ನಾನು ಸಿಎಂ ಆಗಬೇಕು ಎಂದು ಗಡ್ಡ ಬಿಟ್ಟಿಲ್ಲ: ಸಿ ಟಿ ರವಿ ಸ್ಪಷ್ಟನೆ
Mekedatu Project: ಬೆಂಗಳೂರಿನಲ್ಲಿ ಶೇ.30ರಷ್ಟು ತಮಿಳುನಾಡಿನವರೇ ಇದ್ದಾರೆ. ದೇಶದ ಎಲ್ಲಾ ರಾಜ್ಯದ ಜನರು ಬೆಂಗಳೂರಿನಲ್ಲಿದ್ದಾರೆ. ಎರಡೂ ರಾಜ್ಯಗಳಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲಿ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ರಾಜಕಾರಣ ಮಾಡದೇ, ವಾಸ್ತವಿಕ ನೆಲೆಯಲ್ಲಿ ಯೋಚನೆ ಮಾಡಲಿ ಎಂದು ಅವರು ಸಲಹೆ ನೀಡಿದ್ದಾರೆ.
ಚಿಕ್ಕಮಗಳೂರು: ನಾನಂತೂ ಸಿಎಂ ಆಗಬೇಕು ಎಂದು ಗಡ್ಡ ಬಿಟ್ಟಿಲ್ಲ ಎಂದು ಚಿಕ್ಕಮಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಸ್ಪಷ್ಟನೆ ನೀಡಿದ್ದಾರೆ. ಮುಂದಿನ ವರ್ಷ ಮಾರ್ಚ್ ತಿಂಗಳಿಗೆ ಗಡ್ಡಧಾರಿಯೋರ್ವರು ಎಂದು ವಿಜಯನಗರ ಮೈಲಾರಲಿಂಗ ಭವಿಷ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟಿದ್ದೇನೆ. ಗಡ್ಡಧಾರಿ ಬಗ್ಗೆ ಭವಿಷ್ಯ ನಿಜವಾದ್ರೆ ಬಹಳ ಜನ ಗಡ್ಡ ಬಿಡಬಹುದು. ಸಿಎಂ ಆಕಾಂಕ್ಷಿಗಳೆಲ್ಲರೂ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ಲಘು ಹಾಸ್ಯ ಮಾಡುತ್ತ ಸ್ಪಷ್ಟನೆ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ (Mekedatu Project) ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ (Annamalai) ವಿರೋಧ ವಿಚಾರವಾಗಿಯೂ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಶೇ.30ರಷ್ಟು ತಮಿಳುನಾಡಿನವರೇ ಇದ್ದಾರೆ. ದೇಶದ ಎಲ್ಲಾ ರಾಜ್ಯದ ಜನರು ಬೆಂಗಳೂರಿನಲ್ಲಿದ್ದಾರೆ. ಎರಡೂ ರಾಜ್ಯಗಳಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಲಿ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ರಾಜಕಾರಣ ಮಾಡದೇ, ವಾಸ್ತವಿಕ ನೆಲೆಯಲ್ಲಿ ಯೋಚನೆ ಮಾಡಲಿ ಎಂದು ಸಲಹೆ ನೀಡಿದ್ದಾರೆ.
ಸಿಎಂ ಆಗೋಕೆ ಯೋಗವೂ ಇರಬೇಕಲ್ಲವೇ? ಈಗ ಬಸವರಾಜ ಬೊಮ್ಮಾಯಿ ಅವರಿಗೆ ಯೋಗ ಕೂಡಿ ಬಂದಿದೆ. ಅವರು ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ. ಬಸವರಾಜ ಬೊಮ್ಮಾಯಿ ನಮ್ಮ ಸ್ನೇಹಿತರು. ಅವರಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತೇನೆ. ಸಾಮಾಜಿಕ, ಪ್ರಾದೇಶಿಕ ಸಮತೋಲನ ಎರಡನ್ನು ಕಾಪಾಡಿಕೊಂಡು ವಿಸ್ತರಣೆ ಮಾಡಲಿ ಎಂದು ಹಾರೈಸಿದರು.
ಇದನ್ನೂ ಓದಿ:
ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ದೇವೇಗೌಡರಿಂದ ನೂತನ ಸಿಎಂಗೆ ಸನ್ಮಾನ
ಕರ್ನಾಟಕದ 13 ಜಿಲ್ಲೆಗಳಲ್ಲಿ ಪ್ರವಾಹ; ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ: ಬಸವರಾಜ ಬೊಮ್ಮಾಯಿ ಘೋಷಣೆ
(CT Ravi says I dont growth my beard to become Karnataka CM)