ದತ್ತಜಯಂತಿ ಹಿನ್ನೆಲೆ: 3 ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ನಿರ್ಬಂಧ ಹೇರಲಾಗಿದೆ. ಜಿಲ್ಲೆಯ ಬೇರೆ ಪ್ರವಾಸಿ ತಾಣಗಳಿಗೆ ಯಾವುದೇ ನಿರ್ಬಂಧವಿಲ್ಲ.

ದತ್ತಜಯಂತಿ ಹಿನ್ನೆಲೆ: 3 ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
ದತ್ತಪೀಠ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on: Dec 10, 2021 | 9:37 PM

ಚಿಕ್ಕಮಗಳೂರು: ದತ್ತಪೀಠದಲ್ಲಿ 3 ದಿನಗಳ ಕಾಲ ದತ್ತ ಜಯಂತಿ ಹಿನ್ನೆಲೆ ಮುಳ್ಳಯ್ಯನಗಿರಿ- ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 16 ರಿಂದ 20 ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಡಿಸಿ ರಮೇಶ್ ಆದೇಶ ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ನಿರ್ಬಂಧ ಹೇರಲಾಗಿದೆ. ಜಿಲ್ಲೆಯ ಬೇರೆ ಪ್ರವಾಸಿ ತಾಣಗಳಿಗೆ ಯಾವುದೇ ನಿರ್ಬಂಧವಿಲ್ಲ. ಹೋಟೆಲ್, ರೆಸಾರ್ಟ್, ಹೋಂಸ್ಟೇ ಬುಕ್ ಆಗಿದ್ರೆ ವಾಸ್ತವ್ಯಕ್ಕೆ ನಿರ್ಬಂಧವಿಲ್ಲ ಎಂದು ಹೇಳಲಾಗಿದೆ.

ಅಯ್ಯಪ್ಪ ಮಾಲೆಯಂತೆ ಈ ವರ್ಷದಿಂದ ಹರ ಮಾಲೆಗೆ ಚಾಲನೆ ನೀಡಲಾಗುವುದು: ವಚನಾನಂದ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹರಜಾತ್ರೆ ಲೋಗೋ ಬಿಡುಗಡೆ ಮಾಡಲಾಗಿದೆ. ಜನವರಿ 14 ಹಾಗೂ 15 ರಂದು ಹರ ಜಾತ್ರೆ ನಡೆಯಲಿದೆ. ಅಯ್ಯಪ್ಪ ಮಾಲೆಯಂತೆ ಈ ವರ್ಷದಿಂದ ಹರ ಮಾಲೆಗೆ ಚಾಲನೆ ನೀಡಲಾಗುವುದು. 21 ದಿನ ಹರ ಮಾಲೆ ವ್ರತ ಮಾಡಿ ಭಕ್ತರು ಜಾತ್ರೆಗೆ ಬರಲಿದ್ದಾರೆ. ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮಾಲೆ ಧರಿಸುವುದಾಗಿ ಭರವಸೆ ನೀಡಿದ್ದಾರೆ. ಹರ ಜಾತ್ರೆಯಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳಿವೆ. ರಾಷ್ಟ್ರೀಯ ಶಿಕ್ಷಣ ನೀತಿ, ಉದ್ಯಮಿಯಾಗು ಉದ್ಯೋಗ ನೀಡು ಕುರಿತು ಜಾಗೃತಿ ಸಹ ಮಾಡಲಾಗುತ್ತೆ ಎಂದು ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಪಂಚಮಸಾಲಿಗೆ ಮೀಸಲಾತಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ, ರಾಜ್ಯದಲ್ಲಿ 2ಎ ಮೀಸಲಾತಿ ನೀಡಲು ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ. ಸಿಎಂ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಕಾರ್ಮಿಕರ ಪಕ್ಕದಲ್ಲೇ ಮಲಗಿದ್ದ ನಾಯಿಯ ಮೇಲೆ ಚಿರತೆ ದಾಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಇದನ್ನೂ ಓದಿ: ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆ: ಸರ್ಕಾರದ ಮೇಲೆ ಒತ್ತಡ ಹೇರಲು ಮೂರು ನಿರ್ಣಯ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ