ಚಿಕ್ಕಮಗಳೂರು: ಕುಡಿದ ಮತ್ತಲ್ಲಿ ಕಾಂಗ್ರೆಸ್ (Congress) ಮುಖಂಡರು ಗುಂಡಾಗಿರಿ (Rowdyism) ನಡೆಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ದೇವಗೋಡು ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಹಳೆ ವೈಷಮ್ಯದ ಹಿನ್ನೆಲೆ ಶೃಂಗೇರಿ (Sringeri) ತಾಲೂಕಿನ ಕಾಂಗ್ರೆಸ್ ಮುಖಂಡರಾದ ರಮೇಶ್, ಸಂದರ್ಶ, ಸುಧಾಕರ್, ಸುಂದರೇಶ್ ಕುಡಿದ ಮತ್ತಿನಲ್ಲಿ ದೇವಗೋಡು ಗ್ರಾಮದ ರಾಧಮ್ಮ ಅವರ ಮನೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ ಮನೆಯ ಮುಂದಿದ್ದ ಬಾಳೆ, ಕಾಫಿ ಗಿಡಗಳನ್ನು ಕಡಿದು ಹಾಕಿ ದುಷ್ಕೃತ್ಯ ಮೆರೆದಿದ್ದಾರೆ. ಕಾಂಗ್ರೆಸ್ ಮುಖಂಡರು ನಡೆಸಿದ ಕೃತ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ವರ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ: ಬುಧವಾರ (ಏ.19) ರಂದು ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆಗೆ ತೆರಳುತ್ತಿದ್ದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು. ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಕಾರಿನ ಗಾಜು ಪುಡಿ ಪುಡಿಯಾಗಿತ್ತು. ಸ್ಥಳೀಯ ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರು ವಾಗ್ವಾದ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು.
ಇದನ್ನೂ ಓದಿ: ತಮ್ಮ ನಾಯಕರ ಪರ ವಕಾಲತ್ತು: ರಾಯಚೂರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ: 3 ಬೆರಳು ಕಟ್
ಗದಗ: ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲುತೂರಾಟ ಮಾಡಿದ್ದರು. ಅನಿಲ್ ಮೆಣಸಿನಕಾಯಿ ಅವರು ಗದಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಸಿ ಹೊರ ಬರುತ್ತಿದ್ದ ವೇಳೆ ಕಾರಿನ ಮೇಲೆ ಕಲ್ಲುತೂರಾಟ ಮಾಡಿದ್ದರು. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತುಲ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:49 am, Sat, 22 April 23