ಚಿಕ್ಕಮಗಳೂರು: ಕಾಡಾನೆ ಉಪಟಳ, ಹಲವು ಗ್ರಾಮಗಳಲ್ಲಿ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ

| Updated By: ಗಣಪತಿ ಶರ್ಮ

Updated on: Nov 11, 2024 | 9:42 AM

ಚಿಕ್ಕಮಗಳೂರು ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಬೀಟಮ್ಮ ಗ್ಯಾಂಗ್ ಕಾಡಾನೆಗಳ ಉಪಟಳದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿಷೇಧಾಜ್ಞೆಯನ್ನೂ ಹೇರಲಾಗಿದೆ. ಯಾವ ಗ್ರಾಮಗಳಲ್ಲಿ ಶಾಲೆ ಕಾಲೇಜು ರಜೆ ಇದೆ ಎಂಬ ವಿವರ ಇಲ್ಲಿದೆ.

ಚಿಕ್ಕಮಗಳೂರು: ಕಾಡಾನೆ ಉಪಟಳ, ಹಲವು ಗ್ರಾಮಗಳಲ್ಲಿ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು: ಕಾಡಾನೆ ಉಪಟಳ, ಹಲವು ಗ್ರಾಮಗಳಲ್ಲಿ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ
Follow us on

ಚಿಕ್ಕಮಗಳೂರು, ನವೆಂಬರ್ 11: ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿತ್ತು. ಇದೀಗ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ವಸ್ತಾರೆ, ಮೂಗ್ತಿಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಡಾನೆಗಳ ಹಾವಳಿಗೆ ಕಾಫಿ, ಮೆಣಸು, ಬಾಳೆ ಬೆಳೆ ಸಂಪೂರ್ಣ ನಾಶವಾಗುತ್ತಿವೆ. ಸದ್ಯ ಮಾರಿಕಟ್ಟೆ ಗ್ರಾಮದ ಕಾಫಿತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.

ಜಿಲ್ಲಾಡಳಿತರ ಆದೇಶದಲ್ಲೇನಿದೆ?

ಚಿಕ್ಕಮಗಳೂರು ತಾಲೂಕು ಮಗ್ನಿಹಳ್ಳಿ, ಮತ್ತು ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ರಿಯ ಗ್ರಾಮಗಳಾದ ಮತ್ತಾವರ, ದಂಬದಹಳ್ಳಿ, ಶಿರಗುಂದ, ದುಂಗೆರೆ, ಮೂಗ್ರಿಹಳ್ಳಿ, ಕದ್ರಿಮಿದ್ರಿ ಹಾಗೂ ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣೆಕರೆ, ಗ್ರಾಮಗಳಲಿ, ಬಿಟ್ಟು ಆನೆ ತಂಡವು ಸಂಚರಿಸುತ್ತಿದ್ದು ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ಮುಂಜಾಗ್ರತಾ ಕ್ರಮವಾಗಿ 10-11-20240 ರ ಸಂಜೆ 7ರಿಂದ 11-11-2024 ರ ರಾತ್ರಿ 9ರ ವರೆಗೆ ಕಾಡಾನೆ ಇರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಕಾರ್ಯಾಚರಣೆಗೆ ತೊಂದರೆ ಉಂಟಾಗದಂತೆ ಸೂಕ್ತ ಭದ್ರತೆ ಒದಗಿಸಬೇಕಾಗಿ ವಲಯ ಅರಣ್ಯಾಧಿಕಾರಿ ಆಲ್ಲೂರು ವಲಯ ಚಿಕ್ಕಮಗಳೂರು ಅವರು ಕೋರಿರುತ್ತಾರೆ. ಹೀಗಾಗಿ ಮೇಲೆ ಉಲ್ಲೇಖಿಸಿರುವ ಗ್ರಾಮಗಳಲ್ಲಿ ಗ್ರಾಮಗಳಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶ ತಿಳಿಸಿದೆ.

ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ಓಡಾಟಕ್ಕೆ ನಿರ್ಬಂಧ

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಕಾಲೇಜು ಸಿಬ್ಬಂದಿ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕಾಡಾನೆ ಉಪಟಳ: ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಕರ್ತವ್ಯದ ಮೇಲಿರುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಮಾತ್ರ ನಿಷೇಧಾಜ್ಞೆಯಿಂದ ವಿನಾಯಿತಿ ನೀಡಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ