ಚಿಕ್ಕಮಗಳೂರು ನ.30: ಈ ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಬ್ಯಾಂಕ್ (Bank) ಸಿಬ್ಬಂದಿಗಳೇ ಗ್ರಾಹಕರಿಗೆ ವಂಚಿಸಿರುವ ಘಟನೆ ಚಿಕ್ಕಮಗಳೂರು (Chikmagalur) ನಗರದ ಬೋಳರಾಮೇಶ್ವರ ದೇಗುಲ ಬಳಿ ಇರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ. ಬ್ಯಾಂಕ್ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ವಂಚನೆ ಎಸಗಿದ ಆರೋಪಿಗಳು. ಗ್ರಾಹಕರು ಬ್ಯಾಂಕ್ನಲ್ಲಿಟ್ಟದ ಚಿನ್ನ, ಎಫ್ಡಿ ಹಣವನ್ನು ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿದ್ದಾರೆ.
ಆರೋಪಿಗಳು ಗ್ರಾಹಕರ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನವನ್ನು ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದಾರೆ. ಬೆಂಗಳೂರು ಮುಖ್ಯ ಶಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. 141 ಚಿನ್ನದ ಪ್ಯಾಕೆಟ್ಗಳ ಪೈಕಿ 140 ಪ್ಯಾಕೆಟ್ಗಳಲ್ಲಿ ನಕಲಿ ಚಿನ್ನ ಪತ್ತೆಯಾಗಿವೆ. ಬ್ಯಾಂಕ್ ಆಡಿಟ್ನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿರುವುದು ಬಹಿರಂಗಗೊಂಡಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಬೆಂಗಳೂರು ಶಾಖೆಯ ಮ್ಯಾನೇಜರ್ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ಬಿಟ್ಟು ಹೋದ ಪತಿಯನ್ನು ಒಂದುಗೂಡಿಸುವುದಾಗಿ ನಂಬಿಸಿ ಮಹಿಳಾ ಎಫ್ಡಿಎಗೆ ವಂಚನೆ
ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳು ಬ್ಯಾಂಕಿಗೆ ಎರಡು ರೀತಿಯಲ್ಲಿ ವಂಚನೆ ಎಸಗಿರುವದು ಬೆಳಕಿಗೆ ಬಂದಿದೆ. ಆರೋಪಿಗಳು ಮೊದಲಯೇ ನಕಲಿ ಚಿನ್ನವನ್ನು ಮೊದಲೆ ತಂದು ಇಟ್ಟುಕೊಂಡಿದ್ದರು. ಆರೋಪಿಗಳು ಗ್ರಾಹಕರಿಂದ ಅಸಲಿ ಚಿನ್ನವನ್ನು ಪಡೆದು ಸಾಲ ನೀಡುತ್ತಿದ್ದರು. ಆದರೆ ಲಾಕರ್ನಲ್ಲಿ ಇಡುವಾಗ ಅಸಲಿ ಚಿನ್ನದ ಬದಲು ನಕಲಿ ಚಿನ್ನವನ್ನು ಇಡುತ್ತಿದ್ದರು. ಬಳಿಕ ಅಸಲಿ ಚಿನ್ನವನ್ನು ಬೇರೆ ಕಡೆ ಮಾರುತ್ತಿದ್ದರು. ಇದೊಂದು ರೀತಿ ವಂಚನೆಯಾದರೇ ಮತ್ತೊಂದು ರೀತಿಯ ವಂಚನೆ ಇನ್ನೂ ರೋಚಕವಾಗಿದೆ.
ಬ್ಯಾಂಕ್ ಮ್ಯಾನೇಜರ್ ಸಂದೀಪ್ ಮತ್ತು ಸಿಬ್ಬಂದಿ ನಾರಾಯಣಸ್ವಾಮಿ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳು. ಮ್ಯಾನೇಜರ್ ಸಂದೀಪ್ ಪತ್ನಿ ಶ್ವೇತಾ ಹೆಸರಲಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದ್ದಿದ್ದನು. ಇದೇರೀತಿಯಾಗಿ ನಾರಾಯಣಸ್ವಾಮಿ ಕೂಡ ಪತ್ನಿ ಲಾವಣ್ಯ ಹೆಸರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 50 ಲಕ್ಷ ರೂ. ಸಾಲ ಪಡೆದಿದ್ದನು. ಬ್ಯಾಂಕ್ ಅಧಿಕಾರಿಗಳ ವಂಚನೆಯನ್ನು ಕಂಡು ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:27 am, Thu, 30 November 23