AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Datta peeta: ಇತಿಹಾಸದಲ್ಲೇ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರಿಂದ ನೆರೆವೇರಿದ ಪೂಜೆ

ಚಿಕ್ಕಮಗಳೂರಿನ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರಿಂದ ಪೂಜೆ ನೆರವೇರಿದೆ.

Datta peeta: ಇತಿಹಾಸದಲ್ಲೇ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರಿಂದ ನೆರೆವೇರಿದ ಪೂಜೆ
ದತ್ತಪೀಠಕ್ಕೆ ನೇಮಕಗೊಂಡಿರುವ ಅರ್ಚಕರು
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 05, 2022 | 6:41 PM

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ (Bababudangiri Inam Datta Peetha) ಇತಿಹಾಸದಲ್ಲೇ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರಿಂದ ಪೂಜೆ ನೆರವೇರಿದೆ.

ಮುಸ್ಲಿಂ ಸಮುದಾಯದ ತೀವ್ರ ವಿರೋಧದ ನಡುವೆಯೂ ದತ್ತ ಪಾದುಕೆಗೆ ಹಿಂದೂ ಅರ್ಚಕರು ಪೂಜೆ ಸಲ್ಲಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ತು, ಭಜರಂಗದಳ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿದೆ. ಸರ್ಕಾರ ಎರಡು ದಿನದ ಹಿಂದೆ ಇಬ್ಬರು ಅರ್ಚಕರನ್ನ ನೇಮಕ ಮಾಡಿತ್ತು.

ಮೂರು ದಿನಗಳಕಾಲ ಅದ್ದೂರಿಯಾಗಗಿ ದತ್ತ ಜಯಂತಿ

ನಾಳೆಯಿಂದ ಮೂರು ದಿನಗಳ ದತತ್ತಪೀಠದಲ್ಲಿ ಮೂರು ಕಾಲ ಅದ್ದೂರಿಯಾಗಗಿ ದತ್ತ ಜಯಂತಿ ನೆರವೇರುತ್ತದೆ. ಈ ಹಿನ್ನೆಲೆ ಪೊಲೀಸರು ಇಂದು (ಡಿ.5) ರೂಟ್ ಮಾರ್ಚ್ ಮಾಡಿದ್ದಾರೆ. ಬಸವನಹಳ್ಳಿ ರಸ್ತೆ, ಎಂ.ಜಿ ರಸ್ತೆ, ಐಜಿ ರಸ್ತೆ, ಉಪ್ಪಳ್ಳಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬೀಟ್ ಹಾಕಿದ್ದಾರೆ. ರೂಟ್ ಮಾರ್ಚ್​ನಲ್ಲಿ 4500ಕ್ಕೂ ಅಧಿಕ ಪೊಲೀಸರು ಭಾಗಿಯಾಗಿದ್ದರು.

ದತ್ತಪೀಠಕ್ಕೆ ಅರ್ಚಕರನ್ನು ನೇಮಿಸಿದ ರಾಜ್ಯ ಸರ್ಕಾರ; 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡ ಬಿಜೆಪಿ

ದತ್ತಪೀಠಕ್ಕೆ (Bababudangiri Inam Datta Peetha) ರಾಜ್ಯ ಸರ್ಕಾರ ಇಬ್ಬರು ಅರ್ಚಕರನ್ನು (priest) ನೇಮಕ ಮಾಡಿದೆ. ಶೃಂಗೇರಿ ಮೂಲದ ಶ್ರೀಕಾಂತ್, ಚಿಕ್ಕಬಳ್ಳಾಪುರದ ಸಂದೀಪ್ ಇಬ್ಬರು ಅರ್ಚಕರ ನೇಮಿಸಿದೆ. ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು.  ಹೀಗಾಗಿ ಈ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿತ್ತು.

ಹಿಂದೂ ಅರ್ಚಕರ ನೇಮಕ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ‌ ಸಂಭ್ರಮಿಸಿದ್ದಾರೆ. ಬಿಜೆಪಿ 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದೆ.

ಇದನ್ನೂ ಓದಿ: ಹಿಂದೂಗಳ ರಕ್ಷಣೆಗಾಗಿ ಮುಂಬರುವ ಚುನಾವಣೆಯಲ್ಲಿ 25 ಪ್ರಖರ ಹಿಂದುವಾದಿಗಳು ಸ್ಪರ್ಧಿಸುತ್ತೇವೆ: ದತ್ತಪೀಠದಲ್ಲಿ ಮುತಾಲಿಕ್ ಘೋಷಣೆ

ಡಿ 6, 7, 8ಕ್ಕೆ ದತ್ತ ಜಯಂತಿ; ಹೈಕೋರ್ಟ್ ಅಸ್ತು

ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿ ವಿಚಾರಕ್ಕೆ ಸಂಬಂಧಿಸಿ ವಿವಾದಿತ ಸ್ಥಳದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಸರ್ಕಾರ ರಚಿಸಿದ ಸಮಿತಿ, ಭಕ್ತರಿಂದ ಪೂಜಾವಿಧಿ ನಡೆಸಲು ದತ್ತ ಪಾದುಕೆ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಸರ್ಕಾರ ಈಗಾಗಲೇ ನಿರ್ವಹಣಾ ಸಮಿತಿ ರಚಿಸಿದೆ. ಹಿಂದೂ, ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಮಾಡಲಾಗಿದ್ದು ಪ್ರತಿದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿಗೆ ಅನುಮತಿ‌ ನೀಡಲು ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದರು. ಅದರಂತೆ ಡಿ 6, 7, 8 ಮೂರು ದಿನಗಳ ಕಾಲ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅಸ್ತು ಎಂದಿದೆ.

ಏನಿದು ವಿವಾದ:

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಿದ್ದಾರೆ.

ಹೆಸರಿನ ವಿವಾದ

ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರು. ಆ ಸ್ಥಳವನ್ನು ಇನಾಂ ದತ್ತಾತ್ರೇಯ ಪೀಠ, (ಐಡಿ ಪೀಠ) ಎಂದೂ ಹೆಸರಿಸುತ್ತಾರೆ. ಆದರೆ ಕೆಲವೆಡೆ ‘ಬಾಬಾಬುಡನ್​ಗಿರಿ’ ಎಂದೂ ಇನ್ನೂ ಕೆಲವೆಡೆ ದತ್ತಪೀಠ ಎಂದೂ ಕರೆಯುತ್ತಿದ್ದಾರೆ. ಈ ಹೆಸರಿನ ವಿಚಾರ ಸಣ್ಣದಲ್ಲ. ಯಾವ ಹೆಸರಿನಿಂದ ಕರೆಯಬೇಕು ಎಂಬ ಬಗ್ಗೆ ಹಿಂದೂ-ಮುಸ್ಲಿಂ ಧರ್ಮದ ಅನುಯಾಯಿಗಳ ನಡುವೆ ಹಲವು ದಶಕಗಳಿಂದಲೂ ನಿರಂತರವಾಗಿ ಹೋರಾಟ ನಡೆಯುತ್ತಲೇ ಇದೆ. ಹಿಂದೂ-ಮುಸ್ಲಿಂ ಭಾವೈಕ್ಯತಾ ಕೇಂದ್ರವಾಗಿರುವ ಈ ಸ್ಥಳದ ಉಮೇದುವಾರಿಕೆ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಲೇ ಇದ್ದಾರೆ.

ಬಾಬಾಬುಡನ್​ಗಿರಿ ಮತ್ತು ರಾಜಕಾರಣ

ದತ್ತಪೀಠಕ್ಕೆ ಹಿಂದೂ ಮತ್ತು ಮುಸ್ಲಿಮರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಮರ ಪ್ರಭಾವ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ ಬಿಜೆಪಿ 1998ರಲ್ಲಿ ದತ್ತ ಮಾಲಾ ಅಭಿಯಾನ ಆರಂಭಿಸಿದ ನಂತರ ಕ್ಷೇತ್ರವು ದೇಶವ್ಯಾಪಿ ಗಮನ ಸೆಳೆಯಿತು. ಸಂಘ ಪರಿವಾರದ ಪ್ರಯತ್ನಗಳಿಗೆ ಪ್ರತಿಯಾಗಿ ಕೋಮು ಸೌಹಾರ್ದ ವೇದಿಕೆಯೂ ಚಿಕ್ಕಮಗಳೂರಿನಲ್ಲಿ ಸಮಾವೇಶಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯುತ್ತಿತ್ತು. ಕ್ಷೇತ್ರದಲ್ಲಿದ್ದ ಮುಜಾವವರು ಎರಡೂ ಪದ್ಧತಿಗಳ ಪ್ರಕಾರ ಪೂಜೆ ಮಾಡಿಕೊಡುತ್ತಿದ್ದರು.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್  ಮಾಡಿ

Published On - 6:19 pm, Mon, 5 December 22

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ