ರಾಷ್ಟ್ರಧ್ವಜಕ್ಕೆ ಅಪಮಾನ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

| Updated By: ಆಯೇಷಾ ಬಾನು

Updated on: Aug 10, 2022 | 9:00 PM

ರಾಷ್ಟ್ರಧ್ವಜದ(National Flag) ಬಗ್ಗೆ ಅಪಮಾನ ಮಾಡಿದ ಆರೋಪದಡಿ ಜಿಲ್ಲಾ ಬಿಜೆಪಿಯಿಂದ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರು ತಾಲೂಕು ಆಲ್ದೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ರಾಷ್ಟ್ರಧ್ವಜಕ್ಕೆ ಅಪಮಾನ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಆಲ್ದೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರಧ್ವಜದ(National Flag) ಬಗ್ಗೆ ಅಪಮಾನ ಮಾಡಿದ ಆರೋಪದಡಿ ಜಿಲ್ಲಾ ಬಿಜೆಪಿಯಿಂದ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರು ತಾಲೂಕು ಆಲ್ದೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸಿದ್ದರಾಮಯ್ಯನವರು ರಾಷ್ಟ್ರಧ್ವಜದ ಬಣ್ಣ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ, ಹಸಿರು ಎಂದಿದ್ದರು. ಕೇಸರಿ ಬದಲು ಕೆಂಪು ಎಂದು ಧ್ವಜಕ್ಕೆ ಅಪಮಾನ ಮಾಡಿದ ಆರೋಪದಡಿ ಬಿಜೆಪಿ ಮುಖಂಡ ಗಿರೀಶ್, ಬಜರಂಗದಳದ ಶಿವಕುಮಾರ್ ದೂರು ದಾಖಲಿಸಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಬೆನ್ನಲ್ಲೇ ಕಾಫಿನಾಡಲ್ಲಿ ಬಿಜೆಪಿಗರು ಆಕ್ರೋಶ ಹೊರ ಹಾಕಿದ್ದಾರೆ.

ಮೃತ ಪ್ರಕಾಶ್ ಮನೆಗೆ ಸಿದ್ದರಾಮಯ್ಯ ಭೇಟಿ

ಇನ್ನು ಸಿದ್ದರಾಮೋತ್ಸವಕ್ಕೆ ತೆರಳ್ತಿದ್ದಾಗ ಕ್ರೂಸರ್ ವಾಹನ ಪಲ್ಟಿಯಾಗಿ ಚಾಲಕ ಪ್ರಕಾಶ್ ಬಡಿಗೇರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೃತ ಪ್ರಕಾಶ್ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮದ ಪ್ರಕಾಶ್ ಮನೆಗೆ ಭೇಟಿ ನೀಡಿ ಪ್ರಕಾಶ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ. ಆಗಸ್ಟ್ 2ರಂದು ಹೂಲಗೇರಿ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಚಾಲಕ ಪ್ರಕಾಶ್ ಮೃತಪಟ್ಟಿದ್ದರು.

ಮಾಜಿ ಸಿಎಂ ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಜನರು

ಚಿಕ್ಕಾಲಗುಂಡಿ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ನೋಡಲು ಜನ ಮುಗಿಬಿದ್ದಿದ್ದಾರೆ. ಕೈಯಲ್ಲಿ ಮೊಬೈಲ್ ಹಿಡಿದು ಸೆಲ್ಫಿಗಾಗಿ ಯುವಕರು ಮುಗಿಬಿದ್ದ ಘಟನೆ ನಡೆದಿದೆ. ಮಹಿಳೆಯರು, ಯುವತಿಯರು ಸಿದ್ದರಾಮಯ್ಯ ನೋಡಲು ಜಮಾಯಿಸಿದ್ದರು. ಈ ವೇಳೆ ಜನರಿಂದ ಪಾರಾಗುವುದೇ ದೊಡ್ಡ ಹರಸಾಹಸವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:58 pm, Wed, 10 August 22