ಚಿಕ್ಕಮಗಳೂರು: ಸರ್ಕಾರದ ನೈಟ್ ಕರ್ಫ್ಯೂ ಆದೇಶದ ಬಗ್ಗೆ ವ್ಯಾಖ್ಯಾನಿಸಲಾಗಲ್ಲ. ಸರಿ, ತಪ್ಪು ಎಂದು ನಾನು ವ್ಯಾಖ್ಯಾನ ಮಾಡುವುದಕ್ಕೆ ಆಗಲ್ಲ. ಒಮಿಕ್ರಾನ್‌ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಿದ್ದಲ್ಲ. ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರವಹಿಸಬೇಕು ಅಂತ ಸರ್ಕಾರದ ನಿರ್ಣಯದ ವಿರುದ್ಧ ಬಿಜೆಪಿ ನಾಯಕ ಸಿಟಿ ರವಿ ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯದಲ್ಲಿ ನಾಳೆಯಿಂದ (ಡಿಸೆಂಬರ್ 28) ನೈಟ್ ಕರ್ಫ್ಯೂ ಜಾರಿಯಾಗಲಿದೆ. ಸುಮಾರು 10 ದಿನಗಳ ಕಾಲ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಇರಲಿದೆ. ಸರ್ಕಾರದ ಈ ನಿರ್ಣಯಕ್ಕೆ ರಾಜ್ಯದಾದ್ಯಂತ ಬೇಸರ ವ್ಯಕ್ತವಾಗಿದೆ. ಇನ್ನು ಬಿಜೆಪಿ ನಾಯಕ ಸಿಟಿ ರವಿ ಕೂಡಾ, ರಾಜ್ಯ ಸರ್ಕಾರ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಅನಗತ್ಯ ಭಯ ಹುಟ್ಟಿಸುವ ಕೆಲಸ ಯಾರೂ ಮಾಡಬಾರದು ಎಂದಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ಅಲ್ಲಾ, ಈಶ್ವರ, ಜೀಸಸ್ ದೇವರೆಂದು ಒಪ್ಪಿಕೊಂಡರೆ ಜಗತ್ತಿನಲ್ಲಿ ಸಂಘರ್ಷ ಇರೋದಿಲ್ಲ. ಒಬ್ಬ ಹಿಂದೂವಾಗಿ ಜೀಸಸ್, ಅಲ್ಲಾನನ್ನ ದೇವರು ಎಂದು ಒಪ್ಪಿಕೊಳ್ಳಬಹುದು. ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವವಿದೆ. ಆದರೆ ಇಸ್ಲಾಂ ಆದ ತಕ್ಷಣ ಮಸೀದಿ ಹೊರತುಪಡಿಸಿ ದೇವಸ್ಥಾನದ ಬಾಗಿಲು ಬಂದ್ ಆಗುತ್ತದೆ. ಇಸ್ಲಾಂ, ಕ್ರಿಶ್ಚಿಯನ್ ಧರ್ಮಗಳಲ್ಲಿ ಉಳಿದ ದೇವರುಗಳ ಅಸ್ತಿತ್ವದ ಬಗ್ಗೆ ನಿರಾಕರಣೆ ಇದೆ. ಈ ವಿಚಾರದಲ್ಲಿ ಎರಡು ಧರ್ಮಗಳು ಆಲೋಚನೆ ಮಾಡಿದರೆ ಉತ್ತಮ. ಎಷ್ಟು ಮತಿ ಇದ್ಯೋ ಅಷ್ಟು ಮತ ಅನ್ನೋ ಮುಕ್ತತೆಗೆ ಅವಕಾಶ ಸಿಗುತ್ತದೆ. ಜಗತ್ತಿನಲ್ಲಿ ಶಾಂತಿ ನೆಲೆಸಲು ಇರುವ ಅಡೆತಡೆಗಳನ್ನು ನಿವಾರಿಸೋಕೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಆಲೋಚನೆ ಮಾಡಿದರೆ ಜಗತ್ತು ಸುಖವಾಗಿರುತ್ತದೆ ಅಂತ ಚಿಕ್ಕಮಗಳೂರಿನಲ್ಲಿ ಅಭಿಪ್ರಾಯಪಟ್ಟರು.
ಅನಿವಾರ್ಯ ಪರಿಸ್ಥಿತಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದೇವೆ; ಸುಧಾಕರ್
ನಿರ್ಬಂಧಗಳನ್ನು ವಿಧಿಸುವುದು ನಮಗೆ ಖುಷಿ ವಿಚಾರವಲ್ಲ. ಅನಿವಾರ್ಯ ಪರಿಸ್ಥಿತಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದೇವೆ ಅಂತ ಟಿವಿ9ಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕೊರೊನಾ ಹೆಚ್ಚಾದರೆ ಏನು ಮಾಡುವುದು. ಸೋಂಕು ಹೆಚ್ಚಾದರೆ ಪರಿಸ್ಥಿತಿ ನಿಯಂತ್ರಿಸುವುದು ಕಷ್ಟವಾಗುತ್ತೆ. ಆ ರೀತಿ ಆಗಬಾರದೆಂದು ಈಗ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಅದನ್ನ ಉದ್ಯಮದವರು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದರು.
ಚೆನ್ನೈನಲ್ಲಿ ಒಮಿಕ್ರಾನ್‌ಗೆ ಕಠಿಣ ನಿರ್ಬಂಧ ಇಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ಬೇರೆ ರಾಜ್ಯ ನೋಡಿಕೊಂಡು ನಾವು ನಿರ್ಧಾರ ಮಾಡಲು ಆಗಲ್ಲ. ಒಮಿಕ್ರಾನ್ ಕೈಮೀರಿ ಹೋಗುವ ಪರಿಸ್ಥಿತಿಗೆ ತಲುಪುವುದು ಬೇಡ. ಕೇಸ್‌ಗಳು ಹೆಚ್ಚಾದಾಗ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗುತ್ತೆ. ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ಇದ್ದಾಗ ಜನ ಕಂಗಾಲಾಗುತ್ತಾರೆ. ಆ ಪರಿಸ್ಥಿತಿ ಬರಬಾರದೆಂದು ಈಗ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ
ಹರಿದ್ವಾರ ಧಾರ್ಮಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ; ಮಧ್ಯ ಪ್ರವೇಶಿಸುವಂತೆ ಸಿಜೆಐ ರಮಣಗೆ ಪತ್ರ ಬರೆದ 76 ವಕೀಲರು
ATM New Rules: ಹೊಸ ವರ್ಷದಿಂದ ದುಬಾರಿಯಾಗಲಿದೆ ಎಟಿಎಂ ಕ್ಯಾಶ್ ವಿತ್ಡ್ರಾ ಶುಲ್ಕ: ಹೊಸ ದರದ ಮಾಹಿತಿ ಇಲ್ಲಿದೆ
Published On - 1:12 pm, Mon, 27 December 21