ಚಿಕ್ಕಮಗಳೂರು: ದತ್ತಪೀಠದಲ್ಲಿ 3 ದಿನಗಳ ಕಾಲ ದತ್ತ ಜಯಂತಿ ಹಿನ್ನೆಲೆ ಮುಳ್ಳಯ್ಯನಗಿರಿ- ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 16 ರಿಂದ 20 ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಡಿಸಿ ರಮೇಶ್ ಆದೇಶ ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ನಿರ್ಬಂಧ ಹೇರಲಾಗಿದೆ. ಜಿಲ್ಲೆಯ ಬೇರೆ ಪ್ರವಾಸಿ ತಾಣಗಳಿಗೆ ಯಾವುದೇ ನಿರ್ಬಂಧವಿಲ್ಲ. ಹೋಟೆಲ್, ರೆಸಾರ್ಟ್, ಹೋಂಸ್ಟೇ ಬುಕ್ ಆಗಿದ್ರೆ ವಾಸ್ತವ್ಯಕ್ಕೆ ನಿರ್ಬಂಧವಿಲ್ಲ ಎಂದು ಹೇಳಲಾಗಿದೆ.
ಅಯ್ಯಪ್ಪ ಮಾಲೆಯಂತೆ ಈ ವರ್ಷದಿಂದ ಹರ ಮಾಲೆಗೆ ಚಾಲನೆ ನೀಡಲಾಗುವುದು: ವಚನಾನಂದ ಸ್ವಾಮೀಜಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹರಜಾತ್ರೆ ಲೋಗೋ ಬಿಡುಗಡೆ ಮಾಡಲಾಗಿದೆ. ಜನವರಿ 14 ಹಾಗೂ 15 ರಂದು ಹರ ಜಾತ್ರೆ ನಡೆಯಲಿದೆ. ಅಯ್ಯಪ್ಪ ಮಾಲೆಯಂತೆ ಈ ವರ್ಷದಿಂದ ಹರ ಮಾಲೆಗೆ ಚಾಲನೆ ನೀಡಲಾಗುವುದು. 21 ದಿನ ಹರ ಮಾಲೆ ವ್ರತ ಮಾಡಿ ಭಕ್ತರು ಜಾತ್ರೆಗೆ ಬರಲಿದ್ದಾರೆ. ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಕೂಡ ಮಾಲೆ ಧರಿಸುವುದಾಗಿ ಭರವಸೆ ನೀಡಿದ್ದಾರೆ. ಹರ ಜಾತ್ರೆಯಲ್ಲಿ ಹಲವು ವಿಶಿಷ್ಟ ಕಾರ್ಯಕ್ರಮಗಳಿವೆ. ರಾಷ್ಟ್ರೀಯ ಶಿಕ್ಷಣ ನೀತಿ, ಉದ್ಯಮಿಯಾಗು ಉದ್ಯೋಗ ನೀಡು ಕುರಿತು ಜಾಗೃತಿ ಸಹ ಮಾಡಲಾಗುತ್ತೆ ಎಂದು ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಪಂಚಮಸಾಲಿಗೆ ಮೀಸಲಾತಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ, ರಾಜ್ಯದಲ್ಲಿ 2ಎ ಮೀಸಲಾತಿ ನೀಡಲು ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ. ಸಿಎಂ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ವಚನಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಕಾರ್ಮಿಕರ ಪಕ್ಕದಲ್ಲೇ ಮಲಗಿದ್ದ ನಾಯಿಯ ಮೇಲೆ ಚಿರತೆ ದಾಳಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಇದನ್ನೂ ಓದಿ: ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆ: ಸರ್ಕಾರದ ಮೇಲೆ ಒತ್ತಡ ಹೇರಲು ಮೂರು ನಿರ್ಣಯ