AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್​​ ಈಗ ಶೃಂಗೇರಿಗೆ ಹೊಸ ಶಾಸಕ: MLA ಪ್ರಮಾಣಪತ್ರ ಪಡೆದ ಬಿಜೆಪಿಗ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ 52 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ನಡೆದ ಮರು ಎಣಿಕೆಯಲ್ಲಿ ಜೀವರಾಜ್ ವಿಜೇತರಾಗಿ, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡಗೆ ಸೋಲಾಗಿದೆ. ಈ ಗೆಲುವಿನೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಒಂದು ಪ್ರಮುಖ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬಂದಂತಾಗಿದೆ. ಶಾಸಕ ಸ್ಥಾನದ ಪ್ರಮಾಣಪತ್ರವನ್ನೂ ಜೀವರಾಜ್​​ ಸ್ವೀಕರಿಸಿದ್ದಾರೆ.

ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್​​ ಈಗ ಶೃಂಗೇರಿಗೆ ಹೊಸ ಶಾಸಕ: MLA ಪ್ರಮಾಣಪತ್ರ ಪಡೆದ ಬಿಜೆಪಿಗ
MLA ಪ್ರಮಾಣಪತ್ರ ಪಡೆದ ಜೀವರಾಜ್​​Image Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:May 04, 2026 | 10:23 AM

Share

ಚಿಕ್ಕಮಗಳೂರು, ಮೇ 04: ಭಾರಿ ಕುತೂಹಲ ಮೂಡಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಡಿ.ಎನ್. ಜೀವರಾಜ್ ಚುನಾವಣಾ ಅಧಿಕಾರಿಗಳಿಂದ ಅಂತಿಮವಾಗಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಆ ಮೂಲಕ ಮರುಎಣಿಕೆಯಲ್ಲಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡಗೆ ಸೋಲಾಗಿದೆ. ಅಂಚೆ ಮತಗಳ ಮರು ಎಣಿಕೆ ವೇಳೆ 52 ಮತಗಳಿಂದ ಜೀವರಾಜ್​ ಗೆಲುವು ಸಾಧಿಸಿದ್ದು,  ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಪೈಕಿ ಒಂದೀಗ ಬಿಜೆಪಿ ತೆಕ್ಕೆಗೆ ಬಂದಂತಾಗಿದೆ.

ಪಟ್ಟು ಹಿಡಿದು ಪ್ರಮಾಣಪತ್ರ ಪಡೆದ ಜೀವರಾಜ್

ಇನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನಿನ್ನೆ ಚುನಾವಣಾ ಆಯೋಗದಿಂದ ಮೇಲ್ ಮೂಲಕ ಮಾಹಿತಿ ನೀಡಲಾಗಿತ್ತು. ಮಾಹಿತಿ ಬಂದ ಬೆನ್ನಲ್ಲೇ ನಗರದ ಬೇಲೂರು ರಸ್ತೆಯಲ್ಲಿರುವ ಚುನಾವಣಾಧಿಕಾರಿ ನಿವಾಸಕ್ಕೆ ಡಿ.ಎನ್. ಜೀವರಾಜ್ ಬಂದಿದ್ದು, ಶಾಸಕ ಸ್ಥಾನದ ಪ್ರಮಾಣಪತ್ರ ನೀಡುವಂತೆ ಕೇಳಿದ್ದಾರೆ. ಈ ವೇಳೆ ಕಚೇರಿಯಲ್ಲಿ ನೀಡೋದಾಗಿ ಚುನಾವಣಾಧಿಕಾರಿ ಹೇಳಿದರೂ, ಇಲ್ಲ ನಾನು ಬಂದಿದ್ದೇನೆ ಪ್ರಮಾಣ ಪತ್ರ ನೀಡಿ ಎಂದು ಹೇಳಿ ಕೊನೆಗೂ ಅದನ್ನು ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ; ಸಚಿವ ಪ್ರಲ್ಹಾದ ಜೋಶಿ

2023ರ ವಿಧಾನಸಭಾ ಚುನಾವಣೆ ಶೃಂಗೇರಿ ಕ್ಷೇತ್ರದ ಫಲಿತಾಂಶ ಭಾರಿ ಕುತೂಹಲ ಮೂಡಿಸಿತ್ತು. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋತಿದ್ದರು. ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳ ಪೈಕಿ 279 ಮತಗಳು ತಿರಸ್ಕೃತಗೊಂಡಿದ್ದವು. ಹೀಗಾಗಿ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಜೀವರಾಜ್, ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಇದನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:08 am, Mon, 4 May 26

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More