ಸಿಎಂ ಸಿದ್ದರಾಮಯ್ಯ ಕರೆ ಬೆನ್ನಲ್ಲೇ ಮೋಸ್ಟ್ ವಾಂಟೆಡ್​​ ನಕ್ಸಲರು ಶರಣಾಗತಿಗೆ ನಿರ್ಧಾರ

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಕ್ಸಲರಿಗೆ ಶಸ್ತ್ರಾಸ್ತ್ರ ತ್ಯಜಿಸಿ, ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಇದರ ಬೆನ್ನಲ್ಲೇ ಇದಿಗ ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಆರು ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗಲು ಸಜ್ಜಾಗಿದ್ದಾರೆ. ಹಾಗಾಗಿ ಶಾಂತಿಗಾಗಿ ನಾಗರಿಕ ವೇದಿಕೆ ಮೂಲಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಕರೆ ಬೆನ್ನಲ್ಲೇ ಮೋಸ್ಟ್ ವಾಂಟೆಡ್​​ ನಕ್ಸಲರು  ಶರಣಾಗತಿಗೆ ನಿರ್ಧಾರ
ಸಾಂದರ್ಭಿಕ ಚಿತ್ರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Jan 05, 2025 | 4:40 PM

ಚಿಕ್ಕಮಗಳೂರು, ಜನವರಿ 05: ಕರ್ನಾಟಕ ಸೇರಿದಂತೆ ಕೇರಳ, ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್​​ ಆರು​ ನಕ್ಸಲರು (Naxal) ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ನಿರ್ಧರಿಸಿದ್ದಾರೆ. ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್​​​ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ ಶರಣಾಗತಿಗೆ ನಿರ್ಧರಿಸಿದ್ದು, ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ.

ಈ ಬಗ್ಗೆ ಶಾಂತಿಗಾಗಿ ನಾಗರಿಕ ವೇದಿಕೆಗೆ ನಕ್ಸಲರು ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆ ನಾಗರಿಕ ವೇದಿಕೆಯ ಸದಸ್ಯರು ಚರ್ಚಿಸಿದ್ದಾರೆ. ಕಳೆದ 3 ತಿಂಗಳಿನಿಂದ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಕಂಡುಬಂದಿದ್ದವು.

ನಕ್ಸಲರು 7 ಬೇಡಿಕೆಗಳೇನು?

  • ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯು ಘನತೆಯುತವಾಗಿ ನಡೆಯಬೇಕು ಹಾಗೂ ಅವರ ಆತ್ಮಗೌರವಕ್ಕೆ ಯಾವುದೇ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯಾವುದೇ ರೀತಿಯ ತಡೆಯಾಗದಂತೆ ಬಯಸಿದ್ದಾರೆಂದು ತಿಳಿಸಿದ್ದಾರೆ
  • ನಕ್ಸಲೀಯರು ಹೊರಬಂದ ನಂತರ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು, ಯಾವುದೇ ಸಂಬಂಧವಿಲ್ಲದ ಕೆಲವು ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಿಸಿಗಬೇಕು ಹಾಗೂ ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
  • ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಕೋರಿದ್ದಾರೆ.
  • ಅವರಿಗೆ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಹಾಗೂ ಹೊರಬಂದ ನಂತರ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ.
  • ಈಗಾಗಲೇ ಮುಖ್ಯವಾಹಿನಿಗೆ ಬಂದಂತಹ ಹಲವರ ಬದುಕು ಅತಂತ್ರವಾಗಿದೆ. ಅವರ ಕೇಸ್​ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ತಕ್ಷಣ ಕ್ರಮಕೈಗೊಳ್ಳಬೇಕು ಹಾಗೂ ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಕೂಡ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡಿ. ಅವರ ಬಿಡುಗಡೆಗೆ ಸಹಕರಿಸುವಂತೆ ಬೇಡಿಕೆ ಇಡಲಾಗಿದೆ.
  • ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ, ತಮಿಳುನಾಡು 3 ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂದು ಸ್ಪಷ್ಟತೆ ಕೋರಿದ್ದಾರೆ.
  • ವಿಕ್ರಮ್ ಗೌಡ ಇವರ ಎನ್ ಕೌಂಟರ್ ಹತ್ಯೆ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಕೋರಲಾಗಿದೆ.

ಇದನ್ನೂ ಓದಿ: ಉಡುಪಿ: ಎನ್​ಕೌಂಟರ್ ನಡೆದ ಪೀತಬೈಲ್​ನಲ್ಲಿ ತೀವ್ರ ಶೋಧ, ಶರಣಾಗತಿಗೆ ನಕ್ಸಲರಿಗೆ ಡಿಸಿಎಂ ಸೂಚನೆ

ಇತ್ತೀಚೆಗೆ ಉಡುಪಿ ಜಿಲ್ಲೆಯ ಕಬ್ಬಿನಾಲೆ ಅರಣ್ಯದ ಪೀತಬೈಲು ಪ್ರದೇಶದಲ್ಲಿ ಸೋಮವಾರದಂದು ಎನ್‌ಕೌಂಟರ್ ಆಗಿತ್ತು. ಎರಡು ದಶಕದಿಂದಲೂ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್‌ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿ ಆಗಿದ್ದ.

ಇನ್ನು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಕ್ಸಲೀಯರಿಗೆ ಶರಣಾಗುವಂತೆ ಕರೆ ನೀಡಿದ್ದರು. ಆ ಮೂಲಕ ಕರ್ನಾಟಕದ ಎಲ್ಲಾ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದ್ದರು.

ಇದನ್ನೂ ಓದಿ: ನಕ್ಸಲ್ ವಿಕ್ರಂ ಗೌಡ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ರೋಚಕ ಕಾರ್ಯಾಚರಣೆಯ ರಹಸ್ಯ ಇಲ್ಲಿದೆ

ಅಷ್ಟೇ ಅಲ್ಲದೆ ಶರಣಾದ ನಕ್ಸಲೀಯರಿಗೆ ಹಂತ ಹಂತವಾಗಿ ಆರ್ಥಿಕ ನೆರವು, ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಎಂದು ಭರವಸೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:39 pm, Sun, 5 January 25

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು