ಚಿಕ್ಕಮಗಳೂರು: ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರ ಬಂಧನ: ಮತ್ತಿಬ್ಬರು ಎಸ್ಕೇಪ್

ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್​​ರನ್ನು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿಯೂ ಅಂಥದ್ದೇ ಪ್ರಕರಣ ಹೊರಬಿದ್ದಿದೆ. ಜಿಲ್ಲೆಯ ಮೂಡಿಗೆರೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರನ್ನು ಬಂಧಿಸಿದ್ದು, ಮತ್ತಿಬ್ಬರು ಎಸ್ಕೇಪ್​ ಆಗಿದ್ದಾರೆ.

ಚಿಕ್ಕಮಗಳೂರು: ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರ ಬಂಧನ: ಮತ್ತಿಬ್ಬರು ಎಸ್ಕೇಪ್
ಬಂಧಿತ ಆರೋಪಿಗಳು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Oct 23, 2023 | 6:56 PM

ಚಿಕ್ಕಮಗಳೂರು, ಅಕ್ಟೋಬರ್​​​ 23: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್​ ಈಗ ಜೈಲು ಪಾಲಾಗಿದ್ದಾರೆ. ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣ ಬೆನ್ನಲ್ಲೇ ಚಿಕ್ಕಮಗಳೂರಿ (Chikkamagalur) ನಲ್ಲಿಯೂ ಅಂಥದ್ದೇ ಪ್ರಕರಣ ಹೊರಬಿದ್ದಿದೆ. ಜಿಲ್ಲೆಯ ಮೂಡಿಗೆರೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಹುಲಿ ಉಗುರಿನ ಡಾಲರ್ ಧರಿಸಿದ್ದ ಇಬ್ಬರನ್ನು ಬಂಧಿಸಿದ್ದು, ಮತ್ತಿಬ್ಬರು ಎಸ್ಕೇಪ್​ ಆಗಿದ್ದಾರೆ.

ಭಾರತಿಬೈಲು ಬಳಿಯ ಕುಂಡ್ರ ಗ್ರಾಮದ ನಿವಾಸಿಯಾದ ಸತೀಶ್ ಹಾಗೂ ಹಲ್ಲೇಮನೆ ಕುಂದೂರು ನಿವಾಸಿ ಕೆ.ಎಸ್.ರಂಜಿತ್ ಬಂಧಿತ ಆರೋಪಿಗಳು. ಮೂಡಿಗೆರೆ ತಾಲೂಕಿನ ಕುಂಡ್ರ, ಹಲ್ಲೇಮನೆ ಗ್ರಾಮದಲ್ಲಿ ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿ ಆಗಿದ್ದಾರೆ. ಹುಲಿ ಉಗುರಿನ ಒಂದು ಡಾಲರ್​ನ್ನು ಅರಣ್ಯ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.

ಒಂಟಿ ಮಹಿಳೆಯರ ಬಳಿ ಸರ ಖದಿಯುತ್ತಿದ್ದವನ ಬಂಧನ

ಬೆಂಗಳೂರು: ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕದಿಯುತ್ತಿದ್ದ ಹೊಸಕೋಟೆ ಮೂಲದ ವೆಂಕಟೇಶ್​ನನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲ, ದೇವನಹಳ್ಳಿ ಬಳಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯರ ಸರ ಕದ್ದಿದ್ದ.

ಇದನ್ನೂ ಓದಿ: ಸಮುದ್ರದಲ್ಲಿ ಮುಳುಗುತ್ತಿದ್ದ 3 ಯುವಕರ ರಕ್ಷಿಸಿದ ಲೈಫ್‌ಗಾರ್ಡ್ ಸಿಬ್ಬಂದಿ: ಪ್ರಾಣಾಪಾಯದಿಂದ ಪಾರು

ವಿಳಾಸ ಕೇಳುವ ನೆಪದಲ್ಲಿ ಬೈಕ್​ನಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದ. 52 ಗ್ರಾಂ ತೂಕದ 2 ಚಿನ್ನದ ಸರ ಜಪ್ತಿ ಮಾಡಿದ್ದು, ದೇವನಹಳ್ಳಿ, ಚಿಕ್ಕಜಾಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಅಕ್ರಮ‌ವಾಗಿ ಶ್ರೀಗಂಧ ದಾಸ್ತಾನು‌‌

ಕಾರವಾರ: ಮನೆಯ ಹಿಂಭಾಗದಲ್ಲಿ ಅಕ್ರಮ‌ವಾಗಿ ದಾಸ್ತಾನು‌‌ ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧ ಮರದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದಿರುವಂತಹ ಘಟನೆ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿತ್ತು.

ಇದನ್ನೂ ಓದಿ: ಬೆಂಗಳೂರು: ಕೋಟಿಗೂ ಹೆಚ್ಚು ಮೌಲ್ಯದ ಬಿಎಂಡಬ್ಲ್ಯು ಕಾರಿನಲ್ಲಿತ್ತು 14 ಲಕ್ಷ ನಗದು, ಖದೀಮರು ಮಾಡಿದ್ದೇನು ನೋಡಿ

ನರೂರು ಗ್ರಾಮದ ಸದಾನಂದ ಬಸಪ್ಪ‌ ಗೌಡ ಅವರ ಮನೆಯ ಹಿಂಭಾಗದಲ್ಲಿ ಕಾನೂನು ಬಾಹಿರವಾಗಿ‌ ಶ್ರೀಗಂಧ ಮರದ ತುಂಡುಗಳನ್ನು ದಾಸ್ತಾನು ಇಟ್ಟಿರುವ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯಲ್ಲಿ ಸುಮಾರು 2ಲಕ್ಷ 25 ಸಾವಿರ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದರು. ಆರೋಪಿತನಾದ ಸದಾನಂದ ಬಸಪ್ಪ ಗೌಡ ತಲೆಮರೆಸಿಕೊಂಡಿದ್ದು ಶಿರಸಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದ್ವೆ ಮನೆಯಲ್ಲಿ ಕಳ್ಳರ ಕೈಚಳಕ: ಚಿನ್ನ, ಹಣ ದೋಚಿದ ಖದೀಮರು!
ಮದ್ವೆ ಮನೆಯಲ್ಲಿ ಕಳ್ಳರ ಕೈಚಳಕ: ಚಿನ್ನ, ಹಣ ದೋಚಿದ ಖದೀಮರು!
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
BBK 11: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ವಿಮ್ಮಿಂಗ್ ಫುಲ್​ನಲ್ಲಿ ದುರಂತ ಅಂತ್ಯಕಂಡ ಯುವತಿಯರ ಕೊನೆ ಕ್ಷಣದ ವಿಡಿಯೋ!
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಸ್ಕೂಟಿ​ ಡಿಕ್ಕಿಯೊಳಗೆ ಹಾವು ಪ್ರತ್ಯಕ್ಷ, ಬೆಚ್ಚಿಬಿದ್ದ ಚಾಲಕ, ಮುಂದೇನಾಯ್ತು
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಿಪಿಎಲ್ ಕಾರ್ಡ್ ರದ್ದು: ಸರ್ಕಾರ ನಡೆ ಸ್ವಾಗತಿಸಿದ ಬಿಜೆಪಿ ಎಂಪಿ ರಾಘವೇಂದ್ರ
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
ಬಾಲನಟ ರೋಹಿತ್​ಗೆ ಅಪಘಾತ ಆಗಿದ್ದು ಹೇಗೆ? ಈಗ ಆರೋಗ್ಯ ಹೇಗಿದೆ?
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
PDO ಪರೀಕ್ಷೆಯಲ್ಲೂ ಎಡವಟ್ಟು, ಅರ್ಧಂಬರ್ಧ ಪ್ರಶ್ನೆ ಪತ್ರಿಕೆ ಕಳುಹಿಸಿದ KPSC
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ