Dattapeeta: ಇಂದು ಚಿಕ್ಕಮಗಳೂರಿನಲ್ಲಿ ಶ್ರೀಗುರುದತ್ತಾತ್ರೇಯ ಜಯಂತಿ, ಆರ್ ಅಶೋಕ್ ಭೇಟಿ
ಚಂದ್ರದ್ರೋಣ ಪರ್ವತದಲ್ಲಿರುವ ವಿವಾದಿತ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು (ಡಿ.25) ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ.
ಚಿಕ್ಕಮಗಳೂರು, ಡಿಸೆಂಬರ್ 25: ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ (Dattapeeta) ಇಂದು (ಡಿ.25) ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ. ಶ್ರೀರಾಮಸೇನೆ (SriRamsena), ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (VHP) ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿಗೆ ಚಿಕ್ಕಮಗಳೂರು ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದತ್ತಪೀಠ ಸೇರಿದಂತೆ ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್ಗಳನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಡಿ.26ರಂದು ನಾಗೇನಹಳ್ಳಿ ದರ್ಗಾದಲ್ಲೂ ದತ್ತ ಜಯಂತಿ ಆಚರಣೆಗೆ ಶ್ರೀರಾಮಸೇನೆ ನಿರ್ಧಾರ
ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಸಿಸಿಕ್ಯಾಮರಾ, ಡ್ರೋನ್ ಕಣ್ಗಾವಲು ಇರಿಲಸಾಗಿದೆ. ರಾಜ್ಯಾದ್ಯಂತ ದತ್ತಮಾಲಾ ಧರಿಸಿರುವ 5000ಕ್ಕೂ ಹೆಚ್ಚು ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕರ್ತರು ಶ್ರೀಗುರು ದತ್ತಾತ್ರೇಯರ ಪಾದುಕೆ ದರ್ಶನ ಪಡೆದು ಹೋಮ, ಪೂಜೆ ನರವೇರಿಸಲಿದ್ದಾರೆ.
ಶೋಭಾಯಾತ್ರೆಯಲ್ಲಿ 80,000ಕ್ಕೂ ಹೆಚ್ಚು ಜನ ಭಾಗಿ
ಮಧ್ಯಾಹ್ನ 2 ಗಂಟೆಗೆ ಶೋಭಾಯಾತ್ರೆ ಪ್ರಾರಂಭವಾಗಲಿದೆ. ನಗರದ ಕಾಮಧೇನು ಗಣಪತಿ ದೇವಾಲಯದಿಂದ ಆಜಾದ್ ವೃತದ ವರೆಗೂ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ 80,000ಕ್ಕೂ ಹೆಚ್ಚು ಜನರು ಭಾಗಿಯಾಗುವ ಸಾಧ್ಯತೆ ಇದೆ. ಶೋಭಾಯಾತ್ರೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ನಾಯಕ ಸಿಟಿ ರವಿ, ಸುನಿಲ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ ಶೋಭಾ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ದತ್ತಪೀಠಕ್ಕೆ ಆರ್.ಅಶೋಕ್ ಭೇಟಿ
ವಿಧಾಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಇದೇ ಮೊದಲ ಬಾರಿಗೆ ದತ್ತಮಾಲೆ ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಅಶೋಕ್ ಸೋಮವಾರ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಚಿಕ್ಕಮಗಳೂರು ನಗರದಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:46 am, Mon, 25 December 23