AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟಗಳಿಗೆ ಆಗಸ್ಟ್ 26 ಮತ್ತು 27 ರಂದು ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಸ್ಥಳೀಯರು ಪೂಜೆ ಸಲ್ಲಿಸಲಿದ್ದಾರೆ. ಪ್ರವಾಸಿಗರ ದಟ್ಟಣೆಯಿಂದ ಪೂಜೆಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳು ಈ ನಿರ್ಬಂಧ ಹೇರಿದ್ದಾರೆ. ಈ ನಿರ್ಬಂಧವು ತಾತ್ಕಾಲಿಕವಾಗಿದ್ದು, ಹಬ್ಬದ ನಂತರ ಪರಿಸ್ಥಿತಿ ಸಾಮಾನ್ಯವಾಗಲಿದೆ.

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ
ಪ್ರವಾಸಿಗರಿಗೆ ನಿರ್ಬಂಧಿಸಿ ಬ್ಯಾನರ್​ ಹಾಕಿದ ಜಿಲ್ಲಾಡಳಿತ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ|

Updated on:Aug 26, 2025 | 10:47 AM

Share

ಚಿಕ್ಕಮಗಳೂರು, ಆಗಸ್ಟ್​ 26: ಚಿಕ್ಕಮಗಳೂರು (Chikkamagaluru) ತಾಲ್ಲೂಕಿನ ಪಶ್ಚಿಮ ಘಟ್ಟಗಳ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ (Mullaiyanagari), ಸೀತಾಳಯ್ಯನಗಿರಿಗೆ ಎರಡು ದಿನ (ಆ.26 ಮತ್ತು 27) ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ರಜೆ ನಿಮಿತ್ತ ಹೆಚ್ಚಿನ ಪ್ರವಾಸಿಗರು ಈ ಬೆಟ್ಟಗಳಿಗೆ ತೆರಳುತ್ತಾರೆ. ಆದರೆ, ಇದೇ ಸಂದರ್ಭದಲ್ಲಿ ಗೌರಿ-ಗಣೇಶ ಹಬ್ಬದ ನಿಮಿತ್ತ ಸ್ಥಳೀಯರು ಇಂದು ಮತ್ತು ನಾಳೆ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿಯಲ್ಲಿನ ಮುಳ್ಳಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಹೀಗಾಗಿ, ಪ್ರವಾಸಿಗರ ದಟ್ಟಣೆಯಿಂದ ಪೂಜೆಗೆ ವಿಳಂಬವಾಗಬಾರದೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್​ ಸ್ವಾಮಿ ದರ್ಗಾ ವಿವಾದ: ಹಿಂದೂ ಸಂಘಟನೆಗಳಿಂದ ಉತ್ಖನಕ್ಕೆ ಪಟ್ಟು

ಆದೇಶದಲ್ಲಿ ಏನಿದೆ?

ಶ್ರೀ ಮೇಲುಗದ್ದುಗೆ ಮುಚ್ಚಯ್ಯನಗಿರಿ, ಶ್ರೀ ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆಮಠ ದೇವಾಲಯಗಳಿಗೆ ಕಸಬಾ ಹೋಬಳಿ, ವಸ್ತಾರೆ, ಅವತಿ, ಅಂಬಳೆ ಮತ್ತು ಜಾಗರ ಹೋಬಳಿ 40ಕ್ಕೂ ಹೆಚ್ಚು ಗ್ರಾಮಸ್ಥರು ದೇವಾಲಯಕ್ಕೆ ಬೇಟಿ ನೀಡಿ ಹಿಂದಿನ ಸಂಪ್ರಾದಯದಂತೆ ಪೂಜೆ, ಹಣ್ಣು ಕಾಯಿ ಮಾಡಿಸಿಕೊಂಡು ಬರುವುದು ಪಾರಂಪರಿಕ ಆಚರಣೆಯಾಗಿರುತ್ತದೆ. ಆದ್ದರಿಂದ ಗಿರಿಭಾಗದ ಪ್ರವಾಸಿ ತಾಣಗಳಿಗೆ ಸ್ಥಳೀಯರಿಗೆ, ಗ್ರಾಮಸ್ಥರಿಗೆ ಮಾತ್ರ ಅವಕಾಶ ಇದೆ. ಈ ಸ್ಥಳಗಳಲ್ಲಿ ಈಗಾಗಲೇ ರೆಸಾರ್ಟ್ / ಹೋಂಸ್ಟೇ ಗಳಲ್ಲಿ ಬುಕ್ಕಿಂಗ್ ಮಾಡಿಕೊಂಡವರುಗಳನ್ನು ಹೊರತುಪಡಿಸಿ ಇನ್ನು ಇತರೆ ಯಾವುದೇ ಜಿಲ್ಲೆ, ರಾಜ್ಯದ ಪ್ರವಾಸಿಗರು / ಯಾರ್ತಾರ್ಥಿಗಳು ಬರುವುದನ್ನು ನಿಬರ್ಂಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹೈಅಲರ್ಟ್​

ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಪೊಲೀಸರು ಹೈ ಅಲರ್ಟ್​​ ಆಗಿದ್ದಾರೆ. ಚಿಕ್ಕಮಗಳೂರು ಸೇರಿದಂತೆ 10 ಪಟ್ಟಣದಲ್ಲಿ 26 ಸ್ಥಳಗಳನ್ನು ಅತೀ ಸೂಕ್ಷ್ಮ ಪ್ರದೇಶಗಳನ್ನು ಪೊಲೀಸರು ಗುರುತಿಸಿದ್ದಾರೆ. ಬ್ಯಾನರ್, ಬಂಟಿಂಗ್ಸ್, ಬಾವುಟ ಕಟ್ಟಲು, ಮೆರವಣಿಗೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಪಟಾಕಿ ಹೊಡೆಯುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Tue, 26 August 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ