ವಿನಯ್ ಗುರೂಜಿಗೂ ತಟ್ಟಿದ ಸೈಬರ್ ಕಳ್ಳರ ಕಾಟ, ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಡಿಮ್ಯಾಂಡ್

ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಿ ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ.

ವಿನಯ್ ಗುರೂಜಿಗೂ ತಟ್ಟಿದ ಸೈಬರ್ ಕಳ್ಳರ ಕಾಟ, ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಡಿಮ್ಯಾಂಡ್
ವಿನಯ್ ಗುರೂಜಿ
Follow us
ಆಯೇಷಾ ಬಾನು
| Updated By: Digi Tech Desk

Updated on:May 23, 2023 | 3:16 PM

ಚಿಕ್ಕಮಗಳೂರು: ಟೆಕ್ನಾಲಜಿ ಬೆಳೆಯುತ್ತಿದ್ದಂತೆ ಮೋಸ, ವಂಚನೆಗಳ ಜಾಲ ಕೂಡ ಬೆಳೆಯುತ್ತಿದೆ. ನಿನ್ನೆಯಷ್ಟೆ ವಿಜಯನಗರ ಎಸ್​ಪಿ(Vijayanagara SP) ಹರಿಬಾಬು ಅವರ ಹೆಸರಿನಲ್ಲಿ ನಕಲಿ ಫೇಸ್​​ಬುಕ್ ಅಕೌಂಟ್​​ ತೆರೆದು ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂಬ ಬಗ್ಗೆ ಪ್ರಕರಣ ದಾಖಲಾಗಿತ್ತು. ಈಗ ಇದೇ ರೀತಿಯ ಪ್ರಕರಣ ಮರುಕಳಿಸಿದೆ. ಅವಧೂತ ವಿನಯ್ ಗುರೂಜಿ(Vinay Guruji) ಹೆಸರಲ್ಲಿ ಖದೀಮರು ನಕಲಿ ಅಕೌಂಟ್ ಸೃಷ್ಟಿಸಿ ಹಣ ವಸೂಲಿ ಮಾಡುತ್ತಿದ್ದು ಈ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಿ ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ. ಕಿಡಿಗೇಡಿಗಳು ಭಯ ಹುಟ್ಟಿಸುವ ರೀತಿ ಮೆಸೇಜ್​ಗಳನ್ನು ಮಾಡಿ ಹಣ ಸುಲಿಗೆಗೆ ಮುಂದಾಗಿದ್ದಾರೆ. 45 ದಿನ ನಿಮಗೆ ಗಂಡಾಂತರ ಇದೆ. ಕಾಳ ಸರ್ಪ ದೋಷವಿದೆ ನಿಮಗೆ ಎಂದು ಸುಳ್ಳು ಸುಳ್ಳು ಮೆಸೇಜ್ ಕಳಿಸಿ, ಭಯ ಹುಟ್ಟಿಸಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಆಶ್ರಮದ ಸಿಬ್ಬಂದಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಾಗೂ ಆಶ್ರಮಕ್ಕೂ ಈ ಅಕೌಂಟ್​ಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ‌‌ ನೀಡಿದ್ದಾರೆ. ಮತ್ತೊಂದೆಡೆ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿದ್ದು ಫೇಕ್ ಅಕೌಂಟ್ ನಿಂದ ಹಣ ಕೇಳಿದ್ರೆ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳಿಗೂ ಹ್ಯಾಕರ್ಸ್ ಕಾಟ: ವಿಜಯನಗರ ಎಸ್ಪಿ ಹೆಸರಲ್ಲಿ ನಕಲಿ ಖಾತೆ , ಹಣಕ್ಕೆ ಬೇಡಿಕೆ!

ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ

ಬೆಂಗಳೂರು: ಹಿಂದೂಪರ ಕಾರ್ಯಕರ್ತರಿಗಾಗಿ ಸಹಾಯವಾಣಿ ಓಪನ್​ ಮಾಡಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಹಿಂದೂಪರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನ ಖಂಡಿಸಿ ಮತ್ತು ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ರಾಜ್ಯ ಶ್ರೀರಾಮಸೇನೆ ಸಂಘಟನೆಯ ಪ್ರಮುಖರ ಸಂಪರ್ಕಕ್ಕಾಗಿ ಅಧಿಕೃತ ನಂಬರನ್ನು ಬಿಡುಗಡೆ ಮಾಡಲಾಗಿದೆ. ಹಿಂದೂಪರ ಕಾರ್ಯಕರ್ತರು ಈ ನಂಬರ್ ಗೆ ಕರೆ ಮಾಡಿ 9945288819 ಮಾಹಿತಿ ನೀಡಬಹುದು. ವರ್ಷದ 365 ದಿನವು, ದಿನದ 24 ಗಂಟೆ ಈ ನಂಬರ್​ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 1:07 pm, Tue, 23 May 23

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ