ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭಿಕ್ಷಾಟನೆ ನಡೆಸಿದರು. ಚಿಕ್ಕಮಗಳೂರು ನಗರದ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಇತರೆ ದತ್ತಮಾಲಾಧಾರಿಗಳ ಜೊತೆ ಸಿಟಿ ರವಿ ಪಡಿ ಸಂಗ್ರಹಿಸಿದರು. ಈ ವೇಳೆ ಅಕ್ಕಿ, ಬೆಲ್ಲ, ಎಲೆ, ಅಡಿಕೆ, ಕೊಬ್ಬರಿ, ಬಾಳೆಹಣ್ಣುಗಳನ್ನ ದತ್ತಮಾಲಾಧಾರಿಗಳಿಗೆ ಸ್ಥಳೀಯರು ನೀಡಿದರು. ಜನರಿಂದ ಪಡೆದ ಪಡಿಯನ್ನ ಇರುಮುಡಿ ರೂಪದಲ್ಲಿ ನಾಳೆ ದತ್ತಾತ್ರೇಯನಿಗೆ ದತ್ತಮಾಲಾಧಾರಿಗಳು ಅರ್ಪಿಸಲಿದ್ದಾರೆ. ಭಿಕ್ಷಾಟನೆ ಬಳಿಕ ಮಾತನಾಡಿದ ಸಿಟಿ ರವಿ, ಬ್ರಹ್ಮ ವಿಷ್ಣು ಮಹೇಶ್ವರರ ಅವಿರ್ಭಾವ ರೂಪದೇ ದತ್ತಾತ್ರೇಯರು.
ದತ್ತಾತ್ರೇಯರನ್ನ ಅವಧೂತ ಪರಂಪರೆ ಅಂತಾ ಗುರುತಿಸಲಾಗುತ್ತದೆ. ಅವಧೂರ ಪರಂಪರೆಯವರು ಭಿಕ್ಷಾಟನೆ ಮಾಡಿ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದರು. ದತ್ತಜಯಂತಿ ಹಿನ್ನೆಲೆಯಲ್ಲಿ ನಾವು ಭಿಕ್ಷಾಟನೆ ಮಾಡಿದ್ದೇವೆ, ನಾಳೆ ದತ್ತಾತ್ರೇಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದೇವೆ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯಿಸಿದರು.
ದತ್ತಮಾಲಾಧಾರಿಗಳನ್ನ ಕುಡುಕರೆಂಬಂತೆ ಬಣ್ಣಿಸಿರುವ ಹಾಸನ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ ಸಿಟಿ ರವಿ, ಬಳಸಿರುವ ಭಾಷೆ ಗೌರವ ತರುವಂತದಲ್ಲ. ಅದನ್ನ ನಾನು ಖಂಡಿಸುತ್ತೇನೆ. ಅವಹೇಳನ-ಅಪಮಾನ ಮಾಡುವ ರೀತಿ ಡಿಸಿ ಸರ್ಕ್ಯೂಲರ್ ಹೊರಡಿಸಿದ್ದಾರೆ. ಆ ರೀತಿ ಸರ್ಕ್ಯೂಲರ್ ಹೊರಡಿಸಿರುವ ಡಿಸಿ ಅವರಿಗೆ ತಪ್ಪು ಕಲ್ಪನೆ ತೋರಿಸುತ್ತದೆ. ಕೂಡಲೇ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ ಅಂತಾ ಸಿಟಿ ರವಿ ಹೇಳಿದ್ದಾರೆ.
ಸಾವಿರಾರು ದತ್ತಮಾಲಾಧಾರಿಗಳು ಬೇಲೂರು ಮೂಲಕ ಚಿಕ್ಕಮಗಳೂರಿನ ದತ್ತಪೀಠಕ್ಕೆ ಹೋಗಲಿದ್ದು, ಬರುವಾಗ ವಾಹನಗಳನ್ನ ನಿಲ್ಲಿಸಿಕೊಂಡು ಮದ್ಯ ಸೇವನೆ ಮಾಡಿಕೊಂಡು, ಅನ್ಯ ಧರ್ಮಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಘೋಷಣೆ ಕೂಗು ಸಾಧ್ಯತೆಯಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಬೇಲೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ ಮಾಡಿದ್ದರು. ಇದು ರಾಜ್ಯಾದ್ಯಂತ ಇರುವ ದತ್ತಮಾಲಾಧಾರಿಗಳಲ್ಲಿ ಆಕ್ರೋಶ ಹೆಚ್ಚುವಂತೆ ಮಾಡಿತ್ತು.
ಇನ್ನೂ ಇದೇ ವೇಳೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಬಗ್ಗೆ ಮಾತನಾಡಿದ ಸಿಟಿ ರವಿ, ಕೆಲವರು ಅರಾಜಕತೆ-ಸಂಘರ್ಷ ಸೃಷ್ಠಿಸಲು ಸಂಚು ರೂಪಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟರು, ಅಲ್ಲಿನ ಸರ್ಕಾರದಲ್ಲಿ ಕಾಂಗ್ರೆಸ್ ಕೂಡ ಪಾಲುದಾರಿಕೆ ಹೊಂದಿದೆ. ಇಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿಯುವ ಕೆಲಸ ಮಾಡಿದ್ದತು. ಈ ಕಿಡಿಗೇಡಿಗಳ ಉದ್ದೇಶ ಕರ್ನಾಟಕ-ಮಹಾರಾಷ್ಟ್ರ ಸಂಘರ್ಷ ಆಗಲಿ ಅನ್ನೋ ಸಂಚು. ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಮರಾಠಿಗರು ಇದ್ದಾರೆ. ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ. ರಾಷ್ಟ್ರೀಯ ಹಿತಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತ್ರ ನಡೆಸಿದ್ದಾರೆ. ಈ ಷಡ್ಯಂತ್ರಕ್ಕೆ ಅವಕಾಶ ನೀಡದೇ, ಅರಾಜಕಾತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೇ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸಿಟಿ ರವಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ
ಜನಪ್ರತಿನಿಧಿಗಳೇ ಎಚ್ಚರವಿರಲಿ : ‘ಮಲಗಿ ಆನಂದಿಸುವುದು’ ಹೆಂಗಸರಿಗೆ ಅನಿವಾರ್ಯವಾಗಿರುವುದು ಕುಟುಂಬದಲ್ಲೇ