AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಚಿಕ್ಕಮಗಳೂರು ಜಿಲ್ಲೆಯ ಹೊಸಪೇಟೆ ಗ್ರಾಮದಲ್ಲಿ ಮತಾಂತರ ಪ್ರಚೋದಿತ ಪುಸ್ತಕಗಳನ್ನು ಹಂಚುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಮನೆ-ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ, ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸಹ ಸೇರಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಗಳನ್ನು ವಶಕ್ಕೆ ಪಡೆದು 2000ಕ್ಕೂ ಹೆಚ್ಚು ಪುಸ್ತಕಗಳನ್ನು ಜಪ್ತಿ ಮಾಡಿದ್ದಾರೆ. ತನಿಖೆ ಮುಂದುವರೆದಿದೆ.

'ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ': ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು
ಚಿಕ್ಕಮಗಳೂರು ಮತಾಂತರ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 31, 2026 | 5:36 PM

Share

ಚಿಕ್ಕಮಗಳೂರು, ಮಾ.31: ಜಿಲ್ಲೆಯ ಹೊಸಪೇಟೆ ಗ್ರಾಮದ ಸಂತೆ ಮೈದಾನದಲ್ಲಿ ಪುಸ್ತಕಗಳನ್ನು ಹಂಚುವ ಮೂಲಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಂಗಳವಾರ (ಮಾ.31) ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಮೂಲದ ಓರ್ವ ವೃದ್ಧ ಮತ್ತು ಮಧ್ಯವಯಸ್ಕ ವ್ಯಕ್ತಿ ಹೊಸಪೇಟೆ ಗ್ರಾಮದ ಸಂತೆಯಲ್ಲಿ ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’ ಎಂಬ ಪುಸ್ತಕಗಳನ್ನು ಹಂಚುತ್ತಿದ್ದರು. ಮನೆ-ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಮತ್ತು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಇಬ್ಬರಿಗೂ ‘ಧರ್ಮದೇಟು’ ನೀಡಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಜನರು ಪ್ರಶ್ನೆ ಮಾಡುತ್ತಿದ್ದಂತೆಯೇ ಇಬ್ಬರೂ ಆರೋಪಿಗಳು ತಮ್ಮ ಓಮ್ನಿ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಬೈಕ್‌ನಲ್ಲಿ ಚೇಸ್ ಮಾಡಿ ಕಾರನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾದರು. ಈ ವೇಳೆ “ನೀವು ಕನ್ವರ್ಟ್ ಆಗಿದ್ದೀರಲ್ಲವೇ? ವಾಪಸ್ ಹಿಂದೂ ಧರ್ಮಕ್ಕೆ ಬನ್ನಿ” ಎಂದು ಕಾರ್ಯಕರ್ತರು ಅವರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್​​: ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿದ್ದ ಸುಮಾರು 2000ಕ್ಕೂ ಹೆಚ್ಚು ಮತಾಂತರ ಪ್ರಚೋದಿತ ಪುಸ್ತಕಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ