ಚಿಕ್ಕಮಗಳೂರು: ಗ್ರಾಹಕರ ಅಸಲಿ ಬಂಗಾರ ಎಗರಿಸಿ ನಕಲಿ ಚಿನ್ನ ತಂದಿಟ್ಟ ಬ್ಯಾಂಕ್ ಸಿಬ್ಬಂದಿ: ಆಡಿಟ್​ನಲ್ಲಿ ಅಕ್ರಮ ಬಯಲಿಗೆ

ಈ ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಚಿಕ್ಕಮಗಳೂರಿನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಸಿಬ್ಬಂದಿಗಳು ಗ್ರಾಹಕರ ಚಿನ್ನ ಮತ್ತು ಹಣವನ್ನು ಸಿಬ್ಬಂದಿಗಳೇ ದುರುಪಯೋಗಪಡಿಸಿಕೊಂಡಿದ್ದಾರೆ. ಅಸಲಿ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನದ ಪಾಕೆಟ್​​ನ್ನು ಲಾಕರ್​​ನಲ್ಲಿ ಇಟ್ಟಿದ್ದಾರೆ. ​​

ಚಿಕ್ಕಮಗಳೂರು: ಗ್ರಾಹಕರ ಅಸಲಿ ಬಂಗಾರ ಎಗರಿಸಿ ನಕಲಿ ಚಿನ್ನ ತಂದಿಟ್ಟ ಬ್ಯಾಂಕ್ ಸಿಬ್ಬಂದಿ: ಆಡಿಟ್​ನಲ್ಲಿ ಅಕ್ರಮ ಬಯಲಿಗೆ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Nov 30, 2023 | 10:48 AM

ಚಿಕ್ಕಮಗಳೂರು ನ.30: ಈ ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಬ್ಯಾಂಕ್ (Bank)​ ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು (Chikmagalur) ನಗರದ ಬೋಳರಾಮೇಶ್ವರ ದೇಗುಲ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ. ಬ್ಯಾಂಕ್​ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಂಚನೆ ಎಸಗಿದ ಆರೋಪಿಗಳು. ಗ್ರಾಹಕರು ಬ್ಯಾಂಕ್​​ನಲ್ಲಿಟ್ಟದ ಚಿನ್ನ, ಎಫ್​ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿದ್ದಾರೆ.

ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ‌ ಚಿನ್ನವನ್ನು ಬ್ಯಾಂಕ್​ ಲಾಕರ್​​ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್​ಗಳ ಪೈಕಿ 140 ಪ್ಯಾಕೆಟ್​​ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್​ನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿರುವುದು ಬಹಿರಂಗಗೊಂಡಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್​​ ಬೆಂಗಳೂರು ಶಾಖೆಯ ಮ್ಯಾನೇಜರ್​ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಬಿಟ್ಟು ಹೋದ ಪತಿಯನ್ನು ಒಂದುಗೂಡಿಸುವುದಾಗಿ ನಂಬಿಸಿ ಮಹಿಳಾ ಎಫ್​ಡಿಎಗೆ ವಂಚನೆ

ಎರಡು ರೀತಿಯಲ್ಲಿ ವಂಚನೆ ಎಸಗಿದ ಆರೋಪಿಗಳು

ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳು ಬ್ಯಾಂಕಿಗೆ ಎರಡು ರೀತಿಯಲ್ಲಿ ವಂಚನೆ ಎಸಗಿರುವದು ಬೆಳಕಿಗೆ ಬಂದಿದೆ. ಆರೋಪಿಗಳು ಮೊದಲಯೇ ನಕಲಿ ಚಿನ್ನವನ್ನು ಮೊದಲೆ ತಂದು ಇಟ್ಟುಕೊಂಡಿದ್ದರು. ಆರೋಪಿಗಳು ಗ್ರಾಹಕರಿಂದ ಅಸಲಿ ಚಿನ್ನವನ್ನು ಪಡೆದು ಸಾಲ ನೀಡುತ್ತಿದ್ದರು. ಆದರೆ ಲಾಕರ್​​ನಲ್ಲಿ ಇಡುವಾಗ ಅಸಲಿ ಚಿನ್ನದ ಬದಲು ನಕಲಿ ಚಿನ್ನವನ್ನು ಇಡುತ್ತಿದ್ದರು. ಬಳಿಕ ಅಸಲಿ ಚಿನ್ನವನ್ನು ಬೇರೆ ಕಡೆ ಮಾರುತ್ತಿದ್ದರು. ಇದೊಂದು ರೀತಿ ವಂಚನೆಯಾದರೇ ಮತ್ತೊಂದು ರೀತಿಯ ವಂಚನೆ ಇನ್ನೂ ರೋಚಕವಾಗಿದೆ.

ಬ್ಯಾಂಕ್ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳು. ಮ್ಯಾನೇಜರ್ ಸಂದೀಪ್ ಪತ್ನಿ ಶ್ವೇತಾ ಹೆಸರಲಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದ್ದಿದ್ದನು. ಇದೇರೀತಿಯಾಗಿ ನಾರಾಯಣಸ್ವಾಮಿ ಕೂಡ ಪತ್ನಿ ಲಾವಣ್ಯ ಹೆಸರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 50 ಲಕ್ಷ ರೂ. ಸಾಲ ಪಡೆದಿದ್ದನು. ಬ್ಯಾಂಕ್​ ಅಧಿಕಾರಿಗಳ ವಂಚನೆಯನ್ನು ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 9:27 am, Thu, 30 November 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್