ದತ್ತಜಯಂತಿ: ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಇಂದಿನಿಂದ 2 ದಿನ ಮದ್ಯ ಮಾರಾಟ ಬಂದ್

ಬಾಬಾ ಬುಡನ್‌ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಹಾಗೂ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಶೋಭಯಾತ್ರೆಯ ಅಂಗವಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಯಾವ ಯಾವ ತಾಲೂಕಿನಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ದತ್ತಜಯಂತಿ: ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಇಂದಿನಿಂದ 2 ದಿನ ಮದ್ಯ ಮಾರಾಟ ಬಂದ್
ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ ಹಾಗೂ ಮದ್ಯ ಮಾರಾಟ ಬಂದ್ ಆದೇಶದ ಪ್ರತಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on:Dec 13, 2024 | 9:42 AM

ಚಿಕ್ಕಮಗಳೂರು, ಡಿಸೆಂಬರ್ 13: ಚಿಕ್ಕಮಗಳೂರು ಜಿಲ್ಲೆಯ ಇನಾಂ ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಅಂಗವಾಗಿ ಜಿಲ್ಲೆಯ ಹಲವೆಡೆ ಇಂದಿನಿಂದ 2 ದಿನ ಮದ್ಯಮಾರಾಟ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ವಿಹೆಚ್​ಪಿ ಹಾಗೂ ಬಜರಂಗದಳ ನೇತೃತ್ವದಲ್ಲಿ ದತ್ತಜಯಂತಿ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್​ ಆದೇಶ ಹೊರಡಿಸಿದ್ದಾರೆ.

ಎಲ್ಲೆಲ್ಲಿ ಮದ್ಯ ಮಾರಾಟ ಬಂದ್?

ಚಿಕ್ಕಮಗಳೂರು, ಕಡೂರು, ಮೂಡಿಗೆರೆ, ಕೊಪ್ಪ, ಎನ್ಆರ್​​ಪುರ, ತರೀಕೆರೆ, ಶೃಂಗೇರಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ.

ಇಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ನಾಳೆ ದತ್ತ ಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದರ್ಶನ ಇರಲಿದೆ.

ಚಿಕ್ಕಮಗಳೂರಿಗೂ ತಟ್ಟಿದ ವಾಯುಭಾರ ಕುಸಿತದ ಪರಿಣಾಮ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪರಿಣಾಮ ಕಾಫಿನಾಡು ಚಿಕ್ಕಮಗಳೂರಿಗೂ ತಟ್ಟಿದೆ. ಕೊರೆಯುವ ಚಳಿ, ತುಂತುರು ಮಳೆಯಿಂದ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರೀ ಚಳಿ, ದಟ್ಟ ಮಂಜು ಆವರಿಸಿದೆ. ಇದರಿಂದಾಗಿ ದತ್ತಜಯಂತಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಸಾವಿರಾರು ಪೊಲೀಸರು ಪರದಾಟ ಪಡುವಂತಾಗಿದೆ.

ದತ್ತಜಯಂತಿ ಭದ್ರತೆಗಾಗಿ ರಾಜ್ಯದಾದ್ಯಂತ ವಿವಿಧೆಡೆಗಳಿಂದ ಪೊಲೀಸರು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ. ಇದೀಗ ಚಿಕ್ಕಮಗಳೂರು ನಗರ ಸೇರಿದಂತೆ ಚಂದ್ರದ್ರೋಣ ಪರ್ವತ ಭಾಗದಲ್ಲಿ ತುಂತುರು ಮಳೆ, ಚಳಿ ಹೆಚ್ಚಾಗಿರುವುದು ಅವರಿಗೆ ಸಮಸ್ಯೆ ತಂದೊಡ್ಡಿದೆ.

ಇದನ್ನೂ ಓದಿ: 25ನೇ ವರ್ಷದ ದತ್ತಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ‌ಹೈಅಲರ್ಟ್

ಸಿಟಿ ರವಿ ಸೇರಿ ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ

ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಜಾಗದಲ್ಲಿ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ, ದತ್ತಜಯಂತಿ ಸಂದರ್ಭದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಸೇರಿದಂತೆ ದತ್ತಮಾಲಾಧಾರಿಗಳಿಂದ ಭಿಕ್ಷಾಟನೆ ನೆರವೇರಿತು. ಚಿಕ್ಕಮಗಳೂರು ನಗರದ ಬಸವನಹಳ್ಳಿ ರಸ್ತೆಯಲ್ಲಿ ಸಿಟಿ ರವಿ ಹಾಗೂ ಇತರ ದತ್ತಮಾಲಾಧಾರಿಗಳು ಮನೆ ಮನೆಗಳಿಗೆ ತೆರಳಿ ಪಡಿ ಸಂಗ್ರಹ ಮಾಡಿದರು. ಅಕ್ಕಿ, ಕಾಯಿ, ಬೆಲ್ಲವನ್ನು ಪಡಿ ರೂಪದಲ್ಲಿ ಸಂಗ್ರಹಿಸಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Fri, 13 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ