AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳು ಅರೆಸ್ಟ್​

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ಹಸುವನ್ನು ಕೊಂದ ಆರು ಆರೋಪಿಗಳನ್ನು ಬಾಳೂರು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಕಾಫಿ ತೋಟದ ಕಾರ್ಮಿಕರಾದ ಈ ಆರೋಪಿಗಳು ಹಸುವಿನ ಮಾಂಸಕ್ಕಾಗಿ ಈ ಕೃತ್ಯ ಎಸಗಿದ್ದರು. ಪೊಲೀಸರು ದಾಳಿ ಮಾಡಿದಾಗ ಆರೋಪಿಗಳು ಹಸುವಿನ ಮಾಂಸವನ್ನು ಬೇರ್ಪಡಿಸುತ್ತಿದ್ದರು. ಬಂಧಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳು ಅರೆಸ್ಟ್​
ಬಂಧಿತ ಆರೋಪಿಗಳು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 10, 2025 | 8:40 PM

Share

ಚಿಕ್ಕಮಗಳೂರು, ಜುಲೈ 10: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು (Cow) ಕದ್ದೊಯ್ದು ಕೊಂದ ಆರೋಪಿಗಳನ್ನು ಬಾಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಕೊಟ್ಟಿಗೆಯೊಂದರಲ್ಲಿ ಹಸು ಕಟ್ಟಲಾಗಿತ್ತು. ಅಸ್ಸಾಂ ಮೂಲದ ಕಾಫಿತೋಟದ ಕಾರ್ಮಿಕರು ಕೊಟ್ಟಿಗೆಯಿಂದ ಹಸವನ್ನು ಕದ್ದೊಯ್ದು ಕೊಂದಿದ್ದಾರೆ. ಬಳಿಕ, ಹಸು ಮಾಂಸವನ್ನು ಬೇರ್ಪಡಿಸುವಾಗ ಪೊಲೀಸರು ದಾಳಿ ಮಾಡಿದ್ದು, 6 ಮಂದಿಯನ್ನು ಬಂಧಿಸಿದ್ದಾರೆ. ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್ ಹಾಗೂ ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಸೆರೆ ಬಂಧಿತರು. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಸು ರುಂಡ ಪತ್ತೆ

ಇತ್ತೀಚಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ರಾಮ ಮಂದಿರದ ಬಳಿ ಗೋವಿನ ರುಂಡ ಪತ್ತೆಯಾಗಿತ್ತು. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರು ನಾಲ್ಕು ತಂಡಗಳನ್ನು ರಚಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದು 24 ಗಂಟೆಯೊಳಗಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಚಾಮರಾಜಪೇಟೆ ಬೆನ್ನಲ್ಲೇ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ: ಮಾರಕಾಸ್ತ್ರದಿಂದ ಬಾಲ ತುಂಡರಿಸಿ ದುಷ್ಕರ್ಮಿಗಳು ಪರಾರಿ

ಇದನ್ನೂ ಓದಿ
Image
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲು
Image
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
Image
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
Image
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆಯನ್ನೇ ಕಡೆಯಲಾಗಿತ್ತು. ಹೊಟ್ಟೆಯೊಳಗಿದ್ದ ಕರುವನ್ನು ಹೊರತೆಗೆದು ಹಸುವಿನ ದೇಹ ಎತ್ತುಕೊಂಡು ಹೋಗಿದ್ದರು. ಇತ್ತೀಚೆಗೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರ ಗ್ರಾಮದಲ್ಲಿ ಹಾಲಿನ ಡೈರಿ ಅಧ್ಯಕ್ಷರಿಗೆ ಸೇರಿದ್ದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ಕ್ರೌರ್ಯ ಮೆರೆದಿರುವಂತಹ ಘಟನೆ ನಡೆದಿತ್ತು. ಇದಕ್ಕೂ ಮುನ್ನ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ಯಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ