ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ; ಆಸ್ಪತ್ರೆಗೆ ಕೆ.ಜೆ. ಜಾರ್ಜ್ ಭೇಟಿ

ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನೂರಾರು ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಡೆಂಗ್ಯೂ ರೋಗಿಗಳು ಚಿಕಿತ್ಸೆಗೆ ಆಗಮಿಸಿದ್ದಾರೆ. ಒಳ ರೋಗಿಗಳ ವಾರ್ಡ್ ಸಂಪೂರ್ಣ ಭರ್ತಿಯಾಗಿದೆ. ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ ಹಿನ್ನೆಲೆ DHO ಸೇರಿದಂತೆ ವೈದ್ಯರ ಜೊತೆ ಕೆ.ಜೆ ಜಾರ್ಜ್ ಸಭೆ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ; ಆಸ್ಪತ್ರೆಗೆ ಕೆ.ಜೆ. ಜಾರ್ಜ್ ಭೇಟಿ
ಡೆಂಗ್ಯೂ
Follow us
| Updated By: ಆಯೇಷಾ ಬಾನು

Updated on:Jun 19, 2024 | 1:20 PM

ಚಿಕ್ಕಮಗಳೂರು, ಜೂನ್.19: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಡೆಂಗ್ಯೂ (Dengue) ಕೇಸ್​ಗಳು ಉಲ್ಬಣಗೊಂಡಿವೆ. ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನೂರಾರು ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಡೆಂಗ್ಯೂ ರೋಗಿಗಳು ಚಿಕಿತ್ಸೆಗೆ ಆಗಮಿಸಿದ್ದಾರೆ. ಒಳ ರೋಗಿಗಳ ವಾರ್ಡ್ ಸಂಪೂರ್ಣ ಭರ್ತಿಯಾಗಿದೆ.

ಇದೇ ಮೊದಲ ಬಾರಿಗೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಿ ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ ಹಿನ್ನೆಲೆ DHO ಸೇರಿದಂತೆ ವೈದ್ಯರು, ಶಾಸಕರ ಜೊತೆ ಕೆ.ಜೆ ಜಾರ್ಜ್ ಸಭೆ ನಡೆಸಿದ್ದಾರೆ.

ಕಳೆದ 15 ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಒಟ್ಟು ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಓರ್ವ ವ್ಯಕ್ತಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಜನವರಿಯಿಂದ ಜೂ.16ರ ವರೆಗೆ 2 ಸಾವಿರ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದವು. ಆದರೆ ಪ್ರಸಕ್ತ ಸಾಲಿನಲ್ಲಿ 4,885 ಮಂದಿಯಲ್ಲಿ ಡೆಂಗ್ಯೂ ಪಾಸಿಟಿವ್‌ ವರದಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ಬಾರಿ ದುಪ್ಪಟ್ಟು ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: ರೇಣುಕಾಸ್ವಾಮಿ ಮರಣೋತ್ತರ ವರದಿ ತಿರುಚಲು ಹಣ ಆಮಿಷ: ಈ ವಿಚಾರ ತಿಳಿದಿಲ್ಲ ಎಂದ ಗುಂಡೂರಾವ್​

ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಈಗ ಡೆಂಗ್ಯೂ ಕೇಸ್​​ ಸ್ವಲ್ಪ ಇಳಿಮುಖವಾಗುತ್ತಿದೆ. ಕಡಿಮೆ ಮಾಡುವ ನಿಟ್ಟಿನಲ್ಲಿ ವೈದ್ಯರು ಕ್ರಮಕೈಗೊಳ್ಳುತ್ತಾರೆ. ಡಿಸಿ, ಡಿಹೆಚ್.ಓ ಬಳಿ ಮಾಹಿತಿ ಪಡೆದಿದ್ದೇನೆ. ನೀರು ಸ್ಟಾಕ್ ಮಾಡಿಕೊಳ್ಳುವುದರಿಂದ ಸೊಳ್ಳೆ ಹೆಚ್ಚುತ್ತವೆ. ನೀರು ಸ್ಟಾಕ್ ಮಾಡಿಕೊಳ್ಳದಂತೆ ಮಾಹಿತಿ ನೀಡಲಾಗಿದೆ. ಜಿಲ್ಲೆಯಾದ್ಯಂತ ಡೆಂಗ್ಯೂ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಭೇಟಿ ಬಳಿಕ ಕೆ.ಜೆ ಜಾರ್ಜ್ ತಿಳಿಸಿದರು.

ಮಳೆಗಾಲದಲ್ಲಿ ಸೊಳ್ಳೆಗಳ ಪ್ರಮಾಣ ಏರಿಕೆಯಾಗುತ್ತಿದ್ದಂತೆ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂವಿನಂತಹ ಕಾಯಿಲೆಗಳು ಹೆಚ್ಚುತ್ತವೆ. ಡೆಂಗ್ಯೂ ಕಾಣಿಸಿದಾಗ ಪ್ಲೇಟ್ಲೇಟ್‌ ಸಂಖ್ಯೆ ಕ್ಷೀಣಿಸುವುದು ಸಹಜ. ಅಂತಹ ಸಮಯದಲ್ಲಿ ಪ್ಲೇಟ್ಲೇಟ್‌ ಸಂಖ್ಯೆ ವೃದ್ಧಿಯಾಗದೇ ಇದ್ದರೆ ಜೀವಕ್ಕೂ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ.

ಡೆಂಗ್ಯೂ ರೋಗಿಗಳು ದೇಹದಲ್ಲಿ ಸಾಕಷ್ಟು ನೀರಿನಾಂಶ ಇರುವಂತೆ ನೋಡಿಕೊಳ್ಳುವುದು ಮುಖ್ಯವಾಗುತ್ತದೆ. ಡೆಂಗ್ಯೂ ಜ್ವರದ ಸಮಯದಲ್ಲಿ ಜ್ವರ, ಬೆವರುವಿಕೆ ಮತ್ತು ಸಂಭಾವ್ಯ ವಾಂತಿ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:30 pm, Wed, 19 June 24

ತಾಜಾ ಸುದ್ದಿ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ