ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಗೆ(Sringeri) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಆಗಮಿಸಿದ್ದಾರೆ. ಚಿಕ್ಕಮಗಳೂರು ಹೆಲಿಪ್ಯಾಡ್ ಗೆ ಆಗಮಿಸಿದ್ದು ಶಾರದಾಂಬೆಯ ದರ್ಶನ ಪಡೆಯಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿಗೆ ಆಗಮಿಸುತ್ತಿರುವ ಬೊಮ್ಮಾಯಿ, ಶಾರದಾಂಬೆ ದರ್ಶನ ಬಳಿಕ ಹರಿಹರಪುರಕ್ಕೆ ಭೇಟಿ ನೀಡಿ ಹರಿಹರಪುರದಲ್ಲಿ ನಡೆಯುತ್ತಿರುವ ಕುಂಭಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಇನ್ನು ಮತ್ತೊಂದು ಕಡೆ ಶೃಂಗೇರಿಯಲ್ಲಿ ಆಸ್ಪತ್ರೆ ಬೇಕು ಎಂದು ನೂರು ಬೆಡ್ ಹೋರಾಟ ಸಮಿತಿಯ ಹೋರಾಟಗಾರರು ಸಿಎಂಗೆ ಮನವಿ ಮಾಡಿದ್ದು ಹೋರಾಟಗಾರರ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಆಸ್ಪತ್ರೆಗೆ ಜಾಗ ಕೊಟ್ಟು, ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಚಿಕ್ಕಮಗಳೂರು ಭೇಟಿ ವೇಳೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಮುಖ್ಯಮಂತ್ರಿಯಾದ ಮೇಲೆ ಚಿಕ್ಕಮಗಳೂರಿಗೆ ಮೊದಲ ಬಾರಿ ಭೇಟಿ ನೀಡುತ್ತಿದ್ದೇನೆ. ಈ ಹಿಂದೆ ಎರಡು ಬಾರಿ ಕಾರ್ಯಕ್ರಮ ಫಿಕ್ಸ್ ಆಗಿ, ಬರಲಾಗಿರಲಿಲ್ಲ. ಈ ಬಾರಿ ಶಾರದಾಂಬೆಯ ದರ್ಶನ ಮಾಡಲು ಶೃಂಗೇರಿಗೆ ಬಂದಿದ್ದೇನೆ. ನಾಡಿನ ಸುಭಿಕ್ಷೆಗಾಗಿ ಶಾರದಾಂಬೆಯ ಪ್ರಾರ್ಥನೆ ಮಾಡುತ್ತೇನೆ ಎಂದರು. ಇದೇ ವೇಳೆ ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದು ಶೃಂಗೇರಿ ಹೆಲಿಪ್ಯಾಡ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ರು.
ಸಿಎಂ ಖಡಕ್ ಇಲ್ಲ, ಸಾಫ್ಟ್ ಕಾರ್ನರ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಅಂದರೆ ಏನು ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ. ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಹುಬ್ಬಳ್ಳಿ ಘಟನೆಗೂ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸನಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವ ಪ್ರಕರಣವನ್ನು ಕೂಡ ವಿಳಂಬ ಮಾಡಿಲ್ಲ. ಪೊಲೀಸ್ ಕೇಸನಲ್ಲೂ ನಾವೇ ಕ್ರಮ ತೆಗೆದುಕೊಂಡಿದ್ದೇವೆ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ವಿರೋಧ ಪಕ್ಷಗಳಿಗೆ ಸಿಎಂ ಬೊಮ್ಮಾಯಿ ಉತ್ತರ ನೀಡಿದ್ದಾರೆ.
ಶೃಂಗೇರಿಯಲ್ಲಿ ಸಿಎಂಗೆ ಸ್ವಾಗತ ಕೋರುತ್ತಿರುವ ಅಣಕವಾಡುತ್ತಿರುವ ಬ್ಯಾನರ್
ದಯವಿಟ್ಟು ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಪದೇಪದೇ ಭರವಸೆ ನೀಡಿ ಮಾತು ತಪ್ಪುತ್ತಿರುವ ಸರ್ಕಾರ. ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ 15 ವರ್ಷಗಳಿಂದ ಹೋರಾಟ. ಸರ್ಕಾರ, ಜಿಲ್ಲಾಡಳಿತದ ಧೋರಣೆಯಿಂದ ರೋಸಿಹೋಗಿರುವ ಸಾರ್ವಜನಿಕರು ಎಂದು ಶೃಂಗೇರಿಯ ಹಲವೆಡೆ ಅಣಕವಾಡುತ್ತಿರುವ ಬ್ಯಾನರ್ ಗಳ ಪ್ರದರ್ಶನ ಮಾಡಲಾಗಿದೆ. ಇಂದು ಶೃಂಗೇರಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡುತ್ತಿರುವ ಹಿನ್ನೆಲೆ ಈ ರೀತಿಯ ಬ್ಯಾನರ್ಗಳನ್ನು ಅಳವಡಿಸಲಾಗಿದೆ. ಸದ್ಯ ಸಿಎಂ ಬೊಮ್ಮಾಯಿ ಆಸ್ಪತ್ರೆ ಕಟ್ಟಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Sankashti Chaturthi 2022: ಅಂಗಾರಕ ಸಂಕಷ್ಟ ಚತುರ್ಥಿ; ಚಂದ್ರೋದಯದ ಸಮಯ, ಪೂಜಾ ವಿಧಾನದ ಕುರಿತ ಮಾಹಿತಿ ಇಲ್ಲಿದೆ
ಹಿಂದೂಗಳಿಗೆ ಮಾತ್ರ: ಮುಸ್ಲಿಮರಿಗೆ ಮನೆ ಬಾಡಿಗೆಗೆ ಕೊಡುವುದಿಲ್ಲ ಫಲಕ ಹಾಕಿದ ಮಾಲೀಕ
Published On - 11:57 am, Tue, 19 April 22