ಸಿದ್ದರಾಮಯ್ಯಗೆ ಬೈದವರಿಗಿಲ್ಲ ಟಿಕೆಟ್, ಇದರಲ್ಲೇ ಇದೆ ಅಡ್ಜಸ್ಟ್ಮೆಂಟ್: ಸಿಟಿ ರವಿ ಬೆಂಬಲಿಗರ ಆಕ್ರೋಶ

ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಫೈಟ್ ಮೂರನೆಯವರಿಗೆ ಲಾಭ ತಂಡುಕೊತು. ಶೋಭಾ ಕರಂದ್ಲಾಜೆ ಮತ್ತು ಸಿಟಿ ರವಿ ನಡುವೆ ಭಾರೀ ಪೈಪೋಟಿ ನಡೆಯಿತಾದರೂ ಬಿಜೆಪಿ ಹೈಕಮಾಂಡ್ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದೆ. ಈ ಬಗ್ಗೆ ಅಸಮಾಧಾನಗೊಂಡಿರುವ ಸಿಟಿ ರವಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಿದ್ದರಾಮಯ್ಯಗೆ ಬೈದವರಿಗಿಲ್ಲ ಟಿಕೆಟ್, ಇದರಲ್ಲೇ ಇದೆ ಅಡ್ಜಸ್ಟ್ಮೆಂಟ್: ಸಿಟಿ ರವಿ ಬೆಂಬಲಿಗರ ಆಕ್ರೋಶ
ಸಿದ್ದರಾಮಯ್ಯಗೆ ಬೈದವರಿಗಿಲ್ಲ ಟಿಕೆಟ್: ಹೊಂದಾಣಿಕೆ ರಾಜಕೀಯದ ವಿರುದ್ಧ ಸಿಟಿ ರವಿ ಬೆಂಬಲಿಗರ ಆಕ್ರೋಶ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Rakesh Nayak Manchi

Updated on:Mar 15, 2024 | 9:24 AM

ಚಿಕ್ಕಮಗಳೂರು, ಮಾ.15: ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ. ಅದರಂತೆ ಕರ್ನಾಟಕದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಈ ಪೈಕಿ ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ತಂಡುಕೊಟ್ಟ ಚಿಕ್ಕಮಗಳೂರು ಉಡುಪಿ ಕ್ಷೇತ್ರವೂ ಒಂದು. ಶೋಭಾ ಕರಂದ್ಲಾಜೆ ಮತ್ತು ಸಿಟಿ ರವಿ (CT Ravi) ನಡುವೆ ಭಾರೀ ಪೈಪೋಟಿ ನಡೆಯಿತಾದರೂ ಬಿಜೆಪಿ ಹೈಕಮಾಂಡ್ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದೆ. ಈ ಬಗ್ಗೆ ಅಸಮಾಧಾನಗೊಂಡಿರುವ ಸಿಟಿ ರವಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಆರೋಪ ಕೇಳಿಬರುತ್ತಿದೆ. ಸಿದ್ದರಾಮಯ್ಯ ವಿರುದ್ಧ ಹೇಳಿಕೆಗಳನ್ನು ನೀಡುವ ನಾಯಕರಿಗೆ ಬಿಜೆಪಿಯಲ್ಲಿ ಟಿಕೆಟ್ ಮಿಸ್ ಆಗುತ್ತಿದೆ ಎಂಬುದು ಕಾರ್ಯಕರ್ತರ, ಮುಖಂಡರ ಆರೋಪವಾಗಿದೆ. ಇದೇ ಆರೋಪವನ್ನು ಸಿಟಿ ರವಿ ಅವರ ಬೆಂಬಲಿಗರೂ ಮಾಡಿದ್ದಾರೆ.

ಇದನ್ನೂ ಓದಿ: ವಿರೋಧ ಮಾಡುವವರಿಗೆ ಟಿಕೆಟ್ ಸಿಗಲ್ಲ: ಸಿಟಿ ರವಿ ವಿರುದ್ಧ ಶೋಭಾ ಕರಂದ್ಲಾಜೆ ಪರೋಕ್ಷ ವಾಗ್ದಾಳಿ

ಟಿಕೆಟ್ ಘೋಷಣೆಗೂ ಮುನ್ನ, ಕೇಂದ್ರ ಸಚಿವೆಯೂ ಆಗಿರುವ ಚಿಕ್ಕಮಳೂರು-ಉಡುಪಿ ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಿಟಿ ರವಿ ಬೆಂಬಲಿಗರು ಸಿಡಿದೆದ್ದಿದ್ದರು. ಈ ಬಾರಿ ಶೋಭಾಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು. ಟ್ರೋಲ್​ಗಳನ್ನು ಕೂಡ ಮಾಡಿದ್ದರು. ಗೋ ಬ್ಯಾಕ್ ಅಭಿಯಾನವನ್ನೂ ನಡೆಸಿದ್ದರು. ಇದೀಗ ಸಿಟಿ ರವಿ ಅವರಿಗೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಾಟ್ಸ್​ಆ್ಯಪ್, ಸಾಮಾಜಿಕ ಜಾಲದಲ್ಲಿ ಸಿಟಿ ರವಿ ಪರ ಅಭಿಯಾನ ನಡೆಸುತ್ತಿರುವ ಅಭಿಮಾನಿಗಳು, ಮೌನಿ ಕೋಟಗೆ ಟಿಕೆಟ್ ಕೊಟ್ಟು ಕಾರ್ಯಕರ್ತರನ್ನು ಸೈಲೆಂಟ್ ಮಾಡಿದರು. ಎಲ್ಲಿದೆ ನ್ಯಾಯ?ನಿಷ್ಠಾವಂತ ಕಾರ್ಯಕರ್ತರ ಕಗ್ಗೊಲೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯಗೆ ಯಾರೆಲ್ಲ ಬೈಯುತ್ತಾರೋ ಅವರಿಗೆ ಟಿಕೆಟ್ ಇಲ್ಲ. ಇದರಲ್ಲೇ ಇದೆ ಅಡ್ಜಸ್ಟ್ಮೆಂಟ್ ಎಂದು ಆಕ್ರೋಶ ಹೊರಹಾಕಿದ್ದಾರೆ.

“ನಮ್ಮವರಿಗೆ ಎಂಪಿ ಕೋಟಾ ಬೇಕು ಅಂದಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡು ‘ಕೋಟ’ ಕೊಟ್ಟುಬಿಟ್ರಾಂತ”, “ಎಲ್ಲಿದೆ ಸಿದ್ಧಾಂತ? ಮೌನಿಯನ್ನು ಅಭ್ಯರ್ಥಿ ಮಾಡಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಸೈಲೆಂಟ್ ಮಾಡಿಬಿಟ್ಟರು”, “ಅಣ್ಣ ಇಲ್ಲಾ ಅಂದರೆ ಎಲ್ಲಾ ಪ್ರೋಗ್ರಾಂ ಕ್ಯಾನ್ಸಲ್ ಆಗುತ್ತದೆ. ರವಿಯ ತಾಕತ್ತು ಜಗತ್ತಿಗೆ ಗೊತ್ತು” ಎಂಬಿತ್ಯಾದಿ ಪೋಸ್ಟ್​ಗಳನ್ನು ಹಾಕಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Fri, 15 March 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM