Dattapeeta: ದತ್ತಜಯಂತಿ; ಚಿಕ್ಕಮಗಳೂರಿನ ಅಂಗಡಿ-ಮುಂಗಟ್ಟುಗಳು ಬಂದ್, ಸಂಚಾರ ನಿಷೇಧ​​

ದತ್ತಜಯಂತಿ ಕೊನೆಯ ದಿನವಾದ ಇಂದು (ಡಿ.26) ದತ್ತಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಪ್ರಮುಖ‌ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. . ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿರುವ ಎಲ್ಲಾ ಅಂಗಡಿಗಳು ಸೇರಿದಂತೆ ನಗರದ ಎಲ್ಲ ಹೋಟೆಲ್, ಅಂಗಡಿ-ಮುಗ್ಗಟ್ಟುಗಳನ್ನು ತೆರೆಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Dattapeeta: ದತ್ತಜಯಂತಿ; ಚಿಕ್ಕಮಗಳೂರಿನ ಅಂಗಡಿ-ಮುಂಗಟ್ಟುಗಳು ಬಂದ್, ಸಂಚಾರ ನಿಷೇಧ​​
ದತ್ತಪೀಠ
Edited By:

Updated on: Dec 26, 2023 | 8:04 AM

ಚಿಕ್ಕಮಗಳೂರು, ಡಿಸೆಂಬರ್​ 26: ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ (Dattapeeta) ದತ್ತಜಯಂತಿ ನಡೆಯುತ್ತಿದೆ. ಕೊನೆಯ ದಿನವಾದ ಇಂದು (ಡಿ.26) ದತ್ತಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು (Chikkamagaluru) ನಗರದ ಪ್ರಮುಖ‌ ರಸ್ತೆಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿರುವ ಎಲ್ಲಾ ಅಂಗಡಿಗಳು ಸೇರಿದಂತೆ ನಗರದ ಎಲ್ಲ ಹೋಟೆಲ್, ಅಂಗಡಿ-ಮುಗ್ಗಟ್ಟುಗಳನ್ನು ತೆರೆಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಆಲ್ದೂರು, ಬಣಕಲ್, ಕೊಟ್ಟಿಗೆಹಾರ, ಹಾಂದಿ, ವಾಸ್ತರೆ ಗ್ರಾಮಗಳು ಸಹ ಬಂದ್ ಇರಲಿವೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ದತ್ತಮಾಲಾಧಾರಿಗಳು ಶ್ರೀಗುರುದತ್ತಾತ್ರೇಯರ ದರ್ಶನಕ್ಕೆ ಆಗಮಿಸಿದ್ದಾರೆ. ಇಂದು (ಮಂಗಳವಾರ) ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ ಹೋಮ‌ ಪೂಜೆ ನೆರವೇರಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್​ (VHP), ಬಜರಂಗದಳ ನೇತೃತ್ವದಲ್ಲಿ ದತ್ತಜಯಂತಿ ನಡೆಯುತ್ತಿದೆ.

ಸರ್ಕಾರ ಮುಂದೆ ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ

1. ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು. 2. ದತ್ತಪೀಠದಲ್ಲಿ ಇಸ್ಲಾಂ ಚಟುವಟಿಕೆಗೆ ಅವಕಾಶ ನೀಡಬಾರದು. 3. ದತ್ತಪೀಠದಲ್ಲಿ ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು. 4. ಉರ್ದು ನಾಮಫಲಕವನ್ನ ತೆಗೆಯಬೇಕು. 5. ದತ್ತಪೀಠದಲ್ಲಿರುವ ಗೋರಿಗಳ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:  ದತ್ತಪೀಠ, ದತ್ತಮಾಲೆ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆಯಾಚಿಸಿದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ

ಹೆಸರಿನ ವಿವಾದ

ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಎನ್ನುವುದು ಮೂಲ ಸರ್ಕಾರಿ ದಾಖಲಾತಿಗಳಲ್ಲಿ ಇರುವ ಹೆಸರು. ಆ ಸ್ಥಳವನ್ನು ಇನಾಂ ದತ್ತಾತ್ರೇಯ ಪೀಠ, (ಐಡಿ ಪೀಠ) ಎಂದೂ ಹೆಸರಿಸುತ್ತಾರೆ. ಆದರೆ ಕೆಲವೆಡೆ ‘ಬಾಬಾಬುಡನ್​ಗಿರಿ’ ಎಂದೂ ಇನ್ನೂ ಕೆಲವೆಡೆ ದತ್ತಪೀಠ ಎಂದೂ ಕರೆಯುತ್ತಿದ್ದಾರೆ. ಈ ಹೆಸರಿನ ವಿಚಾರ ಸಣ್ಣದಲ್ಲ. ಯಾವ ಹೆಸರಿನಿಂದ ಕರೆಯಬೇಕು ಎಂಬ ಬಗ್ಗೆ ಹಿಂದೂ-ಮುಸ್ಲಿಂ ಧರ್ಮದ ಅನುಯಾಯಿಗಳ ನಡುವೆ ಹಲವು ದಶಕಗಳಿಂದಲೂ ನಿರಂತರವಾಗಿ ಹೋರಾಟ ನಡೆಯುತ್ತಲೇ ಇದೆ. ಹಿಂದೂ-ಮುಸ್ಲಿಂ ಭಾವೈಕ್ಯತಾ ಕೇಂದ್ರವಾಗಿರುವ ಈ ಸ್ಥಳದ ಉಮೇದುವಾರಿಕೆ ನಮ್ಮದು ಎಂದು ಎರಡು ಧರ್ಮದವರು ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮಂಡಿಸುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:41 am, Tue, 26 December 23