Chikmagalur Rain: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಪ್ರವಾಸಿಗರಿಗೆ ನಿರ್ಬಂಧ

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಮಾರ್ಗ ಬಂದ್ ಮಾಡಲಾಗಿದೆ. ಮುಳ್ಳಯ್ಯನಗಿರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

Chikmagalur Rain: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಪ್ರವಾಸಿಗರಿಗೆ ನಿರ್ಬಂಧ
ಮುಳ್ಳಯ್ಯನಗಿರಿ ಮಾರ್ಗ ಬಂದ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Jul 25, 2023 | 3:32 PM

ಚಿಕ್ಕಮಗಳೂರು, ಜುಲೈ 25: ಕಾಫಿನಾಡು ಚಿಕ್ಕಮಗಳೂರಿನಲ್ಲಿ(Chikmagalur Rain) ವರುಣ ಆರ್ಭಟ ಮುಂದುವರೆದಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ(Mullayanagiri) ಮಾರ್ಗದಲ್ಲಿ ಭಾರೀ ಗುಡ್ಡ ಕುಸಿದಿದೆ. ಹೀಗಾಗಿ ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ(Mullayanagiri Route Close). ಹಾಗೂ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ ರಸ್ತೆ ಮಾರ್ಗದಲ್ಲಿ ಹತ್ತಕ್ಕೂ ಅಧಿಕ ಕಡೆ ಗುಡ್ಡ ಕುಸಿದಿದ್ದು ರಸ್ತೆಗೆ ಅಡ್ಡಲಾಗಿ ಗುಡ್ಡದ ಮಣ್ಣು ಬೀಳುತ್ತಲೇ ಇದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಮಲೆನಾಡಾಗಿ ಮಾರ್ಪಟ್ಟಿದೆ. ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ‌ ಶೃಂಗೇರಿ, ಕಳಸ, ಮೂಡಿಗೆರೆ, ಕೊಪ್ಪ, ಎನ್​ಆರ್ ಪುರ ತಾಲೂಕಿನಾದ್ಯಂತ ಆತಂಕ ಮೂಡಿಸಿದೆ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಆರ್ಭಟಿಸುತ್ತಿವೆ. ಶೃಂಗೇರಿ ಶಾರದಾಂಬೆ ದೇವಾಲಯದ ಬಳಿ ತುಂಗಾ ನದಿ ನೆರೆ ಆತಂಕವನ್ನ ಸೃಷ್ಟಿ ಮಾಡಿದ್ದು ಕಪ್ಪೆ ಶಂಕರ ‌ದೇವಾಲಯ ಸೇರಿದಂತೆ ‌ಗುರು ನಿವಾಸಕ್ಕೆ ತೆರಳುವ ಮಾರ್ಗದಲ್ಲಿರುವ ತೆಂಗಿನ ತೋಟ ಸಂಪೂರ್ಣ ಜಲಾವೃತಗೊಂಡಿದೆ. ಸಂಧ್ಯಾ ವಂದನ ಮಂಟಪ ಮುಳುಗಡೆಯಾಗಿದೆ. ದೇವಾಲಯ ಪಕ್ಕದಲ್ಲಿರುವ ಪ್ಯಾರಲ್ ಮಾರ್ಗ ಗಾಂಧಿ ಮೈದಾನದಲ್ಲಿ ತುಂಗಾ ನದಿ ರಭಸವಾಗಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದೇವಾಲಯ ಬಳಿ ಅಗ್ನಿಶಾಮಕ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Mangaluru Rains: ಭಾರೀ ಮಳೆ; ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟಕ್ಕೆ ತೆರಳದಂತೆ ಭಕ್ತರಿಗೆ ಎಚ್ಚರಿಕೆ

ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ಗುಡ್ಡ ಕುಸಿತ

ಪಶ್ಚಿಮ ಘಟ್ಟಗಳ ಸಾಲಿನ‌ ಚಂದ್ರದ್ರೋಣ ಪರ್ವತದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಚಿಕ್ಕಮಗಳೂರಿನಿಂದ ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ಗುಡ್ಡ ಕುಸಿದಿದ್ದು ರಸ್ತೆ ಬಂದ್ ಆಗುವ ಆತಂಕ ಎದುರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡ ಕುಸಿಯುತ್ತಿದ್ದು ಸಾವಿರಾರು ಪ್ರವಾಸಿಗರು ಅದೇ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದಾರೆ. ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಲಪಾತದ ಬಳಿ ಪ್ರವಾಸಿಗರನ್ನ ತೆರಳದಂತೆ ನಿಷೇಧವನ್ನ ಮಾಡಲಾಗಿದೆ. ಕೊಪ್ಪ ಸಮೀಪದ ಬಸರೀಕಟ್ಟೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಾಂಪೌಂಡ್ ಕುಸಿದಿದೆ. ಚಿಕ್ಕಮಗಳೂರು ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್