AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ವಿರುದ್ಧದ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ನೀಟ್ ಪ್ರತಿಭಟನೆ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇದೇ ವೇಳೆ ಎಫ್‌ಐಆರ್‌ಗೆ ತಡೆ ಕೋರಿ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಮತ್ತೊಂದೆಡೆ, ಚಿಕ್ಕಮಗಳೂರಿನಲ್ಲಿ ರವಿ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ವಿರುದ್ಧದ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ. ರವಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆImage Credit source: tv9
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 27, 2026 | 12:47 PM

Share

ಮುಖ್ಯಾಂಶಗಳು

  • ಸಿಟಿ ರವಿ ವಿರುದ್ಧದ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
  • ಎಫ್‌ಐಆರ್‌ಗೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬಿಜೆಪಿ ಎಂಎಲ್‌ಸಿ
  • ಚಿಕ್ಕಮಗಳೂರಿನ ನಿವಾಸಕ್ಕೆ ಪೊಲೀಸ್ ಭದ್ರತೆ; ಈಗಾಗಲೇ ಎರಡು ನೋಟಿಸ್ ಜಾರಿ

ಚಿಕ್ಕಮಗಳೂರು, ಜುಲೈ 27: ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಈ ಮಧ್ಯೆ ಎಫ್‌ಐಆರ್‌ಗೆ ತಡೆ ಕೋರಿ ಸಿಟಿ ರವಿ (CT Ravi) ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಪ್ರಕರಣದ ಪ್ರತಿಯೊಂದಿಗೆ, ಎಫ್‌ಐಆರ್ ನಂತರ ನಡೆದ ಎಲ್ಲ ಬೆಳವಣಿಗೆಗಳ ಸಮಗ್ರ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಬೆಂಗಳೂರಿಗೆ ತೆರಳಿದ್ದಾರೆ.

ಇತ್ತ, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸಂಖ್ಯೆ 149ಕ್ಕೆ ತಡೆ ನೀಡುವಂತೆ ಕೋರಿ ಸಿಟಿ ರವಿ ಪರ ವಕೀಲರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಲಾಗಿದೆ.

ಜಾಮಿಯಾ ಮಸೀದಿ ಸಮಿತಿಯ ಅರ್ಧಯಕ್ಷರ ದೂರಿನ ಮೇರೆಗೆ ಕ್ರಮ

ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಈಗಾಗಲೇ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ ಸಿ.ಟಿ. ರವಿ ಅವರ ನಿವಾಸಕ್ಕೂ ತನಿಖಾಧಿಕಾರಿ ಹಾಗೂ ನಗರ ಠಾಣೆ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ನೋಟಿಸ್ ಅಂಟಿಸಿದ್ದರು.

ಸಿಟಿ ರವಿ ನಿವಾಸಕ್ಕೆ ಹೆಚ್ಚಿನ ಭದ್ರತೆ

ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದರಿಂದ ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ. ರವಿ ಅವರ ನಿವಾಸಕ್ಕೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸ್ಥಳೀಯ ಪೊಲೀಸ್ ಸಿಬ್ಬಂದಿ ಹಾಗೂ ಡಿಎಆರ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಎದೆ ಸೀಳಿದರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ, ನೀಟ್ ಪರೀಕ್ಷೆಗೂ ಏನು ಸಂಬಂಧ?: ಸಿ.ಟಿ. ರವಿ ವಿವಾದಾತ್ಮಕ ಹೇಳಿಕೆ

ಸಿಟಿ ರವಿ ಹೇಳಿದ್ದೇನು?

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ನಡೆದ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ್ದ ಸಿಟಿ ರವಿ, ‘ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಅವರು ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದರೆ ಅದರ ಅರ್ಥವೇನು? ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಮೋದಿ ಹಠಾವೋ ಎಂದು ಘೋಷಣೆ ಕೂಗಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಗಳಿಗೆ ಯಾವುದೇ ಸಂಬಂಧವಿಲ್ಲ. ಭಾರತವನ್ನು ತುಂಡರಿಸಬೇಕು ಎಂದು ಹೇಳಿದ ತುಕಡೆ ಗ್ಯಾಂಗ್‌ಗಳು ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು’ ಎಂದು ಹೇಳಿದ್ದರು. ಈ ಹೇಳಿಕೆ ವ್ಯಾಪಕ ವಿವಾದಕ್ಕೆ ಕಾರಣವಾಗಿ, ಅವರ ವಿರುದ್ಧ ದೂರು ದಾಖಲಾಗಿ ಎಫ್‌ಐಆರ್ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ