AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಇಎಸ್ ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ, ನಿರ್ದೇಶಕ; ಸಿಟಿ ರವಿ ಹೇಳಿಕೆ

ಎಂಇಎಸ್ ಕಾರ್ಯಕರ್ತರ ಜತೆ ಕಾಂಗ್ರೆಸ್ ಕಾರ್ಯಕರ್ತರಿದ್ದರು. ಶಿವಾಜಿ ಪ್ರತಿಮೆಗೆ ಅಪಮಾನ ಮಾಡುವಾಗಲೂ ಕಾಂಗ್ರೆಸ್ ಇತ್ತು. ಡಿಕೆ ಶಿವಕುಮಾರ್, ಜಮೀರ್ ಕಟ್ಟಾ ಬೆಂಬಲಿಗರಿಂದಲೇ ಕೃತ್ಯ ನಡೆದಿದೆ. ರಾಯಣ್ಣ, ಬಸವೇಶ್ವರರ ಪ್ರತಿಮೆಗೆ ಅಪಮಾನ ಮಾಡಿದ್ದಾರೆ.

ಎಂಇಎಸ್ ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ, ನಿರ್ದೇಶಕ; ಸಿಟಿ ರವಿ ಹೇಳಿಕೆ
ಸಿ.ಟಿ ರವಿ
TV9 Web
| Edited By: |

Updated on:Dec 20, 2021 | 2:54 PM

Share

ಚಿಕ್ಕಮಗಳೂರು: ಎಂಇಎಸ್ (MES) ಪುಂಡಾಟಿಕೆಯ ಹಿಂದೆ ಕಾಂಗ್ರೆಸ್ ಪಕ್ಷ ಇದೆ ಎಂದು ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಡಿಕೆ ಶಿವಕುಮಾರ್ ಈ ಪ್ರಕರಣದ ನಿರ್ಮಾಪಕ ಮತ್ತು ನಿರ್ದೇಶಕ ಹೇಳಿಕೆ ನೀಡಿದ್ದಾರೆ. ಸಂಘರ್ಷ ಸೃಷ್ಟಿಸಿ ರಾಜಕೀಯ ದುರ್ಲಾಭ ಪಡೆಯಲು ಷಡ್ಯಂತ್ರ ನಡೆಸಿದ್ದಾರೆ. ಕೊಲ್ಹಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಕಾಂಗ್ರೆಸ್ ಇತ್ತು ಅಂತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಇಎಸ್ ಕಾರ್ಯಕರ್ತರ ಜತೆ ಕಾಂಗ್ರೆಸ್ ಕಾರ್ಯಕರ್ತರಿದ್ದರು. ಶಿವಾಜಿ ಪ್ರತಿಮೆಗೆ ಅಪಮಾನ ಮಾಡುವಾಗಲೂ ಕಾಂಗ್ರೆಸ್ ಇತ್ತು. ಡಿಕೆ ಶಿವಕುಮಾರ್, ಜಮೀರ್ ಕಟ್ಟಾ ಬೆಂಬಲಿಗರಿಂದಲೇ ಕೃತ್ಯ ನಡೆದಿದೆ. ರಾಯಣ್ಣ, ಬಸವೇಶ್ವರರ ಪ್ರತಿಮೆಗೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್, ಎಂಇಎಸ್ ಕಾರ್ಯಕರ್ತರು ಅಪಮಾನ ಮಾಡಿದ್ದಾರೆ. ಜಾತಿ, ಭಾಷಾ ಸಂಘರ್ಷ ಹುಟ್ಟು ಹಾಕುವುದೇ ಇವರ ಉದ್ದೇಶ. ಹೀಗಾಗಿ ಎಂಇಎಸ್ ಸಂಘಟನೆಯನ್ನು ಡಿಕೆಶಿ ಸಮರ್ಥಿಸಿಕೊಂಡಿದ್ದಾರೆ. ಈ ಷಡ್ಯಂತ್ರ ಬಯಲಿಗೆಳೆಯಬೇಕೆಂದು ಚಿಕ್ಕಮಗಳೂರಿನಲ್ಲಿ ಸಿಎಂ, ಗೃಹ ಸಚಿವರಿಗೆ ಆಗ್ರಹಿಸಿದ್ದಾರೆ.

ನಾನು ಯಾವುದೇ ಸಂಘಟನೆ ವಿರುದ್ಧ ದೂಷಿಸಲು ಹೋಗಲ್ಲ; ಡಿಕೆಶಿ ಇನ್ನು ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಿಡಿಗೇಡಿಗಳು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಾನು ಯಾವುದೇ ಸಂಘಟನೆ ವಿರುದ್ಧ ದೂಷಿಸಲು ಹೋಗಲ್ಲ. ಎಂಇಎಸ್ ಪುಂಡಾಟಿಕೆ ಮಾಡುತ್ತಿದೆ ಎಂದು ಕೂಡ ಹೇಳಲ್ಲ. ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ನೈತಿಕ ಪೊಲೀಸ್‌ಗಿರಿಗೆ ಅವಕಾಶ ನೀಡಿದ್ದೇ ಇದಕ್ಕೆಲ್ಲಾ ಕಾರಣ. ಇಡೀ ರಾಜ್ಯದಲ್ಲಿಯೇ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸರು ಖಾಕಿಯನ್ನು ಬಿಟ್ಟು ಕಾವಿ ಧರಿಸುತ್ತಿದ್ದಾರೆ. ಪೊಲೀಸರು ರಾಜಕಾರಣಿಗಳ ಮಾತು ಬಿಟ್ಟು, ಕೆಲಸ ಮಾಡಲಿ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಮಹಿಳೆಯರ ವಿವಾಹ ವಯಸ್ಸು ಹೆಚ್ಚಿಸುವ ಕಾನೂನು, ಪರಿಶೀಲನೆಗೆ ಮುಕ್ತವಾಗಿದೆ ಎಂದ ಕೇಂದ್ರ

ಬಾಲಂಗೋಚಿಗಳಿಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಕಷ್ಟ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Published On - 2:49 pm, Mon, 20 December 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು