ದೆಹಲಿಯತ್ತ ಮುಖ ಮಾಡಿದ ಸಿಎಂ ಬೊಮ್ಮಾಯಿ; ಎಂ.ಪಿ. ಕುಮಾರಸ್ವಾಮಿ ಸೇರಿದಂತೆ ಕೆಲ ಶಾಸಕರಿಂದ ಮಂತ್ರಿಗಿರಿಗೆ ಪ್ರಯತ್ನ

ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿದಂತೆ ಇನ್ನು ಕೆಲ ಶಾಸಕರು ಉಳಿದ ನಾಲ್ಕು ಸಚಿವ ಸ್ಥಾನಗಳಿಂದಾದರೂ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕೆಂಬ ಪ್ರಯತ್ನದಲ್ಲಿದ್ದಾರೆ. ಇಂದು ಕೂಡ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆರ್ ಟಿ ನಗರದ ನಿವಾಸದಲ್ಲಿ  ಭೇಟಿ ಮಾಡಿದ್ದಾರೆ.

ದೆಹಲಿಯತ್ತ ಮುಖ ಮಾಡಿದ ಸಿಎಂ ಬೊಮ್ಮಾಯಿ; ಎಂ.ಪಿ. ಕುಮಾರಸ್ವಾಮಿ ಸೇರಿದಂತೆ ಕೆಲ ಶಾಸಕರಿಂದ ಮಂತ್ರಿಗಿರಿಗೆ ಪ್ರಯತ್ನ
ಎಂ.ಪಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ

ದೆಹಲಿ: ವೈಯಕ್ತಿಕ ಕಾರ್ಯದ ನಿಮಿತ್ತ ದೆಹಲಿಗೆ ತೆರಳಲು ಸಜ್ಜಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳೆ ಬೆಳಗ್ಗೆ 11.30 ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದೇ ನೆಪದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರನ್ನ ಭೇಟಿಯಾಗುವ ಸಾಧ್ಯತೆ ಇದ್ದು, ನಾಳೆ ನಡ್ಡಾ ಅವರನ್ನು ಭೇಟಿಯಾಗಿ ಕೆಲ ವಿಚಾರಗಳ ಬಗ್ಗೆ ಮಾತುಕತೆ ನಡೆಸಬಹುದು ಎಂದು ನಿರೀಕ್ಷಿಸಲಾಗಿದೆ.

ನಾಳೆ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ ಉಳಿದ ನಾಲ್ಕು ಸಚಿವ ಸ್ಥಾನ ಭರ್ತಿ ಬಗ್ಗೆ ನಡ್ಡಾ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಕಳೆದ ಬಾರಿ ದೆಹಲಿ ಭೇಟಿ ಸಂದರ್ಭದಲ್ಲಿ ನಡ್ಡಾ ಅವರನ್ನ ಭೇಟಿಯಾಗಲು ಬೊಮ್ಮಾಯಿ ಅವರಿಗೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಸಲ ಭೇಟಿಯಾಗಬಹುದು ಮತ್ತು ಈ ಭೇಟಿ ಒಂದಷ್ಟು ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಇತ್ತ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿದಂತೆ ಇನ್ನು ಕೆಲ ಶಾಸಕರು ಉಳಿದ ನಾಲ್ಕು ಸಚಿವ ಸ್ಥಾನಗಳಿಂದಾದರೂ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕೆಂಬ ಪ್ರಯತ್ನದಲ್ಲಿದ್ದಾರೆ. ಇಂದು ಕೂಡ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಮಾಜಿ ಸಚಿವ ಆರ್ ಶಂಕರ್ ಕೂಡಾ ಸಚಿವ ಸ್ಥಾನಕ್ಕಾಗಿ ಭಾರೀ ಕಸರತ್ತು ನಡೆಸುತ್ತಿದ್ದು, ಉಳಿದ ನಾಲ್ಕು ಸ್ಥಾನಗಳಲ್ಲಾದರೂ ಸ್ಥಾನ ಪಡೆಯಬೇಕು ಎಂಬ ಪ್ರಯತ್ನದಲ್ಲಿದ್ದಾರೆ. ಹೀಗಾಗಿ ಸಿಎಂ ಭೇಟಿ ಮಾಡಿ ಚರ್ಚಿಸುತ್ತಿರುವ ಆರ್.ಶಂಕರ್ ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಶಂಕರ್​ ಅವರಿಗೆ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದ ಮುಂದಿನ ನಡೆ ಹೇಗಿರಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:
ನನಗೆ ಗಣಿತ ಕಲಿಸಿದ ಗುರುಗಳನ್ನ ನಾನು ಇಂದಿಗೂ ಮರೆತಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಸಿಟಿ ರವಿ ನೆನಪಾದವರನ್ನು, ಅಡ್ಡ ಸಿಕ್ಕವರನ್ನು ಕಚ್ತಾ ಕಚ್ತಾ ಬರ್ತಾರೆ: ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ಟಾಂಗ್

(CM Bommai visiting Delhi meanwhile MP Kumaraswamy and other MLAs trying to get Minister post)

Click on your DTH Provider to Add TV9 Kannada