ಕಾಂಗ್ರೆಸ್‌ ಮಾಜಿ ಸಚಿವ ಸಗೀರ್ ಅಹ್ಮದ್ ಪತ್ನಿ ಹೆಸರಿನಲ್ಲಿದ್ದ ಭೂಮಿ ಸರ್ಕಾರದ ವಶಕ್ಕೆ

ಕಾಂಗ್ರೆಸ್‌ನ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬಕ್ಕೆ ಸರ್ಕಾರ ಬಿಗ್ ಶಾಕ್​ ನೀಡಿದೆ. ಚಂದ್ರದ್ರೋಣ ಪರ್ವತದ ಸಾಲಿನ ಶೋಲಾ ಅರಣ್ಯದಲ್ಲಿ ಮಾಜಿ ಸಚಿವ ಸಗೀರ್ ಅಹ್ಮದ್ ಪತ್ನಿಯ ಹೆಸರನಲ್ಲಿದ್ದ 32.21 ಎಕರೆ ಭೂಮಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ.

ಕಾಂಗ್ರೆಸ್‌ ಮಾಜಿ ಸಚಿವ ಸಗೀರ್ ಅಹ್ಮದ್ ಪತ್ನಿ ಹೆಸರಿನಲ್ಲಿದ್ದ ಭೂಮಿ ಸರ್ಕಾರದ ವಶಕ್ಕೆ
ಮಾಜಿ ಸಚಿವ ಸಗೀರ್ ಅಹ್ಮದ್, ಸರ್ಕಾರಿ ಆದೇಶ
Follow us
| Updated By: ವಿವೇಕ ಬಿರಾದಾರ

Updated on: Sep 15, 2024 | 12:28 PM

ಚಿಕ್ಕಮಗಳೂರು, ಸೆಪ್ಟೆಂಬರ್​ 15: ಕಾಂಗ್ರೆಸ್‌ನ (Congress) ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬಕ್ಕೆ ಸರ್ಕಾರ ಬಿಗ್ ಶಾಕ್​ ನೀಡಿದೆ. ಚಂದ್ರದ್ರೋಣ ಪರ್ವತ ಸಾಲಿನ (Chandra Drona Parvatha) ಶೋಲಾ ಅರಣ್ಯದಲ್ಲಿ ಮಾಜಿ ಸಚಿವ ಸಗೀರ್ ಅಹ್ಮದ್ ಪತ್ನಿಯ ಹೆಸರನಲ್ಲಿದ್ದ 32.21 ಎಕರೆ ಭೂಮಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ಆಸ್ತಿಯ ಮೇಲಿದ್ದ ಸಗೀರ್ ಕುಟುಂಬದ ಹಕ್ಕನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರದ್ದುಪಡಿಸಿ, ಸರ್ಕಾರಿ ಜಮೀನು ಎಂದು ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಗ್ರಾಮದ ಸರ್ವೆ ನಂಬರ್ 5ರಲ್ಲಿ ಸಗೀರ್ ಪತ್ನಿ ಫಾತಿಮಾಭಿ ಅವರ ಹೆಸರಿನಲ್ಲಿದ್ದ ಬಂಡಿದಾರಿ, ಕಾಲುದಾರಿ ಮೇಲಿನ ಹಕ್ಕನ್ನು ಜಿಲ್ಲಾಡಳಿತ ರದ್ದು ಮಾಡಿದೆ. ಈ ಭೂಮಿ ಮೂಲತಃ ಬೇರೆಯವರಿಗೆ ಮಂಜೂರಾಗಿತ್ತು. ಆದರೆ, 1978ರಲ್ಲಿ ಸಗೀರ್ ಪತ್ನಿ ಫಾತಿಮಾಭಿ ಹೆಸರಿನಲ್ಲಿ ಅಕ್ರಮವಾಗಿ ಖರೀದಿಸಲಾಗಿದೆ. ಆದರೆ, ಮಂಜೂರಾತಿಯೇ ಅಕ್ರಮ ಎಂದು ಜಿಲ್ಲಾಡಳಿತ ಭೂಮಿಯನ್ನು ವಶಕ್ಕೆ ಪಡೆದಿದೆ.

ಇದನ್ನೂ ಓದಿ: ಅರಣ್ಯ ಒತ್ತುವರಿ ತೆರವಿಗೆ ಸೂಚನೆ ಬೆನ್ನಲ್ಲೇ ರೈತರನ್ನು ನಕ್ಸಲರನ್ನಾಗಿ ಮಾಡಬೇಡಿ ಎಂದು ಬ್ಯಾನರ್

ಭೂಮಿ‌ ವಶಪಡಿಸಿಕೊಂಡಿರುವುದಾಗಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದ ಬಳಿಯಿರುವ ಸಗೀರ್ ಅಹ್ಮದ್ ಮನೆಯ ಬಾಗಿಲಿಗೆ ಜಿಲ್ಲಾಡಳಿತ ನೋಟಿಸ್ ಅಂಟಿಸಿದೆ.

ದುರ್ಘಟನೆ ಬಳಿಕ ಎಚ್ಚೆತ್ತ ಸರ್ಕಾರ

ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್​​​ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು.

ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ​​ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.

ಇದೀಗ, ಅನಧೀಕೃತವಾಗಿ ನಡೆಯುತ್ತಿರುವ ರೆಸಾರ್ಟ್​ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ