AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಕೋಣದ ದಾಳಿಗೆ ಪ್ರಾಣಬಿಟ್ಟ ಕಾಫಿ ತೋಟದ ಕೆಲಸಗಾರ: 30 ವರ್ಷದ ಯುವಕನ ದಾರುಣ ಸಾವು

ಚಿಕ್ಕಮಗಳೂರಿನಲ್ಲಿ ಕಾಡುಕೋಣ ದಾಳಿಗೆ 30 ವರ್ಷದ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಮರಸಣಿಗೆ ಸಮೀಪದ ಎಸ್ಟೇಟ್‌ನಲ್ಲಿ ಈ ಘಟನೆ ನಡೆದಿದೆ. ಕಾಡಾನೆಗಳ ಹಾವಳಿಯ ಬೆನ್ನಲ್ಲೇ ಕಾಡುಕೋಣಗಳ ಉಪಟಳ ಹೆಚ್ಚಿದ್ದು, ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ತೀವ್ರಗೊಂಡಿದೆ. ಅರಣ್ಯ ಇಲಾಖೆ ಕಾಡುಕೋಣಗಳನ್ನು ಸೆರೆಹಿಡಿದು ಸ್ಥಳಾಂತರಿಸಲು ಮುಂದಾಗಿದೆಯಾದರೂ ರೈತರು ಮತ್ತು ಕಾರ್ಮಿಕರಲ್ಲಿ ಆತಂಕ ಹೆಚ್ಚಿದೆ.

ಕಾಡುಕೋಣದ ದಾಳಿಗೆ ಪ್ರಾಣಬಿಟ್ಟ ಕಾಫಿ ತೋಟದ ಕೆಲಸಗಾರ: 30 ವರ್ಷದ ಯುವಕನ ದಾರುಣ ಸಾವು
ಕಾಡುಕೋಣದ ದಾಳಿಗೆ ಬಲಿಯಾದ ಯುವಕImage Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Apr 19, 2026 | 6:38 AM

Share

ಚಿಕ್ಕಮಗಳೂರು, ಏಪ್ರಿಲ್​​ 19: ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಮುಂದುವರಿದಿದೆ. ಕಾಡಾನೆಗಳ ಉಪಟಳದಿಂದ ಮೊದಲೇ ಕಂಗೆಟ್ಟಿದ್ದ ಕಾಫಿ ನಾಡು ಚಿಕ್ಕಮಗಳೂರಲ್ಲಿ (Chikkamagaluru) ಇದೀಗ ಕಾಡುಕೋಣಗಳ ಹಾವಳಿಯೂ ಶುರುವಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ ಪರಿಣಾಮ 30 ವರ್ಷದ ಯುವಕ ಚೇತನ್​​ ಎಂಬಾತ ದಾರುಣವಾಗಿ ಮೃತಪಟ್ಟಿದ್ದಾನೆ. ಎದೆಯ ಭಾಗಕ್ಕೆ ಕಾಡುಕೋಣ ಇರಿದ ಕಾರಣ ಆತ ಉಸಿರು ಚೆಲ್ಲಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಸಮೀಪದ ಮೈದಾಡಿ ಯಮಗೊಂಡ ಎಸ್ಟೇಟ್​​ನಲ್ಲಿ ನಡೆದಿದೆ.

ಘಟನೆಯ ಬೆನ್ನಲ್ಲೇ ಕಳಸ ತಾಲೂಕಿನಲ್ಲಿ ಬೀಡುಬಿಟ್ಟಿರುವ ಕಾಡುಕೋಣಗಳು ಜನರಲ್ಲಿ ಆತಂಕ ಸೃಷ್ಟಿ ಮಾಡಿವೆ. ಕಾಫಿ ತೋಟಗಳಲ್ಲಿ ಕಾಡುಕೋಣಗಳು‌ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿದ್ದು, ಮಾನವರ ಮೇಲೆ ದಾಳಿಗೆ ಮುಂದಾಗುತ್ತಿವೆ. ಈ ಹಿನ್ನೆಲೆ ಇವುಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಕಾಡುಕೋಣಗಳ ಸೆರೆ ಹಿಡಿದು ಸ್ಥಳಾಂತರ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ಮಾನವರ ಮೇಲೆ‌ದಾಳಿಗೆ ಮುಂದಾಗುವ ಕಾಡುಕೋಣ ಸೇರಿದಂತೆ ಕಾಡಾನೆ, ಚಿರತೆಗಳ ಮೇಲೆ ದಿನದ 24 ಗಂಟೆಗಳ ಕಾಲ ನಿಗಾ ಇಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಕಾಡು ಪ್ರಾಣಿಗಳ ಉಪಟಳ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನ ನೇಮಕ ಮಾಡುವುದಾಗಿಯೂ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ

ಒಟ್ಟಿನಲ್ಲಿ ಕಾಡು ಪ್ರಾಣಿಗಳ ಉಪಟಳ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಕಾಡಾನೆಗಳ ಕಾಟದ ಒಂದೆಡೆಯಾದರೆ, ಮತ್ತೊಂದು ಕಡೆ ಕಾಡುಕೋಣಳೂ ದಾಳಿ ನಡೆಸುತ್ತಿರುವ ಕಾರಣ ರೈತರು, ಕಾರ್ಮಿಕರು ಜೀವ ಕೈಯಲ್ಲಿ ಹಿಡಿದು ಬದುಕಬೇಕಾದ ಸ್ಥಿತಿ ಉದ್ಭವಿಸಿದೆ. ಕಾಫಿ ತೋಟಗಳಿಗೆ ನುಗ್ಗುವ ಹಿಂಡು ಹಿಂಡು ಕಾಡುಕೋಣಗಳು ದಾಳಿ ನಡೆಸುವುದು ಮಾತ್ರವಲ್ಲದೆ ಬೆಳೆಯ ನಾಶವನ್ನೂ ಮಾಡ್ತಿರೋದು ಅನ್ನದಾತರ ನಿದ್ದೆಗೆಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ