Sringeri News: ಅಯೋಧ್ಯೆ, ದತ್ತಪೀಠ ಹೋರಾಟದ ಬಗ್ಗೆ ಶಾಸಕ ಟಿಡಿ ರಾಜೇಗೌಡ ಅವಾಚ್ಯ ಪದ ಬಳಕೆ; ತೀವ್ರ ಖಂಡನೆ

| Updated By: ಆಯೇಷಾ ಬಾನು

Updated on: Jan 24, 2023 | 2:13 PM

ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದ್ರು. ನಾನು ಬೈಯುತ್ತೇನೆ, ಜನರನ್ನ ಕರೆದುಕೊಂಡು ಹೋಗುವವರು ಮನೆಹಾಳರು ಎಂದು ಶಾಸಕ ಟಿ.ಡಿ.ರಾಜೇಗೌಡರ ಮಾತನಾಡಿರುವ ಆಡಿಯೋ ವೈರಲ್ ಆಗಿದೆ.

Sringeri News: ಅಯೋಧ್ಯೆ, ದತ್ತಪೀಠ ಹೋರಾಟದ ಬಗ್ಗೆ ಶಾಸಕ ಟಿಡಿ ರಾಜೇಗೌಡ ಅವಾಚ್ಯ ಪದ ಬಳಕೆ; ತೀವ್ರ ಖಂಡನೆ
ಶಾಸಕ ಟಿಡಿ ರಾಜೇಗೌಡ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Follow us on

ಚಿಕ್ಕಮಗಳೂರು: ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಯೋಧ್ಯೆ, ದತ್ತಪೀಠ ಹೋರಾಟ ಬಗ್ಗೆ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಸದ್ಯ ಈಗ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಡಿಯೋ ವೈರಲ್​ ಆಗಿದೆ.

ಅವರು ಮನೆ ಹಾಳು * ಮಕ್ಕಳು. ಜನರಿಗೆ ದತ್ತಮಾಲೆ ಹಾಕಿಸಿ, ಕುಂಕುಮವನ್ನು ಹಾಕಿ ಕರೆದುಕೊಂಡು ಹೋಗುತ್ತಾರೆ. ಅಯೋಧ್ಯೆ ಹೋರಾಟದಲ್ಲಿ ಲಕ್ಷಾಂತರ ಜನರನ್ನು ಬಲಿ ಕೊಟ್ಟರು. ಬಾಬ್ರಿ ಮಸೀದಿ ಕೆಡವಲು ಹೋಗಿ ಲಕ್ಷಾಂತರ ಜನರು ಬಲಿಯಾದ್ರು. ನಾನು ಬೈಯುತ್ತೇನೆ, ಜನರನ್ನ ಕರೆದುಕೊಂಡು ಹೋಗುವವರು ಮನೆಹಾಳರು ಎಂದು ಶಾಸಕ ಟಿ.ಡಿ.ರಾಜೇಗೌಡರ ಮಾತನಾಡಿರುವ ಆಡಿಯೋ ವೈರಲ್ ಆಗಿದೆ.

ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದರೆ ಹೊಟ್ಟೆ ತುಂಬಲ್ಲ. ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ ಎಂದು ಪರೋಕ್ಷವಾಗಿ ಹಿಂದೂಪರ ಸಂಘಟನೆ, ಬಿಜೆಪಿ ಪಕ್ಷದ ವಿರುದ್ಧ ರಾಜೇಗೌಡರು ನಿಂದನೆ ಮಾಡಿದ್ದಾರೆ. ಸದ್ಯ ಈಗ ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಟಿ.ಡಿ.ರಾಜೇಗೌಡ ಹೇಳಿಕೆ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬಿಜೆಪಿ, ವಿಶ್ವಹಿಂದೂಪರಿಷತ್, ಬಜರಂಗದಳ ಕಾರ್ಯಕರ್ತರಿಂದ ಇಂದು ಪ್ರತಿಭಟನೆ ನಡೆಯಲಿದ್ದು ಶಾಸಕ ಟಿ.ಡಿ.ರಾಜೇಗೌಡ ಕ್ಷಮೆಯಾಚನೆಗೆ ಆಗ್ರಹಿಸಲಿದ್ದಾರೆ.

ದತ್ತಮಾಲೆ, ಅಯೋಧ್ಯೆ, ಬಗ್ಗೆ ವಿವಾದಾತ್ಮಕ ಹೇಳಿಕೆ‌ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಪಕ್ಷ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಾಮ ಮಂದಿರದ ಬಗ್ಗೆಯೇ ಮಾತನಾಡಿದ್ರು. ಕಾಂಗ್ರೆಸ್ ಪಕ್ಷದ ನಾಯಕರೇ ಹಿಂದೂ ವಿರುದ್ದವಾಗಿ ಮಾತನಾಡುತ್ತಾರೆ. ನಾಯಕರೇ ಮಾತನಾಡುವಾಗ ಶಾಸಕರು ಕೂಡಾ ಮಾತನಾಡುತ್ತಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:38 am, Tue, 24 January 23