ಕೇಸರಿ ಧ್ವಜ ಕಟ್ಟಿದ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ; ನಾಲ್ವರ ವಿರುದ್ಧ FIR ದಾಖಲು

ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ(ಡಿ.21) ರಾತ್ರಿ ಅಲಂಕಾರ ಮಾಡುತ್ತಿದ್ದ ವೇಳೆ ಮಸೀದಿಯ ಸಮೀಪ ಕೇಸರಿ ಧ್ವಜ ಕಟ್ಟುವುದಕ್ಕೆ ವಿರೋಧ ವ್ಯಕ್ತಪಡಿಸಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಇದೀಗ ನಾಲ್ವರ ವಿರುದ್ದ ಎಫ್​ಐಆರ್​ ದಾಖಲಾಗಿದೆ.

ಕೇಸರಿ ಧ್ವಜ ಕಟ್ಟಿದ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ; ನಾಲ್ವರ ವಿರುದ್ಧ FIR ದಾಖಲು
ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಹಲ್ಲೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 22, 2023 | 6:54 PM

ಚಿಕ್ಕಮಗಳೂರು, ಡಿ.22: ಮಸೀದಿ ಸಮೀಪ ಧ್ವಜ ಕಟ್ಟುವ ವಿಚಾರವಾಗಿ ದತ್ತ ಮಾಲಾ (Datta Mala)ಧಾರಿಗಳ ಮೇಲೆ ಹಲ್ಲೆ(Assault)ಗೆ ಮುಂದಾಗಿದ್ದ ನಾಲ್ವರ ವಿರುದ್ಧ ಆಲ್ದೂರು ಪೊಲೀಸ್ ‌ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲು ಮಾಡಲಾಗಿದೆ. ಹಾಂದಿ ಗ್ರಾಮದ ಸಬ್ಬರ್ ಅಹಮದ್, ಶಾಹಿದ್, ಜೀಶಾನ್, ಇಂದ್ರೀಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಾಂದಿ‌ ಗ್ರಾಮದ ಅಂಬೇಡ್ಕರ್ ಸರ್ಕಲ್ ಬಳಿಯ ಮಸೀದಿ ಸಮೀಪ ಧ್ವಜ ಕಟ್ಟುವ ವಿಚಾರವಾಗಿ ನಡೆದಿದ್ದ ಗಲಾಟೆ ನಡೆದಿತ್ತು. ಈ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ದತ್ತಜಯಂತಿ ಹಿನ್ನೆಲೆ ನಿನ್ನೆ(ಡಿ.21) ರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲಂಕಾರ ಮಾಡುತ್ತಿದ್ದ ವೇಳೆ ಮಸೀದಿಯ ಸಮೀಪ ಕೇಸರಿ ಧ್ವಜ ಕಟ್ಟುವುದಕ್ಕೆ ವಿರೋಧ ವ್ಯಕ್ತಪಡಿಸಿ ಧ್ವಜ ಕಟ್ಟುತ್ತಿದ್ದ ದತ್ತ ಮಾಲಾಧಾರಿಗಳ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿತ್ತು. ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದರು ಎನ್ನಲಾಗಿತ್ತು. ಬಳಿಕ ಘಟನೆಗೆ ಸಂಬಂಧಿಸಿದಂತೆ ಭಜರಂಗದಳ ಕಾರ್ಯಕರ್ತರು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದ್ದರು. ಘಟನೆ ಬಳಿಕ ಆಲ್ದೂರು ಠಾಣೆಯ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ:ಚಿಕ್ಕಮಗಳೂರು: ಗ್ರಾಮದಲ್ಲಿ ಮಸೀದಿ ಬಳಿಯೇ ಕೇಸರಿ ಧ್ವಜ ಕಟ್ಟಿದ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಇನ್ನು ಡಿಸೆಂಬರ್​ 24, 25 ಮತ್ತು 26ರಂದು ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿದೆ. ಈ ಹಿನ್ನಲೆ ಡಿಸೆಂಬರ್ 22ರಿಂದ 27ರವರೆಗೆ ಈ ಪ್ರದೇಶದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 23, 24 ವಾರಾಂತ್ಯ ಇದೆ. 25 ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ರಜೆ. ಹೀಗಾಗಿ ಅನೇಕರು ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಕಳೆದ ವಾರವೇ ಮಾಹಿತಿ ನೀಡಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:54 pm, Fri, 22 December 23

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ