Chikmagalur News; ಮುಸ್ಲಿಂ ಯುವತಿ ಜೊತೆ ಸ್ನೇಹ, ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಬಿಜೆಪಿ, ಭಜರಂಗದಳದ ಹಿಂದೂ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಹಿನ್ನೆಲೆ   30 ಜನ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ. 

Chikmagalur News; ಮುಸ್ಲಿಂ ಯುವತಿ ಜೊತೆ ಸ್ನೇಹ, ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ಭಜರಂಗದಳ ಕಾರ್ಯಕರ್ತ ಅಜಿತ್
Follow us
ಆಯೇಷಾ ಬಾನು
|

Updated on:May 26, 2023 | 11:01 AM

ಚಿಕ್ಕಮಗಳೂರು: ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್​ಗಿರಿಗೆ (Moral police) ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇತ್ತೀಚೆಗೆ ಪೊಲೀಸ್​ ಇಲಾಖೆಗೆ (Police Department) ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್​ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದಾದ ಬೆನ್ನಲ್ಲೆ ಚಿಕ್ಕಬಳ್ಳಾಪುರ (Chikkaballapur) ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್​ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ವಾರ್ನಿಂಗ್  ಕೊಟ್ಟ ದಿನದಿಂದ ಇದು ಎರಡನೇ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದಿದೆ. ಬಿಜೆಪಿ, ಭಜರಂಗದಳದ ಹಿಂದೂ ಕಾರ್ಯಕರ್ತ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಹಿನ್ನೆಲೆ   30 ಜನ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ.  ಯುವತಿಯ ಜೊತೆ ರಸ್ತೆಯಲ್ಲಿ ಹೋಗುವಾಗ 30 ಯುವಕರ ಗುಂಪು ಹಿಂದೂ ಕರ್ಯಕರ್ತನ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅಜಿತ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಅನ್ಯಕೋಮಿನ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕರು ಇರುವ ವಿಡಿಯೋ ಪೋಟೋ ತೆಗೆದು ಹರಿಬಿಡುತ್ತಿದ್ದ ಲೇಡಿಸ್ ಟೈಲರ್

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಯುವತಿಯಿಂದ ದೂರು ದಾಖಲು, ಇಬ್ಬರು ಅರೆಸ್ಟ್

ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ನಿನ್ನೆ (ಮೇ 24) ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಹೊಟೇಲ್​ಗೆ ಹೋಗಿದ್ದಕ್ಕೆ ಮುಸ್ಲಿಂ ಯುವಕರ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಪ್ರಕರಣ ಸಂಬಂಧ ನೊಂದ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ನಕ್ಕಲಕುಂಟೆ ನಿವಾಸಿಗಳಾದ ವಾಯಿದ್ (20) ಹಾಗೂ ಸದ್ದಾಂ (21) ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ಇಮ್ರಾನ್​ಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಮುಸ್ಲಿಂ ಯುವತಿ ಮತ್ತು ಹಿಂದೂ ಯುವಕ ಜೊತೆಯಾಗಿ ಹೊಟೇಲ್​ಗೆ ಹೋಗಿದ್ದಾರೆ. ಈ ವೇಳೆ ಆಗಮಿಸಿದ ಮುಸ್ಲಿಂ ಯುವಕರ ತಂಡ ಹೊಟೇಲ್ ಟೇಬಲ್ ಬಳಿ ಬಂದು ವಾರ್ನ್ ಮಾಡಿದ್ದಾರೆ, ನಂತರ ಜೋಡಿ ಹೊರಬರುವುದನ್ನೇ ಕಾಯುತ್ತಿದ್ದ ತಂಡ, ಇಬ್ಬರು ಹೊರಬರುತ್ತಿದ್ದಂತೆ ಪ್ರಶ್ನಿಸಿ ಹಲ್ಲೆಗೆ ಯತ್ನ ನಡೆಸಿದೆ. ಮುಸ್ಲಿಂ ಧರ್ಮದಲ್ಲಿ ಹುಟ್ಟಿ ಹಿಂದೂ ಯುವಕನ ಜೊತೆ ಹೋಗುತ್ತೀಯಾ ಎಂದು ಯುವತಿಯನ್ನು ಪ್ರಶ್ನಿಸಿದ್ದಾರೆ. ಅಲ್ಲದೆ, ಯುವಕನನ್ನು ಎಳೆದಾಡಿ ಹಲ್ಲೆಗೆ ಯತ್ನಿಸಿದ್ದಾರೆ.

ಚಿಕ್ಕಮಗಳೂರಿನ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:00 am, Fri, 26 May 23