ಚಿಕ್ಕಮಗಳೂರಿನಲ್ಲಿ ಮುಂದುವರಿದ ಪ್ರವಾಸಿಗರ ಹುಚ್ಚಾಟ; ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ
ಜುಲೈ 09 ರಂದು ಮೂಡಿಗೆರೆ ತಾಲೂಕಿನ ಐತಿಹಾಸಿಕ ಪ್ರವಾಸಿ ತಾಣ ದೇವರಮನೆ ಬೆಟ್ಟದಲ್ಲಿ ಕಾರ್ ನಿಲ್ಲಿಸಿಕೊಂಡು ಚಳಿಗೆ ಎಣ್ಣೆ ಹೊಡೆಯುತ್ತಿದ್ದವರ ಕಿಕ್ನ್ನು ಲೇಡಿ ಪಿಎಸ್‌ಐ ಇಳಿಸಿದ್ದರು. ಇದೀಗ ಪ್ರವಾಸಿಗರ ಹುಚ್ಚಾಟ ಮುಂದುವರೆದಿದ್ದು, ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ವೇಗವಾಗಿ ಬಂದು ಎರಡು ಕಾರಿಗೆ ಯುವಕರ ಕಾರು ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ನ ಮಲಯ ಮಾರುತದ ಬಳಿ ನಡೆದಿದೆ.
ಚಿಕ್ಕಮಗಳೂರು, ಜು.13: ಕಾಫಿನಾಡು ಚಿಕ್ಕಮಗಳೂರಿನಲ್ಲಿ(Chikkamagaluru) ಪ್ರವಾಸಿಗರ ಹುಚ್ಚಾಟ ಮುಂದುವರೆದಿದ್ದು, ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ವೇಗವಾಗಿ ಬಂದು ಎರಡು ಕಾರಿಗೆ ಯುವಕರ ಕಾರು ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ನ ಮಲಯ ಮಾರುತದ ಬಳಿ ನಡೆದಿದೆ. ಈ ಹಿನ್ನಲೆ ಕೆಲ ಕಾಲ ಚಾರ್ಮಾಡಿ ಘಾಟ್ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮೂಡಿಗೆರೆ ತಾಲೂಕಿನ ದೇವರಮನೆ ಚಾರ್ಮಾಡಿ ಘಾಟಿಗೆ ಬೆಂಗಳೂರು ಮೂಲದ ಯುವಕರ ತಂಡ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.
ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ಇಬ್ಬರಿಗೆ ಗಾಯ
ಇನ್ನು ಕುಡಿದ ಮತ್ತಿನಲ್ಲಿ ಎರಡು ಕಾರಿಗೆ ಡಿಕ್ಕಿ ಹೊಡೆದು ಯುವಕರು ಎಸ್ಕೇಪ್ ಆಗಲು ಯತ್ನಿಸಿದ್ದರು. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ಇಬ್ಬರಿಗೆ ಗಾಯವಾಗಿದೆ. ಈ ವೇಳೆ ವೇಗವಾಗಿ ಬಂದು ಅಪಘಾತ ಮಾಡಿದನ್ನ ಪ್ರಶ್ನಿಸಿದ ಸ್ಥಳೀಯರ ಮೇಲೆ ಪೊಲೀಸರ ಸಮ್ಮುಖದಲ್ಲೇ ಹಲ್ಲೆ ಮಾಡಿದ್ದಾರೆ. ಈ ಹಿನ್ನಲೆ ಬೆಂಗಳೂರು ಮೂಲದ ಮೂವರು ಯುವಕರನ್ನ ಬಂಧಿಸಲಾಗಿದೆ. ಈ ಕುರಿತು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ದೇವರಮನೆ, ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಪ್ರವಾಸಿಗರ ಹುಚ್ಚಾಟ: ಸಂಚಾರಕ್ಕೆ ಸಮಸ್ಯೆ
ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಮದ್ಯ, ಪ್ಲಾಸ್ಟಿಕ್ ಸೇರಿದಂತೆ ಮೋಜು ಮಸ್ತಿಗೆ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿತ್ತು. ಜಿಲ್ಲಾಡಳಿತದ ಆದೇಶದ ನಡುವೆಯೂ ಇದೇ ಜುಲೈ 09 ರಂದು ಮೂಡಿಗೆರೆ ತಾಲೂಕಿನ ಐತಿಹಾಸಿಕ ಪ್ರವಾಸಿ ತಾಣ ದೇವರಮನೆ ಬೆಟ್ಟದಲ್ಲಿ ಕಾರ್ ನಿಲ್ಲಿಸಿಕೊಂಡು ಚಳಿಗೆ ಎಣ್ಣೆ ಕುಡಿಯುತ್ತಿದ್ದವರ ಕಿಕ್ನ್ನು ಲೇಡಿ ಪಿಎಸ್‌ಐ ಇಳಿಸಿದ್ದರು. ಬಳಿಕ ಅವರ ಮೇಲೆ ಕೇಸ್ ಕೂಡ ದಾಖಲು ಮಾಡಿದ್ದರು. ಇದೀಗ ಯುವಕರು ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ