Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್​: ಸಿಟಿ ರವಿಗೆ ಬೆದರಿಕೆ ಪತ್ರ

ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ವ್ಯಕ್ತವಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಬೆದರಿಕೆ ಬಂದಿದೆ. ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಿಟಿ ರವಿ ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್​: ಸಿಟಿ ರವಿಗೆ ಬೆದರಿಕೆ ಪತ್ರ
ಸಿಟಿ ರವಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Jan 11, 2025 | 11:33 AM

ಚಿಕ್ಕಮಗಳೂರು, ಜನವರಿ 11: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ (Laxmi Hebbalkar)​ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್​​ ಸದಸ್ಯ ಸಿಟಿ ರವಿಗೆ (CT Ravi) ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. “ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್​ ಬಸವನಹಳ್ಳಿ ಪೊಲೀಸ್ ‌ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ, ಅಪರಿಚಿತ ವ್ಯಕ್ತಿಗಳಿಂದ ಎಂಎಲ್​ಸಿ ಸಿ‌.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ಹೇಳಿದರು.

ಬೆದರಿಕೆ ಪತ್ರದಲ್ಲಿ ಏನಿದೆ?

15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರಾಗಿ ಇರಿ ಎಂಬ ಬೆದರಿಕೆ ಪತ್ರ ಬಂದಿದೆ.

ಇದನ್ನೂ ಓದಿ: ಸುವರ್ಣಸೌಧದಲ್ಲಿ ಹಲ್ಲೆ ಯತ್ನ ಆರೋಪ: ಸಿಐಡಿ ವಿಚಾರಣೆ ಬಳಿಕ ಸಿಟಿ ರವಿ ಹೇಳಿದ್ದಿಷ್ಟು

ಏನಿದು ಪ್ರಕರಣ

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ಪರಿಷತ್‌ನಲ್ಲಿ ಅಮಿತ್‌ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡೆಯವಾಗ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದರು.

ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ವಿರುದ್ಧ ಪರಿಷತ್​​ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಜನರ ಗುಂಪೊಂದು ಸಿಟಿ ರವಿ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದರು. ಅವಳಹೇಳನಕಾರಿ ಪದ ಬಳಕೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಸಿಟಿ ರವಿಯವರು ಶುಕ್ರವಾರ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Sat, 11 January 25