ಚಿಕ್ಕಮಗಳೂರು: ಬರಗಾಲಕ್ಕೆ ಮೊದಲ ಬಲಿ, ಬೆಳೆ ನಾಶದಿಂದ ಕಂಗೆಟ್ಟ ರೈತ ಆತ್ಮಹತ್ಯೆ
ಈ ವರ್ಷ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. ಕೃಷಿಯನ್ನೇ ಅವಲಂಬಿಸಿರುವ ರೈತರು ಕಂಗೆಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಉಂಟಾದ ಬರಗಾಲಕ್ಕೆ ಇದೀಗ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಮಳೆಯಿಲ್ಲದೆ ಈರುಳ್ಳಿ ಬೆಳೆ ನಾಶಗೊಂಡ ಹಿನ್ನೆಲೆ ತನ್ನ ಹೊಲದಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು, ಆಗಸ್ಟ್ 31: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ತಲೆದೋರಿದ ಬರಗಾಲಕ್ಕೆ ಅನ್ನದಾತ ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ. ಮಳೆಯಿಲ್ಲದೆ ಈರುಳ್ಳಿ ಬೆಳೆ ನಾಶಗೊಂಡ ಹಿನ್ನೆಲೆ ತನ್ನ ಹೊಲದಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಸತೀಶ್ ( 49) ನೇಣಿಗೆ ಶರಣಾದ ರೈತ.
ಮಳೆ ನಿರೀಕ್ಷೆಯಲ್ಲಿದ್ದ ಗಿರಿಯಾಪುರ ಗ್ರಾಮದ ರೈತ ಸತೀಶ್ ಎಂಬವರು ಸಾಲ ಮಾಡಿ ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಮಳೆ ಬಾರದ ಹಿನ್ನೆಲೆ ಉಂಟಾದ ಬರಕ್ಕೆ ಈರುಳ್ಳಿ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿವೆ.
ಇದನ್ನೂ ಓದಿ: ಚಿಕ್ಕಮಗಳೂರು: ಮಟನ್ ಎಂದು ಗೋಮಾಂಸದ ಊಟ ಸರ್ವ್ ಮಾಡುತ್ತಿದ್ದ ಹೋಟೆಲ್ಗಳ ಮೇಲೆ ಪೊಲೀಸರ ದಾಳಿ
ಇದರಿಂದ ಮನನೊಂದ ರೈತ ಸತೀಶ್, ಜಮೀನಿನಲ್ಲೇ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಜ್ಜಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಆತ್ಮಹತ್ಯೆ ಸಹಾಯವಾಣಿ
ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ಆಂದ್ರಪ್ರದೇಶ ಕುಪ್ಪಂ ಮೂಲದ ಕೃಷ್ಣಪ್ಪ, ಬಂಗಾರಪೇಟೆಯ ಲಕ್ಷ್ಮೀ ನಾರಾಯಣ ಬಂಧಿತರು. ಮುಷ್ಟ್ರಹಳ್ಳಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಆರೋಪಿಗಳನ್ನು ಬಂಧಿಸಿದ ಕಾಮಸಮುದ್ರಂ ಠಾಣಾ ಪೊಲೀಸರು ಸುಮಾರು 3 ಲಕ್ಷ ಮೌಲ್ಯದ 4 ಕೆಜಿ 105 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ