ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಡಾನೆ ಸಾವು

| Updated By: ವಿವೇಕ ಬಿರಾದಾರ

Updated on: Dec 03, 2023 | 8:56 AM

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಭೈರಾಪುರ ಸಮೀಪದ ಮೇಕನಗದ್ದೆಯಲ್ಲಿ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಡಾನೆ ಮೃತಪಟ್ಟಿರುವ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಡಾನೆ ಸಾವು
ಮೃತ ಆನೆ
Follow us on

ಚಿಕ್ಕಮಗಳೂರು ಡಿ.03: ಅರಣ್ಯ ಇಲಾಖೆ (Forest Department) ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಡಾನೆ (Elephant) ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಭೈರಾಪುರ ಸಮೀಪದ ಮೇಕನಗದ್ದೆಯಲ್ಲಿ ಅರಣ್ಯ ಇಲಾಖೆ ಶನಿವಾರ ಮಧ್ಯರಾತ್ರಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಿದೆ. ಹೀಗಾಗಿ ಅಧಿಕಾರಿಗಳು ಕಾಡಾನೆಗೆ ಅರವಳಿಕೆ‌ ನೀಡಿದ್ದಾರೆ. ಈ ಅರವಳಿಕೆ ಮಂಪರಿನಲ್ಲಿ ಆನೆ ಗುಡ್ಡದಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟಿರುವ ಕಾಡಾನೆ ಕೆಲ ದಿನಗಳ ಹಿಂದೆ ನಡೆದಿದ್ದ ಕಾರ್ಯಾಚರಣೆಯಲ್ಲಿ ಇಟಿಫ್​ ETF ಸಿಬ್ಬಂದಿ ಕಾರ್ತಿಕ್ ಮೇಲೆ ದಾಳಿ ಮಾಡಿತ್ತು. ಕಾಡಾನೆ ದಾಳಿಗೆ ಕಾರ್ತಿಕ್ ಮೃತಪಟ್ಟಿದ್ದರು. ಹೀಗಾಗಿ ಕಾಡಾನೆ ಸೆರೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಶನಿವಾರ ನಡೆದ ಕಾರ್ಯಚರಣೆ ಅವಘಡ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ