಗಳೂರು-ಶೃಂಗೇರಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕೂಡ ಗಾಳಿ ಸಹಿತ ಭಾರಿ ಮಳೆಗೆ ಮರಗಳು ಮುರಿದುಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಬಳಿ ಮರಗಳು ಧರೆಗುರುಳಿದೆ. ಕೊಪ್ಪ, ಮೂಡಿಗೆರೆ, ಶೃಂಗೇರಿ, ಕಳಸ ಮತ್ತು N.R.ಪುರ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಮನೆ ಮೇಲೆ ಬಿದ್ದ ಬೃಹತ್ ಮರ: ತಪ್ಪಿದ ಅನಾಹುತ

ಮಲೆನಾಡು ಭಾಗದಲ್ಲಿ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಮರ ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಸಂತವೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಗುಡ್ಡ ಕುಸಿತ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್

ಸಂತವೇರಿ ಗ್ರಾಮದ ಮಹಮ್ಮದ್ ಅವರ ಮನೆ ಸಂಪೂರ್ಣ ಜಖಂ ಆಗಿದ್ದು, ಮನೆಯ ಮೇಲ್ಛಾವಣಿಗೆ ಹಾಕಿದ್ದ ಸಿಮೆಂಟ್ ಶೀಟ್ ಪುಡಿಪುಡಿ ಆಗಿದೆ. ರಾತ್ರಿಯಿಡೀ ಕುಟುಂಬ ಪರದಾಡಿದೆ.

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ

ಕೊಡಗಿನಾದ್ಯಂತ ವಾಯು ವಾರುಣಾರ್ಭಟ ಜೋರಾಗಿದೆ. ಅಪಾಯದ ಮಟ್ಟ ಮೀರಿ ನದಿ ತೊರೆಗಳು ಹರಯುತ್ತಿವೆ. ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಚಲಿಸುತ್ತಿದ್ದ ಕಾರಿನ ಬೃಹತ್ ಮರ ಬಿದಿದ್ದು, ಕಾರು ಚಾಲಕ ಚರಣ್ ಕೂದಲೆಳೆ ಅಂತರದಲ್ಲಿ ಪಾರಾಗಿರುವಂತಹ ಘಟನೆ ಸೋಮವಾರಪೇಟೆ ತಾಲ್ಲೂಕಿನ ಬಜೆಗುಂಡಿ ಗ್ರಾಮದಲ್ಲಿ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:15 am, Sun, 27 July 25