ಚಿಕ್ಕಮಗಳೂರು: ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಚಿಕ್ಕಮಗಳೂರಿನ ಖಾಸಗಿ ಶಾಲಾ ಬಸ್​ ಚಾಲಕ ಮತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿ ಜಾನವಿ ಮತ್ತು ಬಸ್​ ಚಾಲಾಕನ ಮೃತ ದೇಹ ಡಿಸೆಂಬರ್​​ 31ರ ಮಧ್ಯರಾತ್ರಿ ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದವು.

ಚಿಕ್ಕಮಗಳೂರು: ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಪೋಕ್ಸೋ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Jan 02, 2024 | 10:44 AM

ಚಿಕ್ಕಮಗಳೂರು, ಜನವರಿ 02: ಚಲಿಸುತ್ತಿದ್ದ ರೈಲಿನಡಿ (Train) ಬಿದ್ದು ಶಾಲಾ ಬಸ್ (School Bus)​ ಚಾಲಕ ಮತ್ತು ವಿದ್ಯಾರ್ಥಿನಿ (Student) ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಮೃತ ಶಾಲಾ ಬಸ್ ಚಾಲಕ ಸಂತೋಷ್ (28) ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14)ಗೆ ತನ್ನನ್ನು ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನಂತೆ. ಈ ಬಗ್ಗೆ ಪೋಷಕರು ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು. ಆದರೂ ಸಂತೋಷ್ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಂಡಿರಲಿಲ್ಲ.

ಇದನ್ನೂ ಓದಿ: ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ

2023 ಡಿಸೆಂಬರ್​ 31 ರಂದು ಜಾನವಿ, ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದಳು. ಹೀಗೆ ಹೇಳಿ ಹೋದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದನು. ಇದೇ ರಾತ್ರಿ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯ ರೈಲ್ವೆ ಹಳಿ ಮೇಲೆ ಇಬ್ಬರ ಮೃತದೇಹ ರುಂಡ ಮತ್ತು ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇಬ್ಬರು ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದರು.

ಇನ್ನು ಮೃತ ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ​​ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:42 am, Tue, 2 January 24

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್