AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಪೀಠದಲ್ಲಿ ಪೂಜೆ ವಿಚಾರವಾಗಿ ಎರಡು ಧರ್ಮಗಳ ಮಧ್ಯೆ ಕಿರಿಕ್: ಅರ್ಚಕರಿಬ್ಬರಿಗೆ ಗನ್​ ಮ್ಯಾನ್​ ನಿಯೋಜಿಸಿದ ಜಿಲ್ಲಾಡಳಿತ

ದತ್ತಪೀಠದಲ್ಲಿ ಪೂಜೆ ವಿಚಾರವಾಗಿ ಎರಡೂ ಧರ್ಮಗಳ ಮಧ್ಯೆ ಕಿರಿಕ್ ನಡೆದಿದೆ ಎನ್ನಲಾಗುತ್ತಿದೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ಇಬ್ಬರು ಅರ್ಚಕರಿಗೆ ಗನ್ ಮ್ಯಾನ್ ನಿಯೋಜನೆ ಮಾಡಲಾಗಿದೆ.

ದತ್ತಪೀಠದಲ್ಲಿ ಪೂಜೆ ವಿಚಾರವಾಗಿ ಎರಡು ಧರ್ಮಗಳ ಮಧ್ಯೆ ಕಿರಿಕ್: ಅರ್ಚಕರಿಬ್ಬರಿಗೆ ಗನ್​ ಮ್ಯಾನ್​ ನಿಯೋಜಿಸಿದ ಜಿಲ್ಲಾಡಳಿತ
ಸೈಯದ್ ಮಹ್ಮದ್ ಬಾಷಾ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 10, 2022 | 2:59 PM

Share

ಚಿಕ್ಕಮಗಳೂರು: ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ (Bababudangiri)​ ಸ್ವಾಮಿ ದರ್ಗಾ ( ದತ್ತಪೀಠ)ಕ್ಕೆ ಹಿಂದೆ ಅರ್ಚಕರ ನೇಮಕ ಮಾಡಲು ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದಾರೆ. ಸದ್ಯ ದತ್ತಪೀಠದಲ್ಲಿ ಪೂಜೆ ವಿಚಾರವಾಗಿ ಎರಡು ಧರ್ಮಗಳ ಮಧ್ಯೆ ಕಿರಿಕ್ ನಡೆದಿದೆ ಎನ್ನಲಾಗುತ್ತಿದೆ. ಹಾಗಾಗಿ ಮುಂಜಾಗೃತ ಕ್ರಮವಾಗಿ ಸೈಯದ್ ಮಹ್ಮದ್ ಬಾಷಾ ಸೇರಿ ಇಬ್ಬರು ಅರ್ಚಕರಿಗೆ ಗನ್ ಮ್ಯಾನ್ ಮತ್ತು ಮನೆಗೆ ಡಿ.ಎ.ಆರ್. ತುಕಡಿಯನ್ನು ಜಿಲ್ಲಾಡಳಿತ ನಿಯೋಜನೆ ಮಾಡಿದೆ. ಬಾಷಾ ಅವರು ಆಡಳಿತ ಸಮಿತಿಯ ಏಕೈಕ ಮುಸ್ಲಿಂ ಸದಸ್ಯರಾಗಿದ್ದಾರೆ.  ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಕೆಲವು ದಿನಗಳ ಹಿಂದಷ್ಟೇ ದತ್ತಪೀಠ ಆಡಳಿತ ಮಂಡಳಿ ರಚನೆಯಾಗಿದೆ.

ಏನಿದು ವಿವಾದ:

ಬಾಬಾಬುಡನ್‌ ಗಿರಿ ಅಥವಾ ಶ್ರೀಗುರುದತ್ತಾತ್ರೇಯ ಯಾರಿಗೆ ಸೇರಿದ್ದು ಎಂಬ ಬಗ್ಗೆ ವಾದ ವಿವಾದಗಳು ನಡೆಯುತ್ತಲೇ ಇವೆ. ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರಿದೆ. ಆದರೆ ಈ ಸ್ಥಳವನ್ನು ಬಾಬಾ ಬುಡನ್‌ ಗಿರಿ ಎಂದೂ ಮತ್ತೆ ಕೆಲವರು ಇನಾಂ ದತ್ತಾತ್ರೇಯ ಪೀಠ ಎಂದೂ ಕರೆಯುತ್ತಾರೆ. ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದ ಈ ಧಾರ್ಮಿಕ ಕೇಂದ್ರದ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆಯುತ್ತಿದೆ.

ಇದನ್ನೂ ಓದಿ: ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದ: ರಾಜ್ಯ ಸರ್ಕಾರದಿಂದ ಆಡಳಿತ ಮಂಡಳಿ ರಚನೆ

ಹೆಸರಿನ ವಿವಾದ

ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರು. ಆ ಸ್ಥಳವನ್ನು ಇನಾಂ ದತ್ತಾತ್ರೇಯ ಪೀಠ, (ಐಡಿ ಪೀಠ) ಎಂದೂ ಹೆಸರಿಸುತ್ತಾರೆ. ಆದರೆ ಕೆಲವೆಡೆ ‘ಬಾಬಾಬುಡನ್​ಗಿರಿ’ ಎಂದೂ ಇನ್ನೂ ಕೆಲವೆಡೆ ದತ್ತಪೀಠ ಎಂದೂ ಕರೆಯುತ್ತಿದ್ದಾರೆ. ಈ ಹೆಸರಿನ ವಿಚಾರ ಸಣ್ಣದಲ್ಲ. ಯಾವ ಹೆಸರಿನಿಂದ ಕರೆಯಬೇಕು ಎಂಬ ಬಗ್ಗೆ ಹಿಂದೂ-ಮುಸ್ಲಿಂ ಧರ್ಮದ ಅನುಯಾಯಿಗಳ ನಡುವೆ ಹಲವು ದಶಕಗಳಿಂದಲೂ ನಿರಂತರವಾಗಿ ಹೋರಾಟ ನಡೆಯುತ್ತಲೇ ಇದೆ. ಹಿಂದೂ-ಮುಸ್ಲಿಂ ಭಾವೈಕ್ಯತಾ ಕೇಂದ್ರವಾಗಿರುವ ಈ ಸ್ಥಳದ ಉಮೇದುವಾರಿಕೆ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಲೇ ಇದ್ದಾರೆ.

ಬಾಬಾಬುಡನ್​ಗಿರಿ ಮತ್ತು ರಾಜಕಾರಣ

ದತ್ತಪೀಠಕ್ಕೆ ಹಿಂದೂ ಮತ್ತು ಮುಸ್ಲಿಮರು ನೂರಾರು ವರ್ಷಗಳಿಂದ ನಡೆದುಕೊಳ್ಳುತ್ತಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಮರ ಪ್ರಭಾವ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ ಬಿಜೆಪಿ 1998ರಲ್ಲಿ ದತ್ತ ಮಾಲಾ ಅಭಿಯಾನ ಆರಂಭಿಸಿದ ನಂತರ ಕ್ಷೇತ್ರವು ದೇಶವ್ಯಾಪಿ ಗಮನ ಸೆಳೆಯಿತು. ಸಂಘ ಪರಿವಾರದ ಪ್ರಯತ್ನಗಳಿಗೆ ಪ್ರತಿಯಾಗಿ ಕೋಮು ಸೌಹಾರ್ದ ವೇದಿಕೆಯೂ ಚಿಕ್ಕಮಗಳೂರಿನಲ್ಲಿ ಸಮಾವೇಶಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆಯುತ್ತಿತ್ತು. ಕ್ಷೇತ್ರದಲ್ಲಿದ್ದ ಮುಜಾವವರು ಎರಡೂ ಪದ್ಧತಿಗಳ ಪ್ರಕಾರ ಪೂಜೆ ಮಾಡಿಕೊಡುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:55 pm, Sat, 10 December 22